ಕುಡ್ಪಿ ವಾಸುದೇವ ಶೆಣೈ

#ಇತರೆ

ಗೆಳೆತನದ ಅಳತೆ

0

ಅದನ್ನು ಅಳೆಯಬಹುದೇ? ಅದು ಒಂದು ಫೌಂಟನ್ ಪೇನಿಗಿಂತ ಉದ್ದವಿಲ್ಲವೆನ್ನುವವರಿವರು. ರಂಗಪ್ಪನೂ ವಾಸುವೂ ಗೆಳೆಯರು. ಅವರ ಗೆಳೆತನವೆಂದರೆ ಊರಲ್ಲೆಲ್ಲ ಹೆಸರಾದುದು. ಇಬ್ಬರೂ ದಿನದ ಇಪ್ಪತ್ತನಾಲ್ಕು ತಾಸುಗಳಲ್ಲಿಯೂ ಒಟ್ಟಿಗೆ ಇರುವರು. ಒಂದು ದಿನ ವಾಸುವಿಗೆ ರಂಗಪ್ಪನ ಮನೆಯಲ್ಲಿ ಊಟವಾದರೆ, ಮತ್ತೊಂದು ದಿನ ರಂಗಪ್ಪನಿಗೆ ವಾಸುವಿನ ಮನೆಯಲ್ಲಿ. ಇವರ ಸ್ನೇಹವು ಊರಲ್ಲಿ ನಿಜಕ್ಕೂ ಗಾದೆಯ ಮಾತಾಗಿ ಹೋಗಿದೆ. ಒಂದು ದಿನ […]

#ಇತರೆ

ನಿಮ್ಮ ಕುರಿತು ಅಭಿಪ್ರಾಯ

0

ಸಾಯಂಕಾಲ ಮದರಾಸಿನಿಂದ ಬಂದ ಮೈಲ್ ಬಂಡಿಯು ಕಾಸರಗೋಡು ನಿಲ್ದಾಣದಲ್ಲಿ ನಿಲ್ಲುತ್ತಲೇ ಅದನ್ನು ಹತ್ತಿದ ಕೆಲವು ಪ್ರಯಾಣಿಕರಲ್ಲಿ ಅಚುತನೂ ಒಬ್ಬ. ಅಚ್ಯುತನೆಂದರೆ – ಮಾತಿನ ಮಲ್ಲ. ಅವನಿಗೆ ಪರಿಚಿತರನ್ನು ಕಂಡರೆ ಮಾತ್ರ ಮಾತು ಬರುವುದಲ್ಲ – ಅಪರಿಚಿತರನ್ನು ಕಂಡರೂ ಆಷಾಢ ಮಾಸದ ಮಳೆಯಂತೆ ಎಡೆಬಿಡದೆ ಮಾತಾಡುವವನೇ! ಮಾತಾಡುವಾಗ, ಆ ಸಂಭಾಷಣೆಯಲ್ಲಿ ಬರುವ ವ್ಯಕ್ತಿಗಳನ್ನು ಟೀಕಿಸುವನು: ಬಾರದ ವ್ಯಕ್ತಿಗಳನ್ನು […]

#ಇತರೆ

ಮೈ ಝುಮ್ಮಾಗುವ ಸುಳ್ಳು

0

ರಘುವೀರನು ನನ್ನ ಗೆಳೆಯ, ನಮಗೆ ಪರಿಚಯವಾದುದು ಮೊದಲು ಲೇಖನಿಯಿಂದ, ಅವನು ಸಂಪಾದಕನು. ನಾನು, ‘ಸಂಪಾದಕ’ರೆಂಬವರನ್ನು ಪ್ರೀತಿಯಿಂದ ನೋಡುವವನು. “ಹೃದಯರಂಜನ” ಪತ್ರಿಕೆಯನ್ನು ರಘುವೀರನು ಆರಂಭಿಸಿದ ಮೇಲೆ ನಮ್ಮ ಪರಿಚಯವೂ ಫಕ್ಕನೆ ಉಂಟಾಗಿ, ಕೆಲವೇ ಕಾಲದಲ್ಲಿ ಬಲವಾಯಿತು. ಈಗ ರಘುವೀರನು ‘ಸಂಪಾದಕ’ನಲ್ಲ; “ಭೂತಪೂರ್ವ….”ವಾಗಿದ್ದಾನೆ. ಅವನ “ಹೃದಯರಂಜನ”ವು ಹೃದಯಭೇದಕವೆನಿಸುವಂತೆ ಹುಟ್ಟಿದ ದಿನವೇ ಸತ್ತಿತೆಂಬುದು ದುಖಃಪೂರ್ಣವಾದ ‘ಬಹಿರಂಗ ರಹಸ್ಯ.’ ನಿಂತು ಹೋಗಲು […]

#ಇತರೆ

ಮದುವೆಯ ಏಜಂಟ

0

ವಿಮಾ ಏಜಂಟರಿಗಿಂತ ಎರಡು ಮಾತುಗಳನ್ನು ಹೆಚ್ಚಾಗಿ ಮಾತಾಡಿ, ಆಡಿದ ಸುಳ್ಳನ್ನು ಸತ್ಯವೆಂದೇ ಹಟ ವಿಡಿದು ವಾದಿಸುವ ಏಜಂಟರಾರೂ ಇರುವರಾದರೆ- ಅವರೇ ಇವರು ಮದುವೆಯ ಏಜಂಟರು. ಅಷ್ಟೇ ಅಲ್ಲ, ವಿಮಾ ಏಜಂಟರು ತಿಳಿಯದ ಒಂದೆರಡು ಚಿಕ್ಕ ಆಟಗಳನ್ನು ಈ ಏಜಂಟರು ಅರಿತಿರುವರು. ರಾಮಚಂದ್ರನಾಯ್ಕರು ತಮ್ಮ ಹೆಂಡತಿಯ ಅಕಾಲ ನಿಧನವನ್ನು ಚಿಂತಿಸುತ್ತ ಈ ಐವತ್ತನೆ ವಯಸ್ಸಿನಲ್ಲಿ ತನಗೆ ಮತ್ತೊಂದು […]