ಪು ತಿ ನರಸಿಂಹಾಚಾರ್

ಇರುಳು-ಚಂದ್ರೋದಯ

ಬುವಿಯ ಚಾಪೆಯ ತೆರದಿ ಸುತ್ತಿ ಹೊತ್ತೊಯ್ವಂತೆ ಕತ್ತಲೆಹಿರಣ್ಯಾಕ್ಷ ಮುತ್ತಿಬಹ ನಕ್ಷತ್ರ- ಮೊತ್ತಮಂ ಧಿಕ್ಕರಿಸಿ ಬರುತಿಹನು ಗೆಲವಾಗಿ ದಿವಕಶಾಂತಿಯ ತಂದು. ಹೊಸರಾಜ್ಯವಾಯ್ತಿಂದು ಇದರ ಸತ್ಯವೆ ಬೇರೆ, ಶಾಸನವೆ ಬೇರೆ. […]

ಮೂಡುತಿಹನದೊ

ಬಾನ ಬಣ್ಣ ಮಾಗಿಸಿ ಶಶಿ ಮೂಡುತಿಹನದೋ. ಸಂಜೆ ಹೂವನೆರಚಿ ಸಾರೆ ನಮ್ರವಾಗಿ ತಾರೆ ತೋರೆ ಶರದದಿರುಳ ಕರವ ಪಿಡಿದು ಏರುತಿಹನದೋ. ಉದ್ಯಾನದ ಪುಷ್ಪಬೃಂದ ಲಜ್ಜೆಯ ಸಿರಿ ಹೊಂದಿದಂದ […]

ಇಗೊ ಸಂಜೆ, ಸಖಿ

ಇಗೊ ಸಂಜೆ, ಸಖಿ, ಚೆಂಬೊಗರಿಂ ರಂಗೇರಿಹ ಜಲದಾಬ್ಜಮುಖಿ ತುಸ ತುಟಿತೆರೆದು ಶಿಶುಚಂದ್ರನ ನಗೆ ನಗುವಳು ಸ್ವಾಗತವೊರೆದು; ನಿನ್ನು ಸಿ‌ರ್‌ ಕಂಪ ಕೊಳ್ಳಲು ಎಲರ್ ತರುತಿಹನೀ ಬನದಲರಿಂಪ; ಓ […]

ತಮೋಭೀತಿ

ತವಸಿ ಶಿವ ಪಾರ್ವತಿಯ ನಸು ನೋಡುತೆವೆ ಮುಚ್ಚಿ- ದಂದದೂಳು ಸಂಜೆಯಚ್ಚರಿ ಹೊನ್ನ ಬೆಳಕು ಮಲೆ ಕಣಿವೆ ಬನ ಸರಸಿಯೆಲ್ಲವೂ ತೇಜಗೊಳೆ ತುಸಕಾಲ ಬೆಳಗುತಳಿಯಿತು, ಆಯ್ತು ನಸುಕು. ಕತ್ತಲೆಲ್ಲೆಡೆ […]

ಜೀರುಂಡೆಯ ಮೇಳ

ಕದ್ದಿಂಗಳಿನಿರುಳು: ಬುವಿ ಬಾನಂತರವೆಲ್ಲವ ಕತ್ತಲು ತುಂಬಿರಲು, ದೆಸೆಯಳಿಯದೆ ನಿಲಲು ತಮಕಿವು ಸೇತುವೊ ಎನೆ ದಟ್ಟೈಸಿರೆ ತಾರೆಗಳು, ಭೂತ ಭವಿಷ್ಯವನು ಮುಸುಕಿನೊಳವಿತಿಟ್ಟಂತಿಳೆ ಹೊದೆದಿರೆ ಮೌನವನು, ಸೆರೆಬಿದ್ದಿಹ ಕಾಲ ಹುಯಿಲಿಡುವುದೊ […]

ಚಿಕುಹೂ

ಚಿಕುಹೂ ಚಿಕುಹೂ ಚಿಕುಹೂ- ಸನ್ನೆಯವೊಲು ಮುಹುರ್ಮುುಹು ಆರೆಚ್ಚರಕೀ ತುತ್ತುರಿ ಬಾನೊಳು ಮೊಳಗುತ್ತಿದೆ? ಎನ್ನ ಕಿವಿಯೊಳೀ ಸವಿ ದನಿ ಸಿಂಪಿಸುತಿದೆ ಸೊದೆಸೀರ್ಪನಿ ವಿಸ್ಮೃತಿಗೈದಿರುವಾತ್ಮವ- ನುಜ್ಜೀವಿಪ ತೆರದೆ. ದಿವಮರೆತಪ್ಸರೆ ಎಚ್ಚರೆ […]

ಸ೦ಧ್ಯಾ

ದಿವಸಾವಸಾನದೊಳು ಬುವಿಯ ನುತಿಗೆಚ್ಚರಿಸೆ ‘ಮುನಸ್ಸೀನ’ನಂದದೊಳು ಅಸ್ತಗಿರಿಯ ರವಿಯಡರಿ ರಂಜಿಸಿಹ- ನವನ ಪಾವನ ಕಾಂತಿ ಅವತರಿಸಿ ಹರಸುತಿದ ಅಂಜುವಿಳೆಯ. ಇನಿಯನೊಲಿಯಲಿ ಎಂದೊ ಮನದಾಸೆ ಸಲಲೆಂದೊ- ಎನಗರಿಯದಾ ಹರಕೆ-ಮುಗಿಲ ಕರೆಯ […]

ಕವಿ

ಯೋಜನಗಳಾಚೆಯೊಳು ಎಲ್ಲಿಯೋ ಜನಿಯಾಂತು ಮಿಂಚಿನಣುಗಳನೇರಿ ಸಕಲ ದಿಙ್ಮಂಡಲವ ಸಂಚರಿಸುತಂತರದಿ ಮೌನದಿಂ ಮಿಡಿಯುತಿಹ ಸೋಜಿಗದ ಗೀತವನ್ನು ಹಿಡಿದು, ಉಜ್ಜ್ವಲಗೊಳಿಸಿ, ಶ್ರೋತೃಪಥವೈದಿಸುವ ಯಂತ್ರದೊಲು,-ಹೇ ಕವಿಯೆ, ಬಾಳುಬಾಳುಗಳಾಚೆ ಬ್ರಹ್ಮಾಂಡ ಹೃದಯಾಂತ- ರಾಳದೊಳು […]

ಋತದ ಮೊದಲ ಕಣಸು

ಸೃಷ್ಟಿ ಸ್ವಯಂಪ್ರಭೆಯಗುಹೆಯ ದಾರಿಗನಾಗಿ ಚೇತನಂ ನಡೆಯುತಿರೆ, ವಿಸ್ಮಯಂಗೊಳಿಸಿತಿದ ನೂತನದ ನಸುಕೊಂದು ಒಂದೆಡೆಯೊಳ್ ; ಅದರಿಂದ ಸ್ಪಷ್ಟ ಮಂದದಕಾಯ್ತು ಅಹಮಸ್ಮಿ ಎಂಬರಿವು. ನಾನುಂಟು’ ಎನ್ನುತಿದು ಹಿಗ್ಗಿ ಕಣ್ಮನ ತೆರೆಯ- […]