ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ...