
ಎಲ್ಲಾ ಜನರ ಹೆಸರಿನಲ್ಲಿ….
ಪ್ರಜಾಪ್ರಭುತ್ವವೆಂದ ಮೇಲೆ ಜನಗಳ ಪಾತ್ರ ಅಪಾರವಾದುದು. ಜನಗಳ ತೊಡಗುವಿಕೆಯಿಂದಲೇ ಪ್ರಜಾಪ್ರಭುತ್ವದ ಸಾರ್ಥಕತೆ. ಈ ದೃಷ್ಟಿಯಿಂದಲೇ ಅಬ್ರಹಾಂ ಲಿಂಕನ್ ಪ್ರಜಾಪ್ರಭುತ್ವವನ್ನು ವಿವರಿಸುವಾಗ ‘ಜನರಿಂದ ಜನರಿಗೋಸ್ಕರ ರಚಿತವಾದ ಜನಗಳ ಸರ್ಕಾರ’ ಎಂದು ಹೇಳಿದ್ದಾರೆ. ಅಂದರೆ ಸರ್ಕಾರ ಜನರಿಗಾಗಿ, ಜನರೇ ಸರ್ಕಾರವಾಗುವ ಪ್ರಕ್ರಿಯೆ ಪ್ರಜಾಪ್ರಭುತ್ವ. ಇದು ಬೆಟ್ಟದಂಥ ಆದರ್ಶವೆಂಬುದು ನಿಜವಾದರೂ, ಇಂಥ ಆಶಯವನ್ನು ಸಾಕಾರಗೊಳಿಸುವ ಪ್ರಯತ್ನಗಳು ಪ್ರಜಾಪ್ರಭುತ್ವದ ಪ್ರಥಮ ಹೆಜ್ಜೆಗಳಾಗುತ್ತವೆ. […]