ಅರಿವಿಂಗೆ ಸಿಕ್ಕದುದ ನೆನೆಯಲಮ್ಮಬಹುದೆ ಅಯ್ಯಾ ನೆನಹಿಂಗೆ ಬಾರದುದ ಕಾಂಬುದು ಹುಸಿ ಮುಟ್ಟಿ ಪೂಜಿಸುವ ಮಾತು ಮುನ್ನವೇ ದೂರ ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ನಿಲ್ಲು ಮಾಣು [ನೆನೆಯಲಮ್ಮಬಹುದೆ-ಧ್ಯಾನಿಸಲು ಯತ್ನಿಸಬಹುದೆ-ಕಾಂಬುದು-ಕಾಣುವುದು, ಮಾಣು-ಬಿಡು] ಘಟ್ಟಿವಾಳಯ್ಯನ ವಚನ. ಈ...
ಅತಿಮಥನವೆಂಬ ಯೋಗವೆನ್ನ ಗತಿಗೆಡಿಸಿತ್ತಯ್ಯ ದಿತಿಗೆಟ್ಟೆ ನಾನು ಅದರಿಂದ ಅತಿಶಯದ ತಾತ್ಪರ್ಯ ಗುರುಭಕ್ತಿಯನರಿಯದೆ ದಿತಿಗೆಟ್ಟೆನಯ್ಯ ತಾತ್ಪರ್ಯವನರಿಯದೆ ತವಕಿಸುವ ಮನವನು ನಿಮ್ಮ ಕಡೆಗೆ ತೆಗೆದುಕೊಂಡು ಅತಿಶಯದ ತಾತ್ಪರ್ಯ ಗುರುಭಕ್ತಿಯ ಈಯಯ್ಯಾ ಕಪಿಲಸಿದ್ಧಮಲ್ಲಿಕಾರ್ಜುನಾ [ಅತಿಮಥನ- ಅತಿಯಾದ ವಿಶ್ಲೇಷಣೆ, ದಿತಿಗೆಟ್ಟೆ-ಧೃತಿಗೆಟ್ಟೆ,...
ಅಗಲಿದ ನಲ್ಲನ ಕನಸಿನಲಪ್ಪಿ ಸುಖಿಯಾದಿರವ್ವಾ ಕಂಡ ಕನಸು ದಿಟವಾದಡೆ ಅವ ನಮ್ಮ ನಲ್ಲನವ್ವಾ ಮನಸುಳ್ಳವರು ನೀವು ಪುಣ್ಯಗೈದಿರವ್ವಾ ಮಹಾಲಿಂಗ ಗಜೇಶ್ವರನನಗಲಿದಡೆ ನಿದ್ರೆಯೆಮಗಿಲ್ಲ ಕನಸಿನ್ನೆಲ್ಲಿ ಬಹುದವ್ವಾ [ದಿಟವಾದಡೆ-ನಿಜವಾದರೆ] ಉರಿಲಿಂಗದೇವನ ವಚನ. ತನ್ನನ್ನು ಹೆಣ್ಣು ಎಂದು ಭಾವಿಸಿಕೊಂಡು...