Home / ಕಥೆ / ಸಣ್ಣ ಕಥೆ

ಸಣ್ಣ ಕಥೆ

ಇಸರಪ್ಪನನ್ನು ಅಯ್ಯಾ ಅವರು ಬರಹೇಳಿದ ಸುದ್ದಿ ಒಬ್ಬರಿಂದ ಇನ್ನೊಬ್ಬರಿಗೆ, ಅವರಿಂದ ಮತ್ತೊಬ್ಬರಿಗೆ ಹೀಗೆ ಆ ಪುಟ್ಟ ಊರಲ್ಲಿ ಬಹಳ ಬೇಗ ಎಲ್ಲರಿಗೂ ತಿಳಿದು ಹೋಯಿತು. ನಾಲ್ಕು ದಿನಾ ರಜಾ ಹಾಕಿ ಊರಿಗೆ ಹೋಗಿ ಆಗ ತಾನೆ ನೇರವಾಗಿ ಕಾಲೇಜಿಗೆ ಬಂದ ಮಲ್ಲಪ್...

ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ ಕೈಸವರಿದ ಮತ್ತೆ ಭುಜವನ್ನು ಅಲುಗಾಡಿಸಿ ಕೆನ್ನೆ ಸವರಿದ. ಇದೆಲ್ಲಾ ಬಹಿರಂಗವಾಗಿ ಎಲ್ಲರೆದುರ...

ನನ್ನ ಚಿಕ್ಕತಾಯಿ ನಮ್ಮಿಬ್ಬರನ್ನು ತನ್ನ ಮನೆಯಲ್ಲಿ ಬಿಟ್ಟು ಈ ಲೋಕದಿಂದ ದೂರಳಾದಳು. ಅವಳು ಸ್ಪರ್ಗಕ್ಕೆ ಹೋದಳೋ ನರಕಕ್ಕೆ ಬಿದ್ದಳೋ ನನ್ನಿಂದ ಹೇಳಲು ಸಾಧ್ಯವಿಲ್ಲ. ಸ್ವರ್‍ಗದ ಸೋಪಾನಗಳು ಸಾವಿರವಾದರೆ, ಅವನ್ನೆಲ್ಲಾ ಹತ್ತುವಷ್ಟು ದೇಹಶಕ್ತಿ ಅವಳಲ್...

ಮಂಗಳೂರಿಗೆ ಹೋದನೆಂದರೆ ರಾಮರಾಯನು ಹೊತ್ತಾರೆ ಕದ್ರೆಗೆ ಹೋಗದೆ ಇಲ್ಲ. ಬೆಟ್ಟದಾಚೆಯಿಂದ ಮೂಡಿಬರುವ ಸೂರ್ಯ, ಆ ಎಳೆ ಬಿಸಿಲಲ್ಲಿ ನಗುವ ಬೆಟ್ಟ, ಅದರ ಬುಡದಲ್ಲಿ ತಿಳಿನೀರಿಂದ ಕಂಗೊಳಿಸುವ ಕೆರೆ, ಕೆಳಗೆ ದೇವಸ್ಥಾನ, ಇವುಗಳ ಸೊಬಗನ್ನು ಮನದಣಿಯೆ ಕಂಡು ...

೨೬-೫-೧೯೨೮ ಕಾಲ ಕಳೆಯುವುದೊಂದು ದೊಡ್ಡ ಭಾರ, ಅದನ್ನು ಹೊರುವ ಕಷ್ಟವನ್ನು ಬರೆಯಲಾರೆ. ಮಾತಾಡಲು ಯಾರೂ ಇಲ್ಲ. ಓದಲು ನನಗೆ ಬೇಕಾದ ಪುಸ್ತಕವಿಲ್ಲ. ಇದ್ದರೂ ಹೇಗೆ ತಾನೆ ಓದಲಿ ? ‘ಅವನ’ ಮನೆಯಿಂದ ಬರುವಾಗ ನನ್ನ ಪುಸ್ತಕವನ್ನು ಮರೆತು ಬಂದಿರುವೆನು. ಪ...

“Life is as tedious as a twice-told tale” ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು ತುಸು ಹೊರಬೀಸಾಗಿದ್ದು ಅದನ್ನು ವಾಯು ಸಂಚಾರಕ್ಕೆ ಅನುಕೂಲವಾಗಿರುವಂ...

ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ ಕೋಟೆಯ ಬಂಡೆಯ ಮೇಲೆ ಕುಳಿತ ಸರ್ವದಾ ನೆತ್ತಿ ಮೈಮನ ಸವರಿದ ಗಾಳಿಯಿಂ...

“ಇಡ್ಲಿ, ಚಟ್ನಿ, ಇಡ್ಲಿ!” ಎಂತ ಕೂಗಿಕೊಂಡು ಬೈಸಿಕಲ್ ಮೇಲೆ ಬಂದವನು ಹೊರಟು ಹೋಗಬೇಕಾಗಿತ್ತು, ತನ್ನ ಎಡ ಹಿಡಿದು; ಆದರೆ ಅವನು ಹಾಗೆ ಹೋಗಲಿಲ್ಲ. ದಿಲೇರಖಾನ್ ನಿಂತಿದ್ದ ಕಡೆಗೆ ಬಂದ. ದಿಲೇರ್ ಹೇಳಿದ- “ಖಬರ್‍ದಾರ್ ಇದ್ಲೀಖಾನ...

ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ ಸಂದರ್ಭಗಳು ಬರುತ್ತಿದ್ದದ್ದು ತೀರಾ ಅಪರೂಪ. ...

“ಹಾಗಿದ್ದರೆ, ಪಾಪವೆಂದರೇನು ಗುರುಗಳೇ?” ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!...

1...1617181920...48

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....