Home / ಕಥೆ / ಸಣ್ಣ ಕಥೆ

ಸಣ್ಣ ಕಥೆ

ಆ ರಸ್ತೆಯ ಕೊನೆಯಲ್ಲಿರುವ ಮರ. ಏನಿಲ್ಲಾ ಅಂದ್ರೂ ಒಂದು ತಲೆಮಾರು ದಾಟಿರಬಹುದು. ಅದರ ಕೆಳಗೆ ನಿಂತರೆ ಆಕಾಶ ಕಾಣುತ್ತಿರಲಿಲ್ಲ. ತನ್ನನ್ನು ತಾನೆ ಸಿಂಗರಿಸಿಕೊಂಡಂತಿರುವ ಮರದ ಟೊಂಗೆಗಳಿಗೆ ಆವರಿಸಿರುವ ಎಲೆಗಳು ತನ್ನನ್ನು ಮೀರಿ ಮೇಲಿರುವುದು ಕಾಣದಷ್...

ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು ರೂಪಾಯಿ ಮಾತ್ರ ಉಳಿದಿದೆ. ಇದರಲ್ಲಿ ಮನೆಗೆ ಹಿಂತಿರ...

ಏಳು ವರ್ಷದ ಮಗನ ಕೈಯಿಂದ ಚಿತೆಗೆ ಕೊಡಿಸಿದ ಬೆಂಕಿ ಸರಿಯಾಗಿ ಹತ್ತಿಕೊಳ್ಳಲು ನಾಕುಶಿಯನ್ನು ತೋರಿಸುತ್ತಿತ್ತು. ತೊಯ್ದ ಕಟ್ಟಿಗೆಯ ಕೊಳ್ಳಿ ಮತ್ತೆ ಮತ್ತೆ ತುಪ್ಪವನ್ನು ಬೇಡುತ್ತಿತ್ತು. ಸಂಬಂಧಪಟ್ಟವರು ಅದರ ಮೇಲೆ ಉಪ್ಪು ತುಪ್ಪವನ್ನು ಎರಚಿದರು. ಆಗ...

ಸಿನಿಮಾ ಜನರಿಂದ ಹಣ ಕೀಳುವುದೂ ಒಂದು ಯಾಗ ಮಾಡಿದಂತೆಯೆ. ಎಷ್ಟೋ ಸಲ ಅಡ್ವಾನ್ಸ್ ಕೊಟ್ಟಷ್ಟೇ ಗ್ಯಾರಂಟಿ. ನನ್ನ ಪುಣ್ಯ, ನನಗೆ ಸಿಕ್ಕವರು ತೀರಾ ಚಿಲ್ಲರೆಗಳೇನಲ್ಲ. ಚಿಲ್ಲರೆ ಕೊಟ್ಟವರೂ ಅಲ್ಲ. ದೊಡ್ಡ ಬ್ಯಾನರ್‌ನವರು ದೊಡ್ಡದಾಗಿ ಹಣ ಕೊಡದಿದ್ದರೂ (...

ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ ನಡುವಿನ ಸಂಬಂಧ ಬಹಳ ಚೆನ್ನಾಗಿದ್ದವು...

ನರಸಿಂಗ ಅನ್ನುವುದು ಗೋಪಾಲಕೃಷ್ಣ ಅಡ್ಯಂತಾಯರು ಪ್ರೀತಿ ದ್ವೇಷಗಳಿಂದ ಸಾಕಿದ ನಾಯಿಯ ಹೆಸರು. ಚೆನ್ನಾಗಿ ಮುದ್ದುಮಾಡುತ್ತಿದ್ದ ಅವರೇ ಕೆಲವೊಮ್ಮೆ ಅದಕ್ಕೆ ಕಣ್ಣು ಮೋರೆಯೆನ್ನದೆ ಹೊಡೆಯುತ್ತಿದ್ದರು. ಇನ್ನು ಕೆಲವೊಮ್ಮೆ ಮನೆಯಲ್ಲಿ ಇಂಥದೊಂದು ಪ್ರಾಣಿ...

ಆರು ಗಂಟೇಕ್ಕ ಚಾದಂಗಡಿ ಬಳಗ ಕಾಲಿಡ್ತಾನಽ ಕ್ಯಾಷಿಯರ್ ಬಾಬು ಬಂದು ಸಣ್ಣಗ ನಡಗೋ ದನಿಯಾಗ ಹೇಳಿದ ಮಾತು ಕೇಳ್ತಾನ ಎದಿ ಬಡಬಡಿಸಾಕ ಹತ್ತಿತ್ತು. ಭಯಕ್ಕ ಅಂವ ಬೆಂವತಿದ್ದ. ಮಾತು ತಡವರಿಸಿ ಬರತಿದ್ದವು. ಮೊದಲಿಗೆ ನೋಡ್ತಾನಽ ಏನೋ ಅವಘಡ ಆಗೇದ ಅನಿಸಿತ್ತ...

ನಾ ಈಗ ಒಂದೇ ಕತೆ ಹೇಳೀಕೆ ಹೊರಟೊಳೆ. ಕತೆ ಅಂದ್ರೆ ನಾ ಕಟ್ಟಿದ್ದಲ್ಲ. ಕೇಳಿದ್ದ್‌. ಈ ಕತೆನ ನಾಯಕ ಈಗ ಬೊದ್ಕಿತ್ಲೆ. ಕತೆ ಹೇಳ್ದೊವೂ ಬೊದ್ಕಿತ್ಲೆ. ಆದ್ರೆ ಕತೆಯಾಗಿ ಇಬ್ರೂ ಬೊದುಕ್ಯೊಳೋ. ನಮ್ಮೊದ್‌ ಮಲೆನಾಡ್‌. ಕೊಡಗ್‌ಗೆ ಅಂಟಿಕಂಡೇ ಇರುವ ಊರ್‌....

ಮನೆ ಮಗಳು “ಸೋನಿ” ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು. ದಕ್ಷಿಣ ಕನ್ನಡದವರು ‘ಬಸುರಿ ಊಟ’, ಉತ್ತರ ಕರ್ನಾಟಕದವರ ‘ಉಡಿ ತುಂಬ...

ಕಮಲಪುರದ ಬಂದರ್ ಸ್ಥಳವು ವಸಂತ ಋತುವಿನ ಸಂಧ್ಯಾತಪದಿಂದ ಸುಖ ಹೊಂದುತ್ತಲಿತ್ತು. ವೀರಪುರದಿಂದ ಬಂದು ದಂಡೆಯಲ್ಲಿ ನಿಂತಿದ್ದ. ಒಂದೆರಡು ದೋಣಿಗಳು ನೀರಿನ ಸಣ್ಣ ಅಲೆಗಳ ಮೇಲೆ ಕುಣಿಯುತ್ತಲಿದ್ದವು. ದೋಣಿಗಾರನು ಈಳಿಗೆಯನ್ನು ಕಾಲಿಂದ ಒತ್ತಿ ಹಿಡಿದು, ...

1...2223242526...48

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....