Home / ಕಥೆ / ಕಾದಂಬರಿ

ಕಾದಂಬರಿ

ಛೇ, ನಾನೆಂತ ದ್ರೋಹಿ. ಸಹಾಯ ಹಸ್ತ ಚಾಚಿದವಳನ್ನೇ ನೆನೆಸಿಕೊಳ್ಳದಷ್ಟು ಪಾಪಿಯಾಗಿಬಿಟ್ಟೆನಲ್ಲ. ಒಂದರ್ಥದಲ್ಲಿ ಆಕೆ ಸಿಡುಕ್ಕಿದ್ದು ಸರಿಯೆ. ವ್ಯಾಪಾರ ಪ್ರಾರಂಭ ಮಾಡಿದ್ದಲ್ಲಿಂದ ಆಕೆಯನ್ನು ಭೇಟಿ ಮಾಡಿದ್ದೇ ನೆನಪಿಗೆ ಬತಾ ಇಲ್ಲ. ಅದರರ್ಥ ಅವಳನ್ನ ಮ...

ಛೇ, ಇಷ್ಟಕೆಲ್ಲ ಆಕಾಶವೇ ತಲೆ ಮೇಲೆ ಬಿದ್ದಂತೆ ಮಾತಾಡಿದರೆ ಹೇಗೆ? ಮನಸ್ಸಿನಲ್ಲಿ ಹುದುಗಿರುವ ಚಿಂತೆ ಅಂತಿಮವಾಗಿ ಚಿತೆವರೆಗೆ ಕೊಂಡೊಯ್ಯುತ್ತದೆಯೇ ವಿನಃ ಒಳ್ಳೆಯ ದಾರಿಗಲ್ಲ. ಮನಸ್ಸಿನಲ್ಲಿ ಚಿಂತೆ ಆವರಿಸಿಕೊಂಡರೆ ಕಾಣುವುದು ಕೇವಲ ಶೂನ್ಯವೇ ಹೊರತು...

ಆವಗಷ್ಟೇ ಸುರಿದು ಹೋದ ಮಳೆಯ ಅಬ್ಬರ ಸಂಪೂರ್ಣ ಕ್ಷೀಣಗೊಂಡು ಜನರು ನಿಟ್ಟುಸಿರು ಬಿಡುವಷ್ಟರೊಳಗೆ ಆಗಸದಲ್ಲಿ ಒಮ್ಮಿಂದೊಮ್ಮೆಲೆ ಮತ್ತೆ ದಟ್ಟ ಕಾರ್ಮೋಡ ಕವಿದುಕೊಳ್ಳಲು ಪ್ರಾರಂಭಿಸಿ ಮಳೆಯ ಮುತ್ತಿನ ಹನಿಗಳು ಭುವಿಗೆ ಮುತ್ತಿಕ್ಕಲು ಪ್ರಾರಂಭಿಸಿತು. ಮ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...