Home / ಕಥೆ / ಜನಪದ

ಜನಪದ

ಬಯಲಾಟದ ಒಂದು ಮೇಳದಲ್ಲಿ ಸಂಕಣ್ಣ, ಹುಣಸಿಕ್ಕ ಹಿಮ್ಮೇಳದ ಹಾಡುಗಾರರಾಗಿದ್ದರು. ಸಂಕಣ್ಣ ಅಸಾಧ್ಯ ಸಿಂಬಳ ಬುರಕನಾಗಿದ್ದರೆ, ಹುಣಸಿಕ್ಕ ತಡೆಯಿಲ್ಲದೆ ತುರಿಸುವ ಹುರುಕಲಿಯಾಗಿದ್ದನು. ಸಿಂಬಳ ಹಣಿಕೆ ಹಾಕಿದಾಗೊಮ್ಮೆ ಸಂಕಣ್ಣ ಸರಕ್ಕನೇ ಮೂಗೇರಿಸಿ, ಅಂಗಿ...

ಹಳ್ಳಿಯಲ್ಲಿ ಒಕ್ಕಲಿಗರ ಮನೆ. ದನಗಳ ಕೊಟ್ಟಿಗೆಯಲ್ಲಿಯೇ ಅವರು ಬಚ್ಚಲಮಾಡಿ ಕೊಂಡಿದ್ದರು. ಎಮ್ಮೆಯ ಕರು ಒಂದು ದಿನ ನೀರಡಿಸಿ, ಕಟ್ಟಿಹಾಕಿದ ಕಣ್ಣಿಯನ್ನು ಹರಿದುಕೊಂಡು ಬಚ್ಚಲುಮನೆಗೆ ನೀರು ಕುಡಿಯಲು ಹೊಕ್ಕಿತು. ಜಳಕದ ಹಂಡೆಯಲ್ಲಿ ಬಾಯಿಹಾಕಿತು. ಚಿಕ...

ನನ್ನೀಸಾಹೇಬ ಹಾಗೂ ಬಡೇಮಾ ಎಂಬ ಇಬ್ಬರು ಗಂಡಹೆಂಡಿರಿದ್ದರು. ನನ್ನೀ ಸಾಹೇಬನು ಹೆಸರಿಗೆ ತಕ್ಕಂತೆ ತೆಳ್ಳಗಿನ ಕುಳ್ಳನೇ ಆಗಿದ್ದನು. ಅದರಂತೆ ಬಡೇಮಾ ಕೂಡ ಹೆಸರಿಗೆ ಒಪ್ಪುವ ಹಾಗೆ ಮೇಲೆತ್ತರದ ದುಂಡಮೈಯವಳೇ ಆಗಿದ್ದಳು. ಅಂಥ ಇಜ್ಜೋಡಿನ ಸಂಸಾರವೂ ಸಾಗಿ...

ಗಂಡನು ಶಿವರಾತ್ರಿಯ ದಿನ ಉಪವಾಸ ಮಾಡುವನೆಂದು ತಿಳಿದು ಹೆಂಡತಿ ತಾನೂ ಉಪವಾಸ ಮಾಡುವುದನ್ನು ನಿರ್ಧರಿಸಿದಳು. ಉಪವಾಸವೆಂದರೂ ಹಳ್ಳಿಯಲ್ಲಿ ಗೆಣಸು, ಬಾಳೆಹಣ್ಣು, ಕಜ್ಜೂರಿ, ಸೇಂಗಾ ತಿನ್ನುವುದು ವಾಡಿಕೆಯಾಗಿದೆ. ಆ ಪ್ರಕಾರ ಗಂಡ ಹೆಂಡಿರು ಸಾಯಂಕಾಲದಲ...

ಹಳ್ಳಿಯಲ್ಲಿ ಚಿಕ್ಕ ತಕ್ಕಡಿ ಅಂಗಡಿ ಒಂದು. ಬೆಲ್ಲ –  ಇಂಗು – ಜೀರಿಗೆ, ಚುರಮರಿ – ಪುಠಾಣಿ ಮಾರುವ ಕಿರಾಣಿ ಅಂಗಡಿ. ಹಳ್ಳಿಯೊಳಗಿನ ಗಿರಾಕಿಗಳು ಉಡಿಯಲ್ಲಿ ಜೋಳವನ್ನೋ ಕುಸುಬೆಯನ್ನೋ ತಂದು ಅಂಗಡಿಕಾರನ ಮಾಪಿನಲ್ಲಿ ಅಳೆದುಹಾಕಿ...

ಗಂಡ ಹೆಂಡಿರಿಬ್ಬರು. ಒಂದುದಿನ ಹೆಂಡತಿ ಮಾಲಾದಿ ಮಾಡಿ ಮೂರು ಉಂಡಿ ಕಟ್ಟಿಟ್ಟಳು. “ಮಾಲಾದಿ ನಾ ಮಾಡೀನು. ಎರಡು ನನಗೆ ಒಂದು ನಿನಗ” ಎಂದಳು ಹೆಂಡತಿ. “ಇಲ್ಲ. ನಾ ಮಾಡಿಸಂದಾಂವ. ನನಗೆ ಎರಡು ಉಂಡಿ ನಿನಗೆ ಒಂದು ಉಂಡಿ” ಎ...

ಕುರಿಕಾಯುವ ಜೊತೆಗಾರರಾದ ಕಾಮಣ್ಣ ಭೀಮಣ್ಣ ಅವರಿಬ್ಬರು ತಮ್ಮ ಕುರಿ ಹಿಂಡಿನೊಡನೆ ಅಡವಿಯಲ್ಲಿಯೇ ಅಡ್ಡಾಡುವರು; ಅಡವಿಯಲ್ಲಿಯೇ ವಾಸಿಸುವರು. ತಮ್ಮಷ್ಟು ಜಾಣರಾದವರು ಇನ್ನಾರೂ ಇಲ್ಲವೆಂದೇ ಅವರು ಬಗೆದಿದ್ದರು. ಅಂಥ ಜಾಣರಾಗಿದ್ದರೂ ಅವರಿಬ್ಬರೂ ಬಗೆಹರಿ...

ಶಿವರಾತ್ರಿಯ ಮರುದಿನ ತೀವ್ರ ಅಡಿಗೆ ಮಾಡಿ, ಬೆಳಗಾಗುವುದರಲ್ಲಿ ಊಟದ ಸಿದ್ಧತೆ ನಡೆಯಿಸುವುದು ವಾಡಿಕೆ. ಲಿಂಗಾಯತರಾದವರು ಮನೆದೇವರನ್ನು ಪೂಜಿಸಿದ ಬಳಿಕ, ಒಬ್ಬ ಜಂಗಮನನ್ನು ಕರೆತಂದು ಉಣ್ಣಿಸಿವ ತರ್ವಾಯವೇ ಮನೆಯವರ ಊಟವಾಗುವದು. ಹಳ್ಳಿಯಲ್ಲಿ ಅಂದು ಜ...

ಮೂರಂತಸ್ತಿನ ಮನೆಯ ಎಲ್ಲಕ್ಕೂ ಮೇಲಿನ ಅಂತಸ್ತಿನಲ್ಲಿ ಡೊಳ್ಳು ಹೊಟ್ಟೆಯ ಆ ಮನೆಯೊಡೆಯನು, ಚಿಕ್ಕ ಬಾಗಿಲಿನ ಒಂದು ಕದವನ್ನು ತೆರೆದು ಏನೋ ಓದುತ್ತ ಕುಳಿತಿದ್ದನು. ಅತ್ತಕಡೆಯಿಂದ ಹಾಯ್ದು ಹೋಗುವ ಒಬ್ಬ ಹುಡುಗನು ಆತನನ್ನು ನೋಡುತ್ತ ಕೆಲಹೊತ್ತು ನಿಂತು...

ಚೋಟಪ್ಪನೆಂಬುವನು ಹೆಸರಿಗೆ ತಕ್ಕಂತೆ ಚೋಟುದ್ದವಾಗಿಯೇ ಇದ್ದನು. ಅವನು ದಿನಾಲು ಎತ್ತುಗಳನ್ನು ಬಿಟ್ಟುಕೊಂಡು ಹೊಲಕ್ಕೆ ಹೋಗುವನು. ಅಲ್ಲಿ ಗಳೆ ಹೊಡೆಯುವ ಕೆಲಸ ಮುಗಿಸಿ ಸಂಜೆಗೆ ಮರಳಿ ಮನೆಗೆ ಬರುವನು. ಒಂದು ದಿನ ಚೋಟಪ್ಪನು ಗಳೆ ಹೊಡೆಯುತ್ತಿರುವಾಗ ...

123...8

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....