ಬೆಳಗಾಂ- ಧಾರವಾಡ- ಜಮಖಂಡಿ- ಮುಂಬಯಿ- ಬೆಳಗಾಂ- ಅರೇಬಿಯಾ- ಯೂರೋಪ್- ಬೆಳಗಾಂ- ಬೆಂಗಳೂರು ಅರೆ, ಇದು ಯಾವ ಸಂಚಾರೀ ಮಾರ್ಗ? ವಿಚಿತ್ರವಾದರೂ  – ಇದು ನನ್ನ ಬಾಳಿನ ಸಂಚಾರದ ಮಾರ್ಗ. 1960-70ರ ಸುಮಾರಿಗೆ ಕೊಲ್ಲಿದೇಶಗಳ (ಗಲ್ಫ್ ಕಂಟ್ರೀಸ್) ಹ...

ನಾವು ಇಪ್ಪತ್ತಾರು ಮಂದಿ ಈಗ ಬಂಟವಾಳ ಮೈಸೂರು ರಾಜ್ಯ ಹೆದ್ದಾರಿಯ ಗುಂಡಿಗಳನ್ನು ತಪ್ಪಿಸುತ್ತಾ ದೇವರಗುಂಡಿಗೆ ಬೈಸಿಕಲ್ಲು ತುಳಿಯುತ್ತಿದ್ದೆವು. ಚಕ್ರಗಳ ಮೇಲೆ ಚಕ್ರವರ್ತಿಗಳು.ಬೈಕುಗಳಲ್ಲಿ ಪಯಣಿಸುವವರನ್ನು ಹಾಗೆಂದು ಕರೆಯುತ್ತಿದ್ದವರು ಅತ್ರಿ ಬು...

“ಕಲ್ಲುಕೋಳಿ ಕೂಗ್ಯಾವೋ, ಬೆಂಕಿ ಮಳೆ ಸುರಿದೀತೋ ….. ..?” ಹೀಗೆ ಕಾಲಜ್ಞಾನ ಭವಿಷ್ಯ ನುಡಿದಿತ್ತು. ಈಗ್ಗೆ 50 ವರ್ಷಗಳ ಹಿಂದೆ ಕಾಲಜ್ಞಾನವೆಲ್ಲ ಬೊಗಳೆ ಎಂಬಂತಹ ಮಾತುಗಳನ್ನು ಆಡಿದ್ದೆವು. ಆದರೆ ಕಾಲಜ್ಞಾನದ ಅಂತರಂಗದ ಅರ್ಥವನ...

ಪ್ರಿಯ ಸಖಿ, ಪರಿಪೂರ್ಣ ಕವಿತೆಯೊಂದರ ನಿಜವಾದ ಸಾರ್ಥಕತೆ ಇರುವುದೆಲ್ಲಿ? ವಿಮರ್ಶಕನ ಟೀಕೆಯಲ್ಲೋ? ಸಹೃದಯನ ಮೆಚ್ಚುಗೆಯಲ್ಲೋ? ಕವಿಯ ಆತ್ಮ ಸಂತೃಪ್ತಿಯಲ್ಲೋ?  ಎಲ್ಲಾ ಒಂದಕ್ಕಿಂತಾ ಒಂದು ಮಹತ್ವವಾದದ್ದೇ ! ಉತ್ತಮ ಕವನವೊಂದಕ್ಕೆ ವಿಮರ್ಶಕನ ಟೀಕೆಯೂ ಬ...

ಪ್ರಿಯ ಸಖಿ, ಯಾವ ತಂಟೆ ತಕರಾರುಗಳಿಲ್ಲದೇ ಎಲ್ಲವನ್ನೂ ಒಪ್ಪಿಕೊಂಡು ಸದ್ದಿಲ್ಲದೇ ಜೀವನವನ್ನು ಸಾಗಿಸುವವರು ಹಲವಾರು ಮಂದಿ. ಆದರೆ ತಮ್ಮ ಸಿದ್ಧಾಂತಗಳಿಗಾಗಿ, ವ್ಯವಸ್ಥೆಯೆದುರು ಸದಾ ಬಂಡೆದ್ದು ಹೋರಾಟವನ್ನೇ ಬದುಕಾಗಿಸಿಕೊಂಡವರು ಕೆಲಮಂದಿ. ಆದರೆ ಕವ...

ಪ್ರಿಯ ಸಖಿ, ಬಾಹ್ಯಶಕ್ತಿಗಳು ಪ್ರಬಲ ವ್ಯಕ್ತಿತ್ವಗಳನ್ನು ತಮ್ಮದಾಗಿಸಿಕೊಳ್ಳಲು ಹೆಣಗುವಾಗಲೆಲ್ಲಾ ನನಗೆ ನೆನಪಾಗುವುದು ಕವಿ ಕೆ. ಎಸ್. ನಿಸಾರ್ ಅಹಮದ್ ಅವರ ‘ನಿಮ್ಮೊಡನಿದ್ದೂ ನಿಮ್ಮಂತಾಗದೇ’ ಎಂಬ ಕವನದ ಸಾಲುಗಳು. ನಿಮ್ಮೊಡನಿದ್ದೂ ನಿಮ್ಮಂತಾಗದೆ ...

ಪ್ರಿಯ ಸಖಿ, ಇತ್ತೀಚಿನ ಮಾಧ್ಯಮಗಳು ಎಷ್ಟು ಶಕ್ತಿಯುತವಾಗಿವೆಯೆಂದರೆ ಅವು ಪ್ರಪಂಚವನ್ನು ಹತ್ತಿರವಾಗಿಸಿವೆ ಎನ್ನುತ್ತಾರೆ. ಇದು ವ್ಯವಹಾರದ ಮಾತಾಯ್ತು. ಆದರೆ ಮಾನವನ ಮನಸ್ಸು? ಮನಸ್ಸುಗಳುಹತ್ತಿರವಾಗಿವೆಯೆ ? ಕವಿ ಜಿ. ಎಸ್. ಶಿವರುದ್ರಪ್ಪನವರು ವಿ...

ಪ್ರಿಯ ಸಖಿ, ಮೊನ್ನೆ ಕೆ. ಎಸ್. ನರಸಿಂಹಸ್ವಾಮಿಗಳ ‘ಸಣ್ಣ ಸಂಗತಿ’ ಎಂಬ ಒಂದು ಸುನೀತ (ಸಾನೆಟ್)ವನ್ನು ಓದುತ್ತಿದ್ದೆ.. ಕವನದ ಹೆಸರೇ ಸೂಚಿಸುವಂತೆ ಕವಿ ಅಲ್ಲಿ ಹಿಡಿದಿಟ್ಟ ಚಿತ್ರ ಅತ್ಯಂತ ಸಣ್ಣ ಸಂಗತಿ. ಆದರೆ ಅದರಲ್ಲಿರುವ ಧ್ವನಿ ಮಾತ್ರ ಮಹತ್ತರ ...

ಪ್ರಿಯ ಸಖಿ, ಹೇಳಿದರೆ ಹಾಳಾಗುವುದೋ ಈ ಅನುಭವದ ಸವಿಯು ಹೇಳದಿರೆ ತಾಳಲಾರನೋ ಕವಿಯು! ಕುವೆಂಪು ಅವರು ‘ಉಭಯ ಸಂಕಟ’ ಕವನದ ಈ ಸಾಲುಗಳು ಎಷ್ಟೊಂದು ಮಾರ್ಮಿಕ ವಾಗಿವೆಯಲ್ಲವೇ?’ ಎದೆಯೊಳಗೆ ಅವ್ಯಕ್ತವಾಗಿರುವ ಭಾವಗಳು ತಕ್ಕ ಮೂರ್ತರೂಪ ಪಡೆಯುವುದು ಎಂತಾ ...

ಇಂಡಿಯಾದ ಭೂಪಟದಲ್ಲಿ ದುರ್ಬೀನು ಹಾಕಿಕೊಂಡು ಹುಡುಕಿದರೂ ಕಾಣದಿರುವ ಕಟ್ಟಿಗೇನಹಳ್ಳಿ ಗ್ರಾಮಕ್ಕೆ ಎಪ್ಪತ್ತರ ದಶಕದಲ್ಲಿ ಇವನು ಬಂದು ತಳ ಊರಿದ. ನೀರಿನಂತೆ ಜನರ ರಕ್ತ ಹೀರಿದ ಹಿಟ್ಲರ್ ನೆಲದಿಂದ ಬಂದವನಾದರೂ ಇವನು ಗಾಂಧಿಯ ನೆರಳಿನಲ್ಲಿದ್ದ. ಏಳು ಅಡ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...