ಇಂತೊರೆದ ಕುಡಿಕೆ ತಾಂ ಪಿಂತೊಂದು ಜನ್ಮದಲಿ ಉಸಿರಿಡುತ ಕೂರ್‍ಮೆಯಿಂ ಬಾಳ್ದುದಿರಬಹುದು; ಎನ್ನ ತುಟಿ ಸೋಂಕಿದಾ ತಣ್ಪುಳ್ಳ ನುಣ್ದುಟಿಯ ದೆನಿಸು ಮುತ್ತನು ಕೊಟ್ಟು, ಎನಿಸ ಕೊಂಡಿತ್ತೋ! *****...

ಯರಲವವೆಂಬುದು ಸತ್ಯ ಯರಲವವೆಂಬುದೆ ನಿತ್ಯ ಉಳಿದದ್ದೆಲ್ಲವು ಮಿಥ್ಯ ಹರಿ ಶಂಭೋಶಂಕರ ಅ ಆ ಇ ಈ ಮಿಥ್ಯ ಎ ಏ ಐಯೂ ಮಿಥ್ಯ ಋ ೠ ಎಂಬುದು ಮಿಥ್ಯ ಒ ಓ ಔವೂ ಮಿಥ್ಯ ಅಂ ಅಃ ಭಾರೀ ಮಿಥ್ಯ ಯರಲವವೆಂಬುದೆ ಸತ್ಯ ಉಳಿದದ್ದೆಲ್ಲವು ಮಿಥ್ಯ ಹರಿ ಶಂಭೋಶಂಕರ ಕ ಖ ಗ ...

ಬಾನ ಬಣ್ಣ ಮಾಗಿಸಿ ಶಶಿ ಮೂಡುತಿಹನದೋ. ಸಂಜೆ ಹೂವನೆರಚಿ ಸಾರೆ ನಮ್ರವಾಗಿ ತಾರೆ ತೋರೆ ಶರದದಿರುಳ ಕರವ ಪಿಡಿದು ಏರುತಿಹನದೋ. ಉದ್ಯಾನದ ಪುಷ್ಪಬೃಂದ ಲಜ್ಜೆಯ ಸಿರಿ ಹೊಂದಿದಂದ ತೆಳು ಬೆಳಕಿನ ಮೇಲುದುವನು ಧರಿಸುವಂತಿದೋ. ತಮವನುಳಿದುವೆನುವ ತೆರದಿ ನಿಡಿ...

ಬರೀ ಮಾತುಗಳು ಇವು ಕೇವಲ ಅರ್ಥಕಳಕೊಂಡ ಶಬ್ದಗಳು ಬೀಜ ನೆಲದಲ್ಲಿ ಹೂತು ಪಸೆಯೊಡೆದು ಮೊಳಕೆ ಕಟ್ಟಿ ಬೇರು ಬಿಡುವತನಕ ಇವು ಅರ್ಥವಿಲ್ಲದ ಕೇವಲ ಮಾತುಗಳು. ಬರೀ ಮಾತುಗಳು ಇವು ಉಗುಳಿನ ವಿಷಕ್ಕೆ ನಂಜೇರಿದ ಮಹಾತ್ಮನ ಶಾಂತಿ ಮಂತ್ರದ ಬೀಜ ಮೊಳಕೆಯೊಡೆಯಲಿಲ...

ಶ್ರೀಮದಮಲ ವಚಃಪರಿಧಿಯಾ ದೀ ಮಹಾಕೃತಿಯಿಂದೊಲವು ಮಿಗೆ ವ್ಯೋಮದಲಿ ವಿಧು ವೇಡಿಸಿದ ಪರಿವೇಷದಿಂದೆರೆವ| ಕೌಮುದಿಯೊಲೀ ಕನ್ನಡದೊಳಾ ಸೀಮಮೆನೆ ನೆಲಸಿಹುದಿದಂ ನೆಗ ಳ್ದಾ ಮಹಾಕವಿ ನಿನಗೆ ಕನಿಗಳ ಕವಿಯೆ ವಂದಿಸುವೆ ||೧|| ಮೊದಲ ಮಗನಾ ಶುಕನು ಭಾಗವ ತದ ಪುರಾ...

ಕನ್ನಡಿಗರು ನಾವು ಕನ್ನಡಿಗರು; ಕರ್ಣನಿಗೂ ಕಡಿಮೆ ಇರದ ದಾನಶೂರರು ನಾವು ಕನ್ನಡಿಗರು! ಧೀಮಂತರು ನಾವು ಕನ್ನಡಿಗರು ಕಾವೇರಿಯ ಉಳಿಸಿಕೊಳದ ಹೋದ ಶಕ್ತಿ ಗಳಿಸಿಕೊಳದ ಮಾನ ಹೋದರೂನು ಮಾನ ಉಳಿದುದಂತೆ ನಟಿಸುತಿರುವ ಧೀಮಂತರು ನಾವು ಕನ್ನಡಿಗರು! ಸ್ನೇಹಪರರ...

ಸಿರಿಗೆರೆಯ ಸಿರಿದೇವಿ ಬನಶಂಕರಿ ಬನಗಿರಿಯ ಶಿವ ಶಿವಶಂಕರಿ ವರೇದೆ ತಾಯೆ ವೇದಾಂಭಿಕೆ ಪುಷ್ಪಾಂಕಿತ ಶೋಭಿತೆ ಸರ್‍ವೇಶ್ವರಿ ವಿಶ್ವನುತೆ ವಿಶ್ವಾಂಭರಿ ವಿಶ್ವೇಶ್ವರಿ ಮಹೋನ್ನತೆ ಮಹಾದೇವಿ ಮಾಹೇಶ್ವರಿ ಮುತ್ತೆ ದೆ ಸಿರಿತನದ ತಾಯೆ ಮುತ್ಯಾಲಮ್ಮ ಆನಂದದಾಯ...

ಹಠಾತ್ತನೆರಗಿತು ಹಕ್ಕಿ; ಬಲಿಷ್ಠ ರೆಕ್ಕೆಯ ಬಿಚ್ಚಿ ಬಡಿವ ಪಟಪಟಸದ್ದು. ಬೆಚ್ಚಿದ ಹುಡುಗಿಯನ್ನ ಕೊಕ್ಕಿಂದ ಹಿಡಿದೆತ್ತಿ, ಮುದ್ದಿಸಿತು ಅಸಹಾಯ ಎದೆಗೆ ಎದೆಯನೊತ್ತಿ ಸವರುತ್ತ ಅವಳ ತೊಡೆಬೆತ್ತಲೆಯ ಕಪ್ಪಾದ ಜಾಲಪಾದ. ಗರಿತೆರೆದ ಇಂಥ ಅದ್ಭುತವ ಸಡಲುತ್...

ಲಕ್ಷ್ಮೇಶ್ವರದ ರಾಮಲಿಂಗ ದೇವಾಲಯದ- ಲೊಂದು ಸಾವಿರಲಿಂಗ ಮೂಡಿರಲು ಪಿಂಡದಲಿ ರಾಮೇಶ್ವರವೆ ಆಗುತದು ಭರತಖಂಡದಲಿ ಮೆರೆಯಬಹುದಿತ್ತೆಂದು ಜನರೊಂದು ವಿಸ್ಮಯದ ಮಾತ ನುಡಿವರು. ಅಕಟ! ಕೋಳಿ ಸೂರ್‍ಯೋದಯದ ಕಾಲಕ್ಕೆ ಕೂಗಿತ್ತು. ಆ ಶಿಲಾಖಂಡದಲಿ ಮೂಡಲಿಹ ಕೊನೆ...

ಮ್ಯಾಲ ತುಂತುರ ಹನಿಯು ತಂತಿ ವಾದ್ಯದ ಮುಗುಲು ಬನತುಂಬ ಮಳೆಬಿಲ್ಲು ಬಿತ್ತಿಬಾರ ಹನಿಹನಿಯು ಬಿದ್ದಲ್ಲಿ ಸವಿಮುದ್ದು ಇದ್ದಲ್ಲಿ ಭೂರಮಣಿ ಮೈಬಿಚ್ಚಿ ಹೂವು ತಾರ ಏಳು ಬಣ್ಣದ ಮುಗುಲು ಸಂಜಿ ಶೀತಲ ನವಿಲು ಗಗನ ಮಲ್ಲಿಗಿ ಸುರಿದು ಕೈಯತಾರ ಬಾಳಿ ತೋಳನು ಚಾ...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...

ಪೆಟ್ರೋಲ್ ವಾಸ್ನೆ ಮೂಗಿಗೆ “ಗಫ್” ಅಂತಾ ಬಡೀತು! ಐದಾರು ಕ್ಯಾನ್‌ಗಟ್ಟಲೆ ಮನೆ ಸುತ್ತಮುತ್ತ ಉಗ್ಗಿ ಬಾಗಿಲು ಕಿಟಕಿ ಸಂಧಿನಿಂದ ಧುಭುಧುಭು – ಪೆಟ್ರೋಲ್ ಸುರಿವಿದ ತೀರಿಗೆ ಅದು ಹಳ್ಳ ಕೊಳ್ಳವಾಗಿ ಮನೆಯೊಳಕ್ಕೆ ಜಗ್ಗಿ ಹರಿದು ಬಂತು! ಮಲಗಿದ್ದ ಹಾಸಿಗೆ, ದಿಂಬು, ಹೊ...

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...