ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ ನೆಪವಾಗಿ ಸತ್ತದ್ದು ದ್ಯಾಮಣ್ಣನಿಗೆ ಹೃದಯಾಘಾತವಾದಂ...

ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ, ಧರ್ಮಸಂರಕ...

ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : “ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?” ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ ಕಪ್ಪಿಗೆ ಬಸಿದುಕೋಳ್ಳುತ್ತಿದ್ದರು....

ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ ಬದಿಯಲ್ಲಿದ್ದ ಬೂದಿರಾಶಿಯ ಪಕ್ಕದಿಂದ ಗರಗಸದ ಹುಡಿಯನ್ನು ಕ...

ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ ಕರ್ಫ್ಯೂ ತೆಗೆದವರೆ. ಆದ್ರೂವೆ ಎಲ್ಲೆಡೆ ಸದ್ದಡಗೈತೆ. ಯಾರ ಮನೆಬಾಗಿಲುಗಳ...

ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ… ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ… ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ ಬೆಂಕಿಯಲ್ಲಿಟ್ಟಂಗೆ. ಬಿಸ್ಲೇನು… ಜನ್ರೂ ...

ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು ವಿವರಿಸಿ ಹೇಳುತ್ತಿದ್ದರು. ಅದು ಭಾರತದಲ್ಲಿ ಅಂಚೆ ಇಲಾಖೆಯಲ್ಲಿ ನೌ...

ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: “ರಾಧೆ, ಈ ಮುಖ ಹೀಗೆ ಪ್ರಪು...

ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ ಸಿದ್ಧತೆ ಷುರು ಆಗಿವೆ. ಬ್ಲೀಚಿಂಗ್, ಫೇಷಿಯಲ್, ಹೊಸ ಸೀರೆಗೆ ಫಾ...

ಪಟ್ಟಣದ ರಾಜರಸ್ತೆಗೆ ತಾಗಿದ ಸಮತಟ್ಟಾದ ಆ ಸ್ಥಳದ ಮೂಲೆಯಲ್ಲಿ ನಿಂತುಕೊಂಡು ಆ ಕಪ್ಪು ಹುಡುಗ ರಸ್ತೆಯನ್ನು ದಿಟ್ಟಿಸುತ್ತಿದ್ದ. ಅವನ ಕಣ್ಣೆಲ್ಲಾ ಸಾಮಿಲ್ಲಿನಿಂದ ಖರೀದಿಸಿ ತಲೆಹೂರೆಯಾಗಿ ರೀಪು ಕಟ್ಟಿಗೆಗಳನ್ನು ಒಯ್ಯುತ್ತಿರುವ ಆ ಹೆಂಗಸಿನ ಮೇಲೆಯೇ ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...