“ಅಶ್ವಿನಿ, ಪದೇ ಪದೇ ನನ್ನ ನಿರ್ಧಾರನ ಬದಲಿಸೋಕೆ ಪ್ರಯತ್ನಿಸಬೇಡ. ನೀನು ಕರ್ಕೊಂಡು ಬರಲಿಲ್ಲ ಅಂತ ನಿನ್ನ ನಿಷ್ಟೂರ ಮಾಡೋರು ಯಾರಿದ್ದಾರೆ? ‘ಕೊಟ್ಟ ಹೆಣ್ಣು ಕುಲಕ್ಕೆ ಹೊರಗೆ’ ಅಂತ ಗೊತ್ತಿಲ್ವಾ, ನೀನೇನೂ ಒಬ್ಳೆ ಮಗಳಲ್ಲ, ನಿಮ್ಮಪ್ಪನ ಜವಾಬ...

ಅಳಿಯನಿಗೆ ಮನೆಯಳಿಯ ಮಾಡಿಕೊಂಡಿದ್ದರು ; ಮಗಳಿಗೆ ಮನೆಯಾಗೇ ಇಟ್ಟುಕೊಂಡಿದ್ದರು. ಅಳಿಯ ದನಕರುಗಳನ್ನು ಕಾಯಬೇಕು. ಮನೆಯಲ್ಲಿ ತಂಗುಳಬಂಗುಳ ಉಣ್ಣಬೇಕು – ಈ ರೀತಿ ವ್ಯವಸ್ಥೆಮಾಡಿದ್ದರು. ಅಳಿಯನೆಂದರೆ ದನಕಾಯುವ ಹುಡುಗ ಅಂತ ನಿಷ್ಕಾಳಜಿ ಮಾಡುತ್...

ಹಿರಿಪುಢಾರಿಯ ಸಂಪರ್ಕಕ್ಕೆ ಮರಿ ಪುಢಾರಿಯು ಬಂದದ್ದು ಕಿರಿಪುಢಾರಿಯ ಮೂಲಕ. ಮರಿಪುಢಾರಿಯು ಕಾಲೇಜಲ್ಲಿ ಒಬ್ಬ ನಾಯಕನಾಗಿದ್ದನು. ಒಂದೆರಡು ಹೋರಾಟಗಳಲ್ಲಿ ನೇರವಾಗಿ ಭಾಗಿಯಾಗಿದ್ದನು. ಬೇಕೆಂದೇ ಬೈಕಿನ ಸೈಲೆನ್ಸರ್‍ ಹಾಳು ಮಾಡಿ ಬೈಕು ಓಡಿಸುವುದು, ಭಯ...

ಒಂದೂರಿನಲ್ಲಿ ಒಬ್ಬ ರಾಜ, ಅವನಿಗೊಬ್ಬ ಪ್ರಧಾನಿ ಹಾಗೂ ಒಬ್ಬ ಸೇವಕ ಇದ್ದರು. ಸೇವಕನು ತನ್ನನ್ನು ಪ್ರಧಾನಿಯೊಡನೆ ಹೋಲಿಸಿಕೊಂಡು ಹಲವು ಬಗೆಯಾಗಿ ಚಿಂತಿಸುತ್ತಿದ್ದನು – “ತನ್ನ ಸಂಬಳ ಹತ್ತೆಂಟು ರೂಪಾಯಿ ಮಾತ್ರ. ಪ್ರಧಾನಿಯ ಸಂಬಳ ಬೊಗಸ...

ಅವಳ ಪರಿಚಯವೇನೂ ಇತ್ತೀಚಿನದಲ್ಲ ನಾನು ಮೊಟ್ಟ ಮೊದಲು ಕೆಲಸಕ್ಕೆ ಸೇರಿದ್ದೆ. ಅವಳಿದ್ದ ಆಫೀಸಿನಲ್ಲಿ ನಾನು ಕೆಲಸಕ್ಕೆ ಜಾಯಿನ್ ಆಗಿ ಹದಿನೈದು ದಿನವಾಗಿತ್ತೇನೋ, ಅಷ್ಟರಲ್ಲಿ ಬೆಂಗಳೂರಿಗೆ ವರ್ಗವಾಗಿತ್ತು. ಅವಳಿಗೆ ಅಲ್ಲಿಗೇ ವರ್ಗ ಆಗುತ್ತೆ ಅಂತ ಗೊತ...

ಹೀಗೆ ಒಂದೂರಲ್ಲಿ ತಾಯಿ ಮಗ ಇದ್ದರು. ತಾಯಿಗೆ ಸೊಸೆಯೂ ಬಂದಿದ್ದಳು. ವಾಡಿಕೆಯಂತೆ ಅತ್ತೆ ಸೊಸೆಯರಲ್ಲಿ ವಿರಸಕ್ಕಾರಂಭವಾಗಿ ಕದನವಾಗತೊಡಗಿದವು. ಕದನದ ಪರಿಣಾಮದಿಂದ ಕುನಸುಹುಟ್ಟಿಕೊಂಡಿತು ಪರಸ್ಪರರಲ್ಲಿ. ಎಂಥದೋ ಒಂದು ಉಪಾಯದಿಂದ ಅತ್ತೆಯನ್ನು ಇಲ್ಲದ...

ಕೊಡಗಿನ ಕೊನೆಯ ದೊರೆ ಚಿಕ್ಕವೀರನ ದಿವಾನ ಕುಂಟ ಬಸವನದು ವಿಶಿಷ್ಟ ವ್ಯಕ್ತಿತ್ತ್ವ. ಅವನಿಗೆ ತನ್ನ ಹಿನ್ನೆಲೆ ಗೊತ್ತಿರಲಿಲ್ಲ. ಅರಮನೆಯ ಚಾಕರಿ ಮಾಡಿಕೊಂಡಿದ್ದ ಅವನನ್ನು ಚಿಕ್ಕವೀರ ದಿವಾನಗಿರಿಗೆ ಏರಿಸಿ ಜಾತೀಯ ಮೇಲರಿಮೆಯಿಂದ ಬೀಗುತ್ತಿದ್ದ ಇತರ ದಿ...

ಸೆರಗಿನಿಂದ ಕೈ‌ಒರಸಿಕೊಂಡು ದಾರಿಯಲ್ಲಿ ಬರುತ್ತಿದ್ದ ನೀಲಜ್ಜಿಯನ್ನು ಕಂಡು ಸಂಗಮ್ಮ ಕೇಳಿದಳು – “ಎಲ್ಲಿಗೆ ಹೋಗಿದ್ದೆ ನೀಲಜ್ಜಿ ?” “ನಿಮ್ಮ ಮನೆಗೆ ಹೋಗಿದ್ದೆ. ಮುಕ್ಕು ಮಜ್ಜಿಗೆ ಸಿಕ್ಕಾವೆಂದು ?” “ಏನ...

“ಸತ್ಯವನ್ನೇ ಹೇಳುತ್ತೇನೆ. ಸತ್ಯವನ್ನಲ್ಲದೆ ಬೇರೇನೂ ಹೇಳುವುದಿಲ್ಲ” ಹೇಳಿಕೊಟ್ಟಂತೆ ನಾಲಗೆ ನುಡಿಯುತ್ತಿತ್ತು. ತಗ್ಗಿಸಿದ ತಲೆ ಮೇಲೆತ್ತಿರಲಿಲ್ಲ. ಭವಬಂಧನವ ಕಳಚಿದ ನಿರ್ಲಿಪ್ತತೆ ಅಲ್ಲಿತ್ತು. ಏನೋ ಕೇಳುತ್ತಿದ್ದಾರೆ. ಏನೋ ಉತ್ತರಿ...

ಒಂದೂರಾಗ ಅತ್ತಿಗಿ ನಾದಿನಿ ಇದ್ದು ನಾದಿನಿ ನೀರು ಹೊಯ್ಕೊಂಡಿದ್ದಳು. ಐದರಾಗ ಅಣ್ಣ ತಂಗೀಗಿ ಕರಕೊಂಡು ಬರಲಿಕ್ಕ ಹೋದ. ಕರಕೊಂಡೂ ಬಂದ. ಅಡವ್ಯಾಗ ಒಂದು ಬಾಳೆಗಿಡ ಇತ್ತು. ಅದರ ಬುಡಕ್ಕ ಅಣ್ಣ ತಂಗಿ ಮನಕೊಂಡರು. ತಂಗಿ ನಿದ್ಯಾಗ ಗುರ್ ಹೊಡೆದಳು, ಹೊಟ್ಯ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...