ಜೀನಹಂಕನಾದ ಶ್ರೀಮಂತನಿಗೆ ಒಬ್ಬಳೇ ಮಗಳಿದ್ದಳು. ಅವನು ಯುಕ್ತಿಪರಿಯುಕ್ತಿಗಳಿಂದ ಸಾಕಷ್ಟು ಗಳಿಸಿದ್ದನು. ಹಾಗೂ ಜಿಪುಣತನದಿಂದ ಖರ್ಚುಮಾಡಿ ಬೇಕಾದಷ್ಟು ಉಳಿಸಿದ್ದನು. ತಾನು ಸಂಗ್ರಹಿಸಿದ ಆಸ್ತಿಯನ್ನೆಲ್ಲ ಕಾಯ್ದುಕೊಂಡು ಹೋಗಬಲ್ಲ ವರ ಸಿಕ್ಕರೆ, ಅವನ...

ಒಂದೂರಲ್ಲಿ ತಾಯಿ ಮಗ ಇದ್ದರು. ಮಗನ ಹೆಂಡತಿಯೂ ಬಂದಿದ್ದಳು. ಸೊಸೆಯ ಕೈಯಿಂದ ಅಡಿಗೆ ಮಾಡಿಸುವಾಗ ಅತ್ತೆಯು ಹಿಟ್ಟು, ಬೇಳೆ, ಖಾರಗಳನ್ನಲ್ಲ ಲೆಕ್ಕಾಚಾರದಿಂದ ತೆಗೆದುಕೊಡುವಳು. ಅದರಿಂದ ಅಡಿಗೆ ಹಾಳಾಗುವುದಕ್ಕೆ ಅವಕಾಶವೇ ಇಲ್ಲವೆಂದು ಅತ್ತೆ ಬಗೆದ್ದಿ...

ಭೂಲೋಕದಿಂದ ತನ್ನ ಕಡೆಗೆ ಬಂದ ವಿಪುಲ ಅರ್ಜಿಗಳ ಒಟ್ಟಣೆಯನ್ನು ನೋಡಿ, ಅವುಗಳಿಗೆಲ್ಲ ಉತ್ತರ ಬರೆಯಿಸುತ್ತ ಕುಳಿತುಕೊಳ್ಳುವುದಕ್ಕಿಂತ ಸ್ವತಃ ಭೂಲೋಕಕ್ಕೆ ಹೋಗಿ, ಅಲ್ಲಿಯವರಿಗೆ ಬೇಕಾದ ಪರಿಹಾರವನ್ನು ಒದಗಿಸಿ ಬರುವುದು ಲೇಸೆಂದು ಬಗೆದು ಬ್ರಹ್ಮದೇವನು...

ಬಹುತರವಾಗಿ ಯಾವ ಅಮಲ್ದಾರರೂ ಕಾಲಿಡದ ಹಳ್ಳಿಯೆಂದರೆ ಕೊರಕಲಮಟ್ಟಿ. ಅಲ್ಲಿಗೊಮ್ಮೆ ಜಾಫರಖಾನ ಫೌಜದಾರ ಸಾಹೇಬರು ಬಂದುಹೋದರು. ಅಷ್ಟೇ ಅಲ್ಲ, ಒಂದು ರಾತ್ರಿ ಚಾವಡಿಯಲ್ಲಿ ಮುಕ್ಕಾಮು ಮಾಡಿದರು. ಏಳುಗೇಣು ಎತ್ತರದ ಕಪ್ಪು ಕುದುರೆಯನ್ನು ನೀಳಗಡ್ಡದ ಫೌಜದ...

ಮನುಷ್ಯನ ನಡವಳಿಕೆ ದರ್ಪಣ ಇದ್ದಂತೆ ಅವನು ಏನು ಕೊಡುತ್ತಾನೊ ಕನ್ನಡಿ ಅದೇ ತಾನೇ ಕೊಡುವುದು. ಕೆಟ್ಟ ಮುಖ ತೋರಿಸಿದರೆ ಕೆಟ್ಟಮುಖ ಕನ್ನಡಿಯಲ್ಲಿ ಕಾಣುತ್ತೆ. ಒಳ್ಳೆ ಮುಖ, ಸುಂದರವಾದ ಮುಖ ತೋರಿಸಿದರೆ ಅದೂ ಸುಂದರವಾಗೇ ತೋರಿಸುತ್ತೆ. ನಾವು ಎಲ್ಲರಲ್ಲ...

ಒಕ್ಕಲಿಗರೆಲ್ಲ ಸೀಗೆ ಹುಣ್ಣಿಮೆ ಹಾಗೂ ಎಳ್ಳು ಅಮಾಸಿಗೆ ಹೊಲದ ಲಕ್ಷ್ಮಿಗೆ ನೈವೇದ್ಯ ಕೊಂಡೊಯ್ಯುತ್ತಾರೆ. ಹೊಲವುಳ್ಳವರು ಹೊಲವಿಲ್ಲದವರನ್ನು ತಮ್ಮೊಡನೆ ಹೊಲಕ್ಕೆ ಕರೆದೊಯ್ದು ಊಟಮಾಡಿಸಿ ಕಳಿಸುವರು. ಅಮಾಸಿಗೆ ಉಳ್ಳಿಕ್ಕೆ ಕರೆಯದವರಾರು” ಎಂಬ ...

ಒಬ್ಬ ಒಕ್ಕಲಿಗನಿಗೆ ತಿಮ್ಮಣ್ಣನೆಂಬ ಒಬ್ಬ ಮಗ. ಬಿಂಬಾಲಿ ಎಂಬ ಮಗಳು ಇದ್ದರು. ಆ ಅಣ್ಣತಂಗಿಯರು ತಮ್ಮ ತೋಟದಲ್ಲಿ ಗೊಂಡೆ ಹೂವಿನ ಗಿಡಗಳನ್ನು ಎರಡು ಸಾಲಿನಲ್ಲಿ ಬೆಳೆಸಿದ್ದರು. ಅಣ್ಣನು ನೆಟ್ಟಗಿಡಗಳಲ್ಲಿ ಹೆಣ್ಣು ಹೂಗಳು, ತಂಗಿಯು ನೆಟ್ಟ ಗಿಡಗಳಲ್ಲಿ...

ಮಡಿಕೇರಿ ಕೋಟೆಯ ಕೆಳಗೆ ಅಗ್ರಹಾರ ಪ್ರದೇಶದಲ್ಲಿ ಸುಬ್ಬರಸಯ್ಯನೆಂಬ ಬ್ರಾಹ್ಮಣನೊಬ್ಬ ಪತ್ನಿ ರುಕ್ಮಿಣಿಯೊಡನೆ ವಾಸ ಮಾಡುತ್ತಿದ್ದ. ಅವನಿಗೆ ಪ್ರಾಯಕ್ಕೆ ಬಂದ ಇಬ್ಬರು ಗಂಡು ಮಕ್ಕಳಿದ್ದರು. ಸುಬ್ಬರಸಯ್ಯ ವೇದ, ಉಪನಿಷತ್ತು, ಗೀತೆ ಓದಿಕೊಂಡವನು. ಶಾಸ್...

ಸೂರ್ಯ ಮುಳುಗುವ ಹೊತ್ತು ಶಾಸಕ ಸೂರಪ್ಪ ಹತ್ತುಕೋಟಿಗೆ ಮಾರಾಟವಾದ ಬಿಸಿ ಬಿಸಿ ಸುದ್ದಿಯೊಂದು ಕಿವಿಯಿಂದ ಕಿವಿಗೆ ತೂರಿ, ಮನಸ್ಸಿಗೂ ಜಾರಿ ಭರತಪುರದಲ್ಲಿ ತಲ್ಲಣ ಸೃಷ್ಟಿಸಿತು. ಜನ ಸೇರಿ ಗುಂಪಾದಲ್ಲಿ ಈ ಸುದ್ದಿ ವಿಚಿತ್ರ ತಿರುವು ಪಡೆದುಕೊಳ್ಳುತ್ತ ...

ದಕ್ಷಿಣ ಕೊಡಗಿನ ಬ್ರಹ್ಮಗಿರಿ ಪರ್ವತ ಶ್ರೇಣಿಯಲ್ಲಿ ಜನಿಸುವ ಲಕ್ಷ್ಮಣತೀರ್ಥ ಒಂದು ಮೋಹಕವಾದ ನದಿ. ಅದರ ಬಲ ತಟದಲ್ಲೊಂದು ಪುಟ್ಟ ಗುಡಿಸಲಿತ್ತು. ಅದರಲ್ಲಿ ಅಪ್ಪ ಮಗಳು ವಾಸಿಸುತ್ತಿದ್ದರು. ರಾಮಪಣಿಕ್ಕರ್‌ ಮತ್ತು ಇಚ್ಚಿರೆ ಮೋಳು. ಅದು ಬಿಟ್ಟರೆ ಒಂ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...