ಮಕರ ಸಂಕ್ರಮಣದ ಕಾಲಕ್ಕೆ ಸೊಲ್ಲಾಪುರದಲ್ಲಿ ಸಿದ್ಧರಾಮೇಶ್ವರನ ಜಾತ್ರೆ ಆಗುತ್ತದೆ. ಆ ಕಾಲಕ್ಕೆ ಸುತ್ತಲಿನ ಹತ್ತಿಪ್ಪತ್ತು ಹರದಾರಿಗಳಿಂದ ಜನರು ಬಂದು ಸೇರುತ್ತಾರೆ. ದೇವರಿಗಾಗಿ ಬರುವವರೂ ಅಷ್ಟೇ. ವ್ಯಾಪಾರಕ್ಕಾಗಿ ಬರುವವರೂ ಅಷ್ಟೇ. ಏತಕ್ಕಾಗಿ ಅಲ್...

ತೀರ ಸಣ್ಣವ ಇದ್ದಾಗ ಸಣ್ಣಪೋರನ ಲಗ್ನ ಆಗಿತ್ತು. ಲಗ್ನ ಆಗಿದ್ದು ಅವನಿಗೆ ಸಹ ಗೊತ್ತಿರಲಿಲ್ಲ. “ಎಲ್ಲಾರೂ ಅತ್ತೀಮಾವನ ಮನೇಗಿ ಹೋಗತಾರ ನಾನೂಬಿ ಹೋಗುತೆ” ಅಂದಾಗ “ನಿಂಗ ಖೂನ ಹಿಡಿಯುದಿಲ್ಲ ಮಗಾ” ಎಂದು ಅವ್ವ ಅಂದರೂ ಕೇಳ...

ಕೊಡಗಿನ ಲಿಂಗರಾಜ ಒಂದು ದಿನ ತನ್ನ ಅಣ್ಣ ದೊಡ್ಡವೀರರಾಜ ನಿರ್ಮಿಸಿದ ವೀರರಾಜಪೇಟೆ ಯಿಂದ ಕೊಡಗಿನ ರಾಜಧಾನಿ ಮಡಿಕೇರಿಗೆ ತನ್ನ ಪರಿವಾರದೊಡನೆ ಬರುತ್ತಿದ್ದ. ರಾಣಿ ದೇವಕಿ ಜತೆಗಿದ್ದಳು. ಅವಳು ಕಾಂತು ಮೂರ್ನಾಡಿನ ಪಳಂಗಡ ಮನೆಯ ಹೆಣ್ಣು. ಕೊಡಗತಿ ಹೆಣ್...

ಕೊಡಗಿನ ದೊಡ್ಡ ವೀರರಾಜ ರುಗ್ಲಶಯ್ಯಯೆಯಲ್ಲಿದ್ದ. ಅವನ ಮಾನಸಿಕ ಚಿಕಿತ್ಸೆಗೆಂದು ಈಸ್ಟಿಂಡಿಯಾ ಕಂಪೆನಿ ಮನೋವೈದ್ಯ ಇಂಗಲ್‌ ಡ್ಯೂನನ್ನು ಕಳುಹಿಸಿಕೊಟ್ಟಿತ್ತು. ನಾನು ಹುಚ್ಚನೆಂದು ಜನರು ಆಡಿಕೊಳ್ಳುತ್ತಿದ್ದಾರೆಂದು ಕೇಳಿದೆ. ನಿಮಗೆ ಹಾಗನ್ನಿಸುತ್ತದ...

ಚಳಿಗಾಲದ ಒಂದು ಮುಂಬೆಳಗಿನಲ್ಲಿ ಶಿವಪಾರ್ವತಿಯರು ಜೊತೆಯಾಗಿ ಕೈಲಾಸದಿಂದ ಹೊರಬಿದ್ದರು. ಅಡ್ಡಾಡಿಕೊಂಡು “ಬರುವುದೇ ಅವರ ಉದ್ದೇಶವಾಗಿತ್ತು. ಹಿಮಾಲಯದ ಬೆಟ್ಟಗಳನ್ನಿಳಿದು ಸಾನು ಪ್ರದೇಶಕ್ಕೆ ಬಂದರು. ಅಲ್ಲಲ್ಲಿ ಒಕ್ಕಲಿಗರ ವಸತಿಗಳು ಕಾಣಿಸತೊ...

ಕೈಲಾಸದಲ್ಲಿ ಶಿವಪಾರ್ವತಿಯರು ಸಂತೋಷದಿಂದ ಕುಳಿತು ಸರಸವಾಡುತ್ತಿರುವಾಗ, ಪಾರ್ವತಿ ಕೇಳಿದಳು – “ಶ್ರಾವಣತಿಂಗಳು ಮುಗಿದುಹೋಗಿ ಭಾದ್ರಪದ ಆರಂಭವಾಯಿತು. ನಾಳೆ ನನ್ನ ತವರೂರಿಗೆ ಹೋಗಿ ಬರುವೆ.” “ಅಲ್ಲಿ ನಿನ್ನ ಸರಿಯರು ಯ...

ಕೊಂಬಣಸು, ಕೊರಳಹುಲಿಗೆಜ್ಜಿಗಳಿಂದ ನಂದಿಯನ್ನು ಸಿಂಗರಿಸಿ ಶಿವನು ಪ್ರಯಾಣ ಹೊರಡುತ್ತಾನೆ. ಅದೆಲ್ಲಿಗೆ ? ದಾರಿಯಲ್ಲಿ ಒಂದು ಹಳ್ಳ. ಹಳ್ಳದ ದಂಡೆಯಲ್ಲಿ ಹೂ ಕೊಯ್ಯುತ್ತಿರುವ ರಮಣಿಯನ್ನು ಕಂಡು ಶಿವನು – “ಜಾಣೇ, ನಮ್ಮ ಲಿಂಗಪೂಜೆಗೊಂದು...

ಕೊಡಗಿನ ಇತಿಹಾಸದಲ್ಲಿ ನಾಲ್ಕು ನಾಡು ಅರಮನೆಗೆ ಚಿರಸ್ಥಾಯಿಯಾದ ಹೆಸರಿದೆ. ಅದನ್ನು ಕಟ್ಟಿಸಿದವನು ದೊಡ್ಡವೀರರಾಜ. ಅಲ್ಲಿಂದಲೇ ಅವನು ಕೊಡಗಿನ ಆಯಕಟ್ಟಿನ ಜಾಗಗಳಲ್ಲಿದ್ದ ಟಿಪ್ಪುವಿನ ಸೇನೆಯನ್ನು ಸೋಲಿಸಿ ಶ್ರೀರಂಗಪಟ್ಟಣಕ್ಕೆ ಓಡಿಸಿದ್ದು. ಅದೇ ಅರಮನ...

ಕುರುಬ ಬೀರನು ಕುರಿ ಕಾಯುತ್ತ ಒಂದು ಹಳ್ಳದ ದಂಡೆಗೆ ಬಂದನು. ಅಲ್ಲಿಯ ನೀರು ನೆರಳು ನೋಡಿ, ಕುರುಬನು ತನ್ನ ಕುರಿಗಳಿಗೆ ದಡ್ಡಿಹಾಕಲು ತಕ್ಕ ಸ್ಥಳವೆಂದು ಬಗೆದನು. ಅದರಂತೆ ದಡ್ಡಿಹಾಕಲು ತೊಡಗಿದನು. ಅಷ್ಟರಲ್ಲಿ ಅತ್ತಕಡೆಯಿಂದ ಶಿವಪಾರ್ವತಿ ಬಂದರು. &...

ಬಹಳ ಹೊತ್ತಿನಿಂದಲೂ ಅವಳು ಆ ಮುರುಕು ಬೆಂಚಿನ ಮೇಲೆಯೇ ಕುಳಿತಿದ್ದಾಳೆ. ಯಾರಿಗೋ ಕಾಯುತ್ತಿದ್ದಳೇನೋ ಕುಳಿತಲ್ಲಿಯೇ ಚಡಪಡಿಸುತ್ತ ದಾರಿಯುದ್ದಕ್ಕೂ ದೃಷ್ಟಿ ನೆಟ್ಟಿದ್ದಾಳೆ. ಕಣ್ಣುಗಳಲಿ ನಿರೀಕ್ಷೆ ಮನದಲಿ ಭಾವನೆಗಳ ಸಮೀಕ್ಷೆ. ಅದೊಂದು ಪಾರ್ಕಾಗಿದ್ದ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...