“ಬಾಗಿಲು!ಬಾಗಿಲು!” ಬಾಗಿಲು ತೆರೆಯಲಿಲ್ಲ. ಕೋಣೆಯಲ್ಲಿ ಗಡಿಯಾರ ಟಿಂಗ್ ಎಂದು ಒಂದು ಗಂಟೆ ಬಡಿಯಿತು. “ಎಷ್ಟು ತಡ ಮಾಡಿದ್ದೇನೆ? ಬುದ್ಧಿ ಕೆಟ್ಟುಹೋಗಿದೆ. ನಾಳೆಯಿಂದ ಜಾಗ್ರತೆಯಾಗಿರುತ್ತೇನೆ. ‘ಯಾಂಟಿನಾಚ್’ ಎಲ್ಲಾಹೋಗಿ ಸೊಳೆ...

ಹೊಲಿಗೆ ಯಂತ್ರವನ್ನು ತುಳಿಯುತ್ತಾ ಜಲಜ ಯೋಚಿಸತೊಡಗಿದಳು. ಯೋಚನೆಗಿಳಿದರೆ ಅವಳಿಗೆ ಹೊಲಿಗೆ ಯಂತ್ರದ ಸದ್ದು ಪಕ್ಕವಾದ್ಯದ ಹಾಗೆ ಕೇಳಿಸುತ್ತಿತ್ತು. ಒಮ್ಮೊಮ್ಮೆ ಲಹರಿ ಬಂದರೆ ಸಣ್ಣದಾಗಿ ಅವಳು ಹಾಡಿಕೊಳ್ಳುವುದಿತ್ತು. ಆಗ ಯಾರಾದರೂ ಗಿರಾಕಿಗಳು ಬಂದರ...

ಮಾಗಿಯ ಕಾಲ. ಹಳ್ಳಿಯೊಳಗಿನ ಜನರೆಲ್ಲ ಹಗಲುಹೊತ್ತನ್ನು ಬಹುಶಃ ಹೊಲದಲ್ಲಿಯೇ ಕಳೆಯುವರು. ದನಗಳು ಸಹ ಅಡವಿಯಲ್ಲಿಯೇ ಉಳಿಯುವವು. ಹಿಂಡುವ ದನಗಳು ಮಾತ್ರ ಸಾಯಂಕಾಲಕ್ಕೆ ಮನೆಗೆ ಮರಳುವವು. ಮಧ್ಯಾಹ್ನವಾಗಿದ್ದರೂ ಚಳಿ ಹಿಮ್ಮೆಟ್ಟಿದೆ. ಬಿಸಿಲು ಬೆಳದಿಂಗಳ...

ಅಳಿಯ ಇದ್ದನು. ಹಾಡಬಂದರೂ ಹಾಡು ಹೇಳುತ್ತಿದ್ದಿಲ್ಲ ; ಕಥೆ ಬಂದರೂ ಕಥೆ ಹೇಳುತ್ತಿದ್ದಿಲ್ಲ. “ಏನು ಬಂದು ಏನುಕಂಡೆವು. ಇವನೇನು ಒಂದು ಹಾಡು ಹೇಳಲಿಲ್ಲ ; ಕಥೆ ಹೇಳಲಿಲ್ಲ. ಇವನನ್ನು ಹೇಗಾದರೂ ಮಾಡಿ ಕೊಲ್ಲಬೇಕು” ಎಂದು ಕಥೆ ಹಂಚಿಕೆ ಹ...

ಮಗ ಪ್ರದೀಪ್ ನಿಂದ ಆ ಸುದ್ದಿ ತಿಳಿದ ಬಳಿಕ ಪಾರ್ವತಮ್ಮನ ಕಣ್ಣಿಗೆ ನಿದ್ರೆ ಸರಿಯಾಗಿ ಹತ್ತಿರಲಿಲ್ಲ. ಏಕೈಕ ಮಗನ ಮನಸ್ಸು ನೋಯಿಸಲೂ ಆಕೆಗೆ  ಇಷ್ಟವಿರಲಿಲ್ಲ. ಹಾಗಂತ ತನ್ನ ನಂಬಿಕೆಗಳನ್ನು ಬಿಟ್ಟುಬಿಡಲು ಆಕೆ ಸಿದ್ಧಳಿರಲಿಲ್ಲ, ಮತ್ತೆ ಮತ್ತೆ ಮಗನ ಮ...

ಕಾಶಮ್ಮ – ಮಲ್ಲೇಶಿ ಎಂಬ ಅಜ್ಜಿ ಮೊಮ್ಮ್ಮಗ ಇದ್ದರು. ಮೊಮ್ಮಗನು ದುಡಿದು ತಂದಷ್ಟರಲ್ಲಿಯೇ ಅವರಿಬ್ಬರೂ ಕಷ್ಟದಿಂದ ಬಾಳ್ವೆ ಮಾಡುತ್ತಿದ್ದರು. ಒಂದು ದಿನ ಮಲ್ಲೇಶಿ ಹೇಳಿದನು ಅಜ್ಜಿಗೆ – “ಅಜ್ಜೀ, ಈ ಚಿಕ್ಕ ಹಳ್ಳಿಯಲ್ಲಿ ಬಾಳ್ವ...

ಕಾಲೇಜು ಸೇರಿದಂದಿನಿಂದ ಅವನಿಗೆ ಮನಃಪೂರ್ವಕ ವಾಗಿ ನಗುವುದು ಮರೆತೇ ಹೋಗಿದೆ. ಬೃಹತ್ ಕಟ್ಟಡದ ಬೃಹತ್ ಕೋಣೆಯೊಳಗೆ ಬೃಹದಾಕಾರದ ಕಪಾಟುಗಳಲ್ಲಿ ಡಬ್ಬದೊಳಗೆ ಅದುಮಿಟ್ಟ ಗೋಧಿ ಹಿಟ್ಟಿನಂತೆ ಪುಸ್ತಕಗಳು! ಕೆಲವಂತೂ ಮಣಭಾರ. “ಈ ಆಥರಿನ ಈ ಪುಸ್ತಕದ...

ಗೋಡಿಹಾಳ ಗ್ರಾಮ ಚಿಕ್ಕದಾದರೂ ಅಲ್ಲಿಯ ಗೌಡರು ದೊಡ್ಡವರಾಗಿದ್ದರು. ಶ್ರೀಮಂತಿಕೆಗಿಂತ ಅವರಲ್ಲಿ ತಿಳಿವಳಿಕೆ ಹೆಚ್ಚಾಗಿತ್ತು. ವಯಸ್ಸಿನಿಂದಲೂ ಹಿರಿಯರಾಗಿದ್ದರು. ಮಕ್ಕಳೆಲ್ಲ ಕೈಗೆ ಬಂದಿದ್ದರು. ಹಿರೇಮಗ ಗೌಡಿಕೆಯನ್ನೂ, ಚಿಕ್ಕವನು ಹೊಲಮನೆಗಳ ಮೇಲ್ವ...

ಇದು ನಮ್ಮ ಅಜ್ಜ ಹೇಳುತ್ತಿದ್ದ ಕಥೆ. ಅವರ ಕಾಲದಲ್ಲಿ ಊರಿನ ದೊಡ್ಡವರೆಂದರೆ ಪಟೇಲರು. ಅವರು ಸುಪ್ರೀಂ ಕೋರ್ಟು ಇದ್ದ ಹಾಗೆ. ಅವರಿಗೆ ಯಾರೂ ಎದುರಾಡುವಂತಿಲ್ಲ. ಎಲ್ಲಾ ವಿಷಯಗಳಲ್ಲೂ ಅವರದ್ದೇ ಅಂತಿಮ ತೀರ್ಮಾನ. ಅದು ಬ್ರಿಟಿಷರ ಕಾಲವಾದುದರಿಂದ ಊರಿನ ...

ಸಾಹುಕಾರನು ನೆಲಗಡಲೆ ತಿನ್ನುತ್ತ ತನ್ನ ಮನೆಯ ತಲೆವಾಗಿಲ ಮುಂದೆ ಕುಳಿತಿದ್ದನು. ಅತ್ತಕಡೆಯಿಂದ ಒಬ್ಬ ಸಾಧು ಬಂದು ಭಿಕ್ಷೆ ಬೇಡಿದನು. “ಮುಂದಿನ ಮನೆಗೆ ಹೋಗು’” ಎಂದು ಸಾಹುಕಾರನು ನುಡಿದನು. “ತಿನ್ನಲು -ನಾಲ್ಕು ಕಾಯಿಗಳನ್ನಾದ...

ಪೆಟ್ರೋಲ್ ವಾಸ್ತೆ ಮೂಗಿಗೆ “ಗಫ್” ಅಂತಾ ಬಡೀತು! ಐದಾರು ಕ್ಯಾನ್‌ಗಟ್ಟಲೆ ಮನೆ ಸುತ್ತಮುತ್ತ ಉಗ್ಗಿ ಬಾಗಿಲು ಕಿಟಕಿ ಸಂಧಿನಿಂದ ಧುಭುಧುಭು – ಪೆಟ್ರೋಲ್ ಸುರಿವಿದ ತೀರಿಗೆ ಅದು ಹಳ್ಳ ಕೊಳ್ಳವಾಗಿ ಮನೆಯೊಳಕ್ಕೆ ಜಗ್ಗಿ ಹರಿದು ಬಂತು! ಮಲಗಿದ್ದ ಹಾಸಿಗೆ, ದಿಂಬು, ಹೊ...

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...