ಸದಾಶಿವರಾಯರು ಆ ಮಗುವನ್ನೇ ನೋಡುತ್ತಿದ್ದರು. ಅಂಬೆಗಾಲಿಟ್ಟು ತೆವಳುವ ಮಗುವಿನ ಚಲನವಲನಗಳು ಸೃಷ್ಟಿಸುವ ಭಾವನೆಗಳನ್ನು ಅವರು ಈವರೆಗೆ ಅನುಭವಿಸಿರಲಿಲ್ಲ. ನಿಧಾನವಾಗಿ ತೆವಳುತ್ತಾ ಒಮ್ಮೊಮ್ಮೆ ಹಿಂದಕ್ಕೆ ನೋಡುತ್ತಾ ತಾಯಿಯ ಮೆಚ್ಚುಗೆಗಾಗಿ ಹಂಬಲಿಸುತ...

ಚಿಕ್ಕ ಹಳ್ಳಿಯೊಂದರಲ್ಲಿ ಸಮಗಾರ ಗಂಡಹೆಂಡಿರಿದ್ದರು. ಗಂಡನು ಹಳೆಯ ಕಾಲ್ಮರೆಗಳನ್ನು ಗಟ್ಟಿಮಾಡಿಕೊಡುವ ಕೆಲಸಮಾಡುತ್ತಿದ್ದನು. ಇಡಿಯವಾರ ದುಡಿದರೂ ಅವನಿಗೆ ಒಂದು ರೂಪಾಯಿಗಿಂತ ಹೆಚ್ಚು ಗಳಿಕೆ ಆಗುತ್ತಿದ್ದಿಲ್ಲ. ನೆರೆಯೂರಿನ ಸಂತೆಗೆ ಹೋಗಿ ಉಪ್ಪು &...

ಅವಳು ಊರನ್ನು ಪ್ರವೇಶಿಸುವಾಗ ಬೇಕೆಂದೇ ತಡಮಾಡಿದ್ದಳು. ಮಬ್ಬುಗತ್ತಲಲ್ಲಿ ತನ್ನ ಗುರುತು ಯಾರಿಗೂ ತಿಳಿಯಲಾರದು. ನಾಲ್ಕು ವರ್ಷವಾಯಿತು, ಊರನ್ನು ಕಾಣದೆ. ಈಗ ಏನೇನೋ ಬದಲಾವಣೆಗಳಾಗಿವೆಯೋ? ಧುತ್ತೆಂದು ತಾನು ಪ್ರತ್ಯಕ್ಷಳಾಗಿ ಬಿಟ್ಟರೆ ಈಗಿನ ಹೊಸ ವಾ...

ಅತ್ತೆ ಸೊಸೆಯರು ಹಿತ್ತಲ ಮನೆಯಲ್ಲಿ ಒಂದಿಷ್ಟು ವಾದಿಸಾಡುತ್ತಿದ್ದರು. ಅಷ್ಟರಲ್ಲಿ ಹೊಲದಿಂದ ಮಗನು ಬಂದನೆಂದು ಅತ್ತೆ ಎದ್ದು ಹೋದಳು. ಮಗನಿಗೆ ಉಣಬಡಿಸಬೇಕಲ್ಲವೇ? ಊಟಕ್ಕೆ ಕುಳಿತ ಮಗನಿಗೆ ಉಣಬಡಿಸುತ್ತ ಹಗುರಾಗಿ ಎಳೆತೆಗೆದಳು ತಾಯಿ – &#822...

ಮನೆಗೆ ಬಂದ ಅತಿಥಿ ಅಭ್ಯಾಗತರನ್ನು ಸತ್ಕರಿಸುವುದಕ್ಕೆ ಹಿಂದಿನ ದಿನಗಳಲ್ಲಿ ತಂಬಾಕು ಸೇದುವ ಏರ್ಪಾಡು ಮಾಡಿಕೊಡುತ್ತಿದ್ದರು. ಬಂದವರಿಗೆ ಎಕ್ಕೆಲೆ – ತಂಬಾಕುಗಳನ್ನು ಒದಗಿಸಿದರೆ ದೊಡ್ಡ ಮನ್ನಣೆ ಮಾಡಿದಂತೆ. ಬಂದ ಅತಿಥಿಯಾಗಲಿ ಆಪ್ತರಾಗಲಿ ಮನ...

ದಿನವಿಡೀ ಭುವಿಯನ್ನು ಬಿಸಿಲಿನ ಜಳದಿಂದ ತೋಯಿಸಿದ್ದ ಸೂರ್ಯ ನಿಧಾನವಾಗಿ ಪಶ್ಚಿಮದಲ್ಲಿ ಮುಳುಗುತ್ತಿದ್ದ. ಸೂರ್ಯನೆಲ್ಲಾದರೂ ಮುಳುಗುವುದು ಸಾಧ್ಯವೆ? ಭೂಮಿಯ ಒಂದು ಮೈಯನ್ನು ಕತ್ತಲೆ ಮಾಡಿ ಮತ್ತೊಂದನ್ನು ಮುತ್ತಿ ತೋಯಿಸುವ ಸೂರ್ಯನ ಈ ಚಕ್ಕಂದ ಅದೆಷ್...

ನಾನು ವೃಕ್ಷಶಾಸ್ತ್ರದ ಎಂ.ಏ. ಪರೀಕ್ಷಗೆ ಓದಿತ್ತಿರುವ ದಿನಗಳಲ್ಲಿ ಮೈಲಾಪೂರದ ದೊಡ್ಡ ಬೀದಿಯಲ್ಲಿರುವ ಒಂದು ಮಹಡಿ ಮನೆಯಲ್ಲಿ ವಾಸವಾಗಿದ್ದೆ. ನನ್ನಂತಹ ಹತ್ತಾರು ಜನವಿದ್ಯಾರ್ಥಿಗಳು ನಮ್ಮ ದೇಶದವರು ಆ ಮಹಡಿ ಮನೆಯಲ್ಲೇ ಇರುತ್ತಿದ್ದರು. ನಾನು ಬಂದ ಮ...

ದೊಡ್ಡವಾಡದಲ್ಲಿ ಇಬ್ಬರು ಗಂಡಹೆಂಡತಿಯಿದ್ದರು. ಗಂಡನು ಬರಿ ಜೀನನಾಗಿದ್ದರೆ ಹೆಂಡತಿ ಜೀನಹಂಕಳಾಗಿದ್ದಳು. ಅವರು ಎರಡೂ ಹೊತ್ತು ಎಂದೂ ಉಣ್ಣುತ್ತಿದ್ದಿಲ್ಲ, ಒಪ್ಪೊತ್ತೇ ಉಣ್ಣುತ್ತಿದ್ದರು. ರೊಟ್ಟಿಯೊಡನೆ ಕಾಯಿಪಲ್ಲೆ ತಿಂದರೆ ರೊಟ್ಟಿಯ ಸ್ವಾರಸ್ಯವೇ ...

ಚಿತ್ರ: ಅಪೂರ್ವ ಅಪರಿಮಿತ

ರಶ್ಮಿಗೆ ಆ ಮದುವೆ ಇಷ್ಟ ಇರಲಿಲ್ಲ, ಹಾಗಂತ ಮದುವೆಯೇ ಬೇಡವೆಂದವಳಲ್ಲ ಅವಳು. ಆದರೆ ಸೈನಿಕನನ್ನು ಮದುವೆ ಯಾದರೆ ವರ್ಷದಲ್ಲಿ ಒಂದೆರಡು ತಿಂಗಳು ಮಾತ್ರ ಸಂಸಾರ ಮಾಡಲು ದೊರೆಯುವುದು. ಉಳಿದ ತಿಂಗಳುಗಳಲ್ಲಿ ಪತಿರಾಯ ಯಾವಾಗ ಬಂದನೆಂದು ತಾನು ಕಾಯಬೇಕು. ...

ಅತ್ತೆಯನ್ನು ಮಾತನಾಡಿಸಿ ಬರಬೇಕೆಂದು ಅಳಿಯನು ಅತ್ತೆಯೂರಿಗೆ ಹೋದನು. ಆಕೆ ಹೆಣ್ಣು ಕೊಟ್ಟ ಅತ್ತೆ ಮಾತ್ರ ಆಗಿರದೆ, ಸೋದರತ್ತೆಯೂ ಆಗಿದ್ದಳು. ಚಿಕ್ಕಂದಿನಿಂದಲೂ ಅಳಿಯನಿಗೆ ತಿನ್ನಿಸಿ ಉಣ್ಣಿಸಿದವಳಾಗಿದ್ದಳು. ಆದರೂ ಆಕೆಯ ಕೈಬಿಗಿತ ; ಜೀನಳೇ ಆಗಿದ್ದ...

ಪೆಟ್ರೋಲ್ ವಾಸ್ತೆ ಮೂಗಿಗೆ “ಗಫ್” ಅಂತಾ ಬಡೀತು! ಐದಾರು ಕ್ಯಾನ್‌ಗಟ್ಟಲೆ ಮನೆ ಸುತ್ತಮುತ್ತ ಉಗ್ಗಿ ಬಾಗಿಲು ಕಿಟಕಿ ಸಂಧಿನಿಂದ ಧುಭುಧುಭು – ಪೆಟ್ರೋಲ್ ಸುರಿವಿದ ತೀರಿಗೆ ಅದು ಹಳ್ಳ ಕೊಳ್ಳವಾಗಿ ಮನೆಯೊಳಕ್ಕೆ ಜಗ್ಗಿ ಹರಿದು ಬಂತು! ಮಲಗಿದ್ದ ಹಾಸಿಗೆ, ದಿಂಬು, ಹೊ...

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...