ಪ್ರತಿ ನಿರ್ದಿಷ್ಟ ದೂರಕ್ಕೆ ಬೃಹದ್ಗಾತ್ರದ ಕಂಬಗಳು. ಒಂದು ವಿಶೇಷವೆಂದರೆ ಸುಮಾರು ಮೂವತ್ತು ಫೂಟು ಅಂತರದವರೆಗೆ ಕಂಬಗಳೇ ಇಲ್ಲ. ಆಶ್ಚರ್ಯ. ಈ ನಾಲ್ಕು ಕಂಬಗಳ ಕಮಾನು ವಿಜ್ಞಾನದ ವಿಸ್ಮಯ. ಈ ಕಮಾನಿನ ಎತ್ತರ ಸೇತುವೆಯ ಮೇಲಿಂದ ಏನಿಲ್ಲ ಎಂದರೂ ೨೫’-೩...

ನನ್ನ ಜೀವನದ ಕೆಲವು ಘಟನೆಗಳನ್ನು ನಾನು ಕೇಳಿದ್ದು, ನೋಡಿದ್ದು ಇವುಗಳನ್ನು ನನ್ನಿಂದಲೇ ಕೇಳಬೇಕು, ಓದಬೇಕು ಎನ್ನುವುದು ನನ್ನ ಮಕ್ಕಳ, ಮೊಮ್ಮಕ್ಕಳ ಬಯಕೆ. ಇದನ್ನು ಈಡೇರಿಸದಿದ್ದರೆ ನನ್ನ ಮೂರು ದಶಕಗಳ ಅಧ್ಯಾಪನ ವೃತ್ತಿಗೆ ನ್ಯಾಯವಾಗಲಿಕ್ಕಿಲ್ಲ. &...

ಭೂಮಿ ಆ ಅಡಿಗಲ್ಲುಗಳನ್ನು ಎಷ್ಟೋ ದಿನಗಳಿಂದ ನೋಡುತ್ತಲೇ ಇತ್ತು.  ಶಾಲೆ, ಹಾಸ್ಟಲ್ಲು, ಆಸ್ಪತ್ರೆ, ಮಾರ್ಕೆಟ್ಟು, ಕಾಂಪ್ಲೆಕ್ಸ್, ಸಮುದಾಯ ಭವನಗಳ ನಿರ್ಮಾಣಕ್ಕೆಂದು ಶಾಸಕರು, ಸಂಸದರು, ಮಂತ್ರಿಗಳು ಸಂಭ್ರಮದಿಂದ ಅನಾವರಣ ಮಾಡಿದ ಅಡಿಗಲ್ಲುಗಳನ್ನು ...

“ಕಾಫಿಗೆ ಬತಿಯೇನೊ?” ಪರಿಚಯವಾಗಿ, ಸ್ನೇಹವಾಗಿ, ಸಲಿಗೆಯಾಗಿ ಒಂದು ತಿಂಗಳಷ್ಟೆ ಆಗಿತ್ತು. ಮುಕ್ತ ಸಲಿಗೆಯಿಂದ ಅವನು ಉತ್ತರ ಕೊಟ್ಟ. “ಕಾಸಿಲ್ಲ ಕೊಡಿಸ್ತೀಯ?” “ಬಾ ಹೋಗೋಣ…” -ಹೊರಗಡೆ ಸಣ್ಣದಾಗಿ ...

ಆ ಊರು ಪ್ರಕ್ಷುಬ್ಧವಾಗಿತ್ತು. ಅಲ್ಲಿನ ಜನರಿಗೆ ಬದುಕು ಎನ್ನುವುದು ದುಸ್ತರವೆನಿಸಿತ್ತು. ಆಗಾಗ ಹಲವಾರು ಕೋಮುಗಳ ನಡುವೆ ಕಲಹ ಉದ್ಭವಿಸುತ್ತಿದ್ದವು. ಕ್ಲುಲ್ಲಕ ಕಾರಣಗಳು ಮನುಷ್ಯರಲ್ಲಿ ಹಿಂಸಾ ಪ್ರವೃತ್ತಿ ಹುಟ್ಟುಹಾಕಿ ಊರೆಂಬೋ ಊರನ್ನು ಸ್ಮಶಾನಮಾ...

ಅದೊಂದು ಪುಟ್ಟ ಗ್ರಾಮ. ಅಲ್ಲಿನ ತರುಣ ಸಂಘವರು ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಸನ್ಮಾನಿತನಾದವನು ಹೆಸರಾಂತ ಕವಿ. ಅವನೂ ಅದೇ ಹಳ್ಳಿಯವನು. ಸಾಹಿತ್ಯ ಅಕಾಡಮಿಯ ಪ್ರಶಸ್ತಿ ದೊರಕಿಸಿಕೊಂಡಿದ್ದರಿಂದ ಊರ ಜನ ಪ್ರೀತಿ, ಅಭಿಮಾನದಿಂದ ಕವಿಯ...

ಆನಂದಪ್ಪ ಆ ಶಹರದ ಹೃದಯಭಾಗದಲ್ಲಿ ಮನೆ ಕಟ್ಟಿಸಲು ಶುರು ಮಾಡಿದ. ಅಲ್ಲಿನದು ಬಹು ಮೌಲ್ಯದ ಬಯಲು ಜಾಗೆ. ಅದು ಅವನಿಗೆ ಬಳುವಳಿಯಾಗಿ ಸಿಕ್ಕಿತ್ತು. ಆನಂದಪ್ಪ ಒಬ್ಬ ಇಂಜಿನಿಯರ್‍. ಸರಕಾರಿ ಹುದ್ದೆಯಲ್ಲಿದ್ದ. ತಾನು ಕಟ್ಟಿಸುವ ಮನೆ ಭೂಮಿಯ ಮೇಲಿನ ಸ್ವರ...

ಭಾಗ-೧ ಹೀಗೀಗೆ ಆಗುತ್ತದೆ- ಆಗಲೇಬೇಕು’ – ಇದು ತರ್ಕ. ಮನುಷ್ಯನೊಬ್ಬನ ಸಕಲ ನಡವಳಿಕೆಗಳನ್ನು ಯಾವುದೇ ಒಂದು ತಾರ್ಕಿಕ ವಲಯಕ್ಕೆ ಮಾತ್ರ ಸೀಮಿತಗೊಳಿಸಿಬಿಟ್ಟರೆ ಒಬ್ಬರು ಇನ್ನೊಬ್ಬರನ್ನು ಅರ್ಥಮಾಡಿಕೊಳ್ಳಲು ಸಾಧ್ಯವೇ ಇಲ್ಲವೇನೊ. ಯಾವುದೋ ಒಂದ...

– ೧ – ನಾಲ್ಕಾರು ದಿನಗಳಿಂದ ಇಮಾನಬಿಯ ಮನಸ್ಸಿಗೆ ಸಮಾಧಾನವಿರಲಿಲ್ಲ.  ಅವಳ ಮೊಮ್ಮಗ ಹೈದರನ ಮೈಯೆಂಬೋ ಮೈ ಕೆಂಡಕೆಂಡವಾದರೆ ಮತ್ತೊಮ್ಮೆ ಮಂಜುಗಡ್ಡೆ.  ಹಗಲು-ರಾತ್ರಿ ವಿಲಿ ವಿಲಿ ಮೊರೆತ.  ತುಂಡು ಬ್ರೆಡ್ಡು ಚೂರು, ಬಿಸ್ಕೀಟು, ವಿಷದ ...

ಬಿದಿರ ಮೆಳೆಗಳು ಹೂಬಿಟ್ಟು ಬಿದಿರಕ್ಕಿ ರಾಜಂದರಿಯನ್ನು ಕೊಡಲು ಶುರುಮಾಡಿದ್ದು ಮತ್ತು ಕಪಿಲಳ್ಳಿಯ ಇತಿಹಾಸದ ಪುಟಗಳಲ್ಲಿ ಏಕಮೇವಾದ್ವಿತೀಯನಾದ ಒಂಟಿ ಬ್ಯಾರಿಯ ಹೆಸರು ದಾಖಲಾದದ್ದು ಒಂದೇ ವರ್ಷದ ಅಪೂರ್ವ ಯೋಗಾಯೋಗವೆಂದು ಕಪಿಲಳ್ಳಿಯ ಜನರು ಹೇಳುತ್ತಿ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...