ಆ ಕಟ್ಟಡದ ಕೆಲಸ ಆರಂಭವಾದಂದಿನಿಂದ ಊರಲ್ಲಿ ಅನೇಕ ಬದಲಾವಣೆಗಳಾಗಿದ್ದವು. ಲಾರಿಗಳ ಓಡಾಟ, ವಿಚಿತ್ರದಾದ ಯಂತ್ರಗಳು ಊರಿಗೆ ಹೊಸ ಆಕರ್ಷಣೆಯನ್ನು ನೀಡಿದ್ದವು. ಬೇರೆ ಬೇರೆ ಭಾಷೆಗಳನ್ನಾಡುವ ಕಪ್ಪು ಕಪ್ಪು ಜನಗಳು ಕೆಲಸ ಬೇಗ ಮುಗಿಯಲಿಕ್ಕಾಗಿ ಬಿಡುವಿಲ್...

ನನಗೆ ಆ ಕಿಟಕಿಯೆಂದರೆ ಬಲು ಪ್ರೀತಿ. ಐ ಲವ್ ಇಟ್, ಜಸ್ಟ್ ಸಿಂಪ್ಲಿ ಐ ಲವ್ ಇಟ್. ಕ್ಷಮಿಸಿ, ಗೋಕಾಕ್ ಚಳವಳಿಯ ನಂತರ ಸರ್ಕಾರ ಎಲ್ಲಾ ಹಂತಗಳಲ್ಲೂ ಕನ್ನಡ ಜಾರಿಗೆ ತರುವುದರಲ್ಲಿ ಯಶಸ್ಸಿನ ಹಾದಿಯಲ್ಲಿರೋ ಈ ಸಂದರ್ಭದಲ್ಲಿ ನಮ್ಮೆಲ್ಲಾ ಸಂವೇದನೆಗಳು ಕನ...

ಅಮಾವಾಸ್ಯೆಯ ಮರುದಿನ ಸಂಜೆಯಷ್ಟು ಹೊತ್ತಿಗೆ ಆಕಾಶದಲ್ಲಿ ಚಂದ್ರ ದರ್ಶನವಾಯಿತು.  ಗಲ್ಲಿಯಲ್ಲಿ ಸಂಭ್ರಮ.  ಸಾರಾಬೂ ಬೀದಿಗೆ ಬಂದು ತನ್ನ ನಾಲ್ಕು ಮಕ್ಕಳಿಗೂ ಚಂದ್ರನನ್ನು ತೋರಿಸಿದಳು.  “ನಾಳೆ ರೋಜಾ ಚಾಲು”  ಎಂದಳು.  ಅವಳ ಮೂರು ಗಂಡ...

ರೈಲು ನಿಲ್ದಾಣದ ಒಂದು ಬೆಂಚಿನ ಮೇಲೆ ಗಂಡ ಹೆಂಡತಿ ಕುಳಿತಿದ್ದರು. ಗಾಡಿ ಬರುವುದು ತಡವೆಂದು ಪೋರ್ಟರ್‍ ಹೇಳಿದ. “ರೀ ಕುಡಿಯಲು ನೀರು ತಗೊಂಡು ಬರ್‍ರಿ. ಇಲ್ಲೇ ಊಟ ಮಾಡೂಣು, ಹ್ಯಾಂಗಿದ್ರೂ ಗಾಡಿ ತಡಾ ಆಗಿ ಬರುವುದು” ಎಂದು ಹೆಂಡತಿಯ ...

`ಶ್ರೀಗಂಧ ಬೆಳೆದು ಧನಿಕರಾಗಿ, ನಾವು ಶ್ರೀಗಂಧದ ಗಿಡಗಳನ್ನು ಮಾರಾಟ ಮಾಡುತ್ತೇವೆ, ತಕ್ಷಣ ಸಂಪರ್ಕಿಸಿ – ಚಂದನ ನರ್ಸರಿ: ದೂರವಾಣಿ ೬೭೮೩೬೪೧’ ಎಂಬ ಪ್ರಕಟಣೆಯನ್ನು ಸ್ಥಳೀಯ ಪತ್ರಿಕೆಯೊಂದರಲ್ಲಿ ಓದಿ ಶೇಷಪ್ಪ ಗೌಡರು ಧಿಗ್ಗನೆದ್ದು ಕೂ...

ಆ ಊರಲ್ಲಿ ಇಳಿಯಬೇಕಿದ್ದರವರಲ್ಲಿ ಅವನೂ ಒಬ್ಬ.  ಆಪರಿಚಿತ ಊರಲ್ಲಿ ತನ್ನ ಫೀಲ್ಡ್ ಸ್ಟಡಿಗೆ ಸಹಾಯ ಮಾಡುವವರು ಯಾರಾದರೂ ಸಿಕ್ಕಾರೇ ಎಂದು ಸುತ್ತಲೂ ಕಣ್ಣಾಡಿಸುತ್ತಿದ್ದಂತೆ ಅವನನ್ನು ಆಲ್ಲಿಗೆ ಹೊತ್ತು ತಂದ ಬಸ್ಸು ಇಳಿಸಿದ್ದಕ್ಕಿಂತ ಹೆಚ್ಚು ಮಂದಿಯನ...

ಕರೀಮ ಆ ಕತ್ತಲನ್ನು ಸೀಳಿಕೂಂಡು ಬಂದ. ಪೆಡಸುಪಡಸಾದ ಮೈ…. ಅಗಲಿಸಿದ ಕಣ್ಣುಗಳಲ್ಲಿ ದ್ವೇಷಾಗ್ನಿ. ಕೈಯಲ್ಲಿ ಹರಿತವಾದ ಕುಡಗೋಲು….”ಲೇಽಽ ಅಬಿದಾಲಿ. ಇವತ್ತ ನಿನ್ನ ಕತಲ್‍ರಾತ್ರಿ !” ಕತ್ತಲನ್ನು ಬೆಚ್ಚಿಬೀಳಿಸುವ ಆಸ್ಪೋ...

ಮೂರ್ತಿಯು ಸಂಜೆ ಕಛೇರಿ ಮುಗಿಸಿ ಮನೆಗೆ ವಾಪಾಸಾಗುವಾಗ ದಾರಿಯಲ್ಲಿ ಆ ನಾಯಿಮರಿಯನ್ನು ಕಂಡನು. ಅದು ಹಸಿವು ಬಾಯಾರಿಕೆಗಳಿಂದ ಕಂಗೆಟ್ಟು ಸರಿ ಒಡಾಡಲೂ ಆಗದೆ ದೈನಾವಸ್ಥೆಯಲ್ಲಿ ಜೋಲು ಮೋರೆ ಹಾಕಿ ಕೂತಿತ್ತು. ಇನ್ನೇನು ಯಾವುದಾದರೂ ಕಾರು, ಆಟೋ, ಬಸ್ಸಿ...

– ೧ – ಲಖನೌದಿಂದ ಪುಷ್ಪಕ ಎಕ್ಸಪ್ರೆಸ್ ರೈಲಿನಲ್ಲಿ ರಾತ್ರಿಯೆಲ್ಲ ಪ್ರಯಾಣಿಸಿ ನಾವು ಆಗ್ರಾ ತಲುಪಿದಾಗ ಬೆಳಗಿನ ಹೂ ಬಿಸಿಲು. ಜಗದ್ವಿಖ್ಯಾತ ತಾಜಮಹಲು ಇರುವ ಭೂಸ್ಪರ್ಶ,  ಹಿತಕರ ಗಾಳಿಯೊಂದಿಗೆ ಮಿಳಿತಗೊಂಡು ಅದಮ್ಯ ಪುಳಕ ಆನುಭವಿಸುತ...

ಮಗುವೊಂದರ ಎಲ್ಲಾ ಸುಖಗಳನ್ನು ಅನುಭವಿಸಿದ ನಾಲ್ಕೈದು ವರ್ಷಗಳ ನಂತರ ಒಬ್ಬ ಮಗನೂ ಹುಟ್ಟಿದ್ದರೆ ಚೆನ್ನಾಗಿರುತ್ತಿತ್ತು ಎಂದು ನನ್ನ ಹೆಂಡತಿಗೆ ಅನ್ನಿಸಲಾರಂಭಿಸಿ, ದಿನವೂ ಪೀಡಿಸಲಾರಂಭಿಸಿದ್ದಳು. ಕಂಡಕಂಡ ದೇವರುಗಳಿಗೆಲ್ಲಾ ಹರಕೆಹೊತ್ತು, ತಿಂಗಳಾಗು...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...