ಒಂದು ಊರಿನಲ್ಲಿ ಜಯಶೀಲ ಎಂಬ ದಯಾಳು, ಶ್ರೀಮಂತ ಯುವಕನಿದ್ದ. ಒಮ್ಮೆ ಪಕ್ಕದ ಊರಿಗೆ ವ್ಯಾಪಾರಕ್ಕೆಂದು ಹೊರಟಿದ್ದ. ದಾರಿಯಲ್ಲಿ ಕೋಳಿಯನ್ನು ಬಲಿ ಕೊಡುವುದನ್ನು ನೋಡಿ ಆಲ್ಲಿಯ ಜನರಿಗೆ ಹೇಳಿದ: `ಅನ್ಯಾಯವಾಗಿ ಆ ಕೋಳಿಯನ್ನು ಕೊಲ್ಲಬೇಡಿ’ ಎಂದ....

ದೊರಕಿದಾ ಗುರು ದೊರಕಿದಾ || ಪ || ಪರಮಾನಂದ ಬೋಧ ಆರವಿನೊಳಗ ಬಂದು ದೊರಕಿದಾ ಗುರು ದೊರಕಿದಾ ||ಅ.ಪ.|| ಕರಪಾತ್ರೆ ಹಿಡಿದು ಈ ನರ ಶರೀರದಿ ತನ್ನ ಅರುವ ತನಗೆ ತೋರಿ ಪರಮ ನಂಬುಗೆಯಲಿ ದೊರಕಿದಾ ಗುರು ದೊರಕಿದಾ ||೧|| ಹಿಂದೆ ಜನ್ಮಾಂತರ ಒಂದು ಉಳಿಯದಂ...

ಎಂಥಾ ಬೇಗನೆ ಯವ್ವನ ಬಂತೆ ನಿನಗೆ ನಿಂತು ನೋಡಿ ಹೋಗದಾಂಗಾಯಿತೆನಗೆ ||ಪ|| ಸಂತಿಗೋಗಿ ಸಣ್ಣದೊಂದು ಚಿಂತಾಕವ ಕದ್ದುಕೊಂಡು ಹಂತಿಲಿದ್ದವರೆಲ್ಲ ಕಂಡರೆ ಮೆಂತೇದವನಾ ಹೊಲಾಪೂಕ್ಕೆ ಕಾಂತೆ ಕಬ್ಬಿನ ವನದಿ ಬಂದು ಕುಂತೆಲ್ಲ ಶೀಗಿಹುಣ್ಣಿವಿಗೆ ||೧|| ದಿನದಲ...

ಒಂದು ಕುಗ್ರಾಮದಲ್ಲಿ ಮುದುಕ ಮುದುಕಿ ಇದ್ದರು. ಅವರಿಗೆ ಒಬ್ಬ ಮಗನಿದ್ದ. ಆತ ಹೇಳಿದ್ದನ್ನು ತಿಳಿದುಕೊಳ್ಳಲಾರದಷ್ಟು ದಡ್ಡನಾಗಿದ್ದ. ಮಗನ ಈ ವರ್ತನೆಯಿಂದ ಬೇಸತ್ತ ಅವನ ತಂದೆ-ತಾಯಿ ಪಕ್ಕದ ಆಶ್ರಮದ ಋಷಿಯ ಬಳಿ ಹೋಗಿ `ಸ್ವಾಮೀಜಿ, ಇವನು ನಮ್ಮ ಮಗ ಧನವ...

ಪ್ರಾಯ ಹೋಗುತ ಬಂತು ದೇಹ ಒಣಗಿ ನಿಂತು ಜೀವದ ಬಡಿವಾರವೇನೆಂಬೆ ||ಪ|| ಕೋವಿಧನಾದರೆ ಸಾವಿಗಂಜದೆ ಆ ಮಹಾದೇವರ ನುತಿಸಲೆಂಬೆ || ೧ || ಆಸ್ತಿ ಚರ್ಮದ ಘಟವಿಸ್ತರಣದಲಿ ಕೂಟ ಮಸ್ತಕ ಮನ ಬುದ್ಧಿಯೆಂತೆಂಬೆ || ೨ || ಮಸ್ತಿ ಮಸ್ತಕರ ಕಾಮ ರಸ್ತೆಯೊಳಿರುವಂತೆ...

ಮುತ್ತಿನಂಥಾ ಮಾತಿದು ಕೇಳೇ ಗೆಳತಿ ನಿಮ್ಮತ್ತಿಮಾವಗಳಿಗುತ್ತರ ಏನ ಹೇಳತಿ ||ಪ|| ಗೊತ್ತುಗೇಡಿ ಮಗಳೆ ವ್ಯರ್ಥ ಹೊತ್ತುಗಳಿಯುತ್ತೀ ಅತ್ತ ಇತ್ತ ತಿರುಗಿ ಭವದೊಳ್ ಬೀಳತೀ ಛೀ ಛೀ ಕೆಡತೀ ||೧|| ನಾದುನಿ ಮೈದುನ ಭಾವಗೇನ ಹೇಳತೀ ಒಬ್ಬ ಮಾದರವನ ಸ್ನೇಹಮಾಡಿ...

ವಂದನೆ ಕಲಿಸಿ ಆನಂದದಿ ಬಿಂದು ವರ್ಗ ನಿಲಿಸಿ || ಪ || ಹೊಂದಿಸಿ ಯಮುನಾತೀರದ ಮಧ್ಯದಲಿ ನಿಂತು ಎಂದೆಂದಿಗೂ ಯಮದಂದುಗವ ಕಳೆ ಎಂದು || ೧ || ಶಿಶುನಾಳಧೀಶನಲ್ಲಿ ಉನ್ಮನಿಯಾಗಿ ಹಸನಾಗಿರುವದು ವ್ಯಸನಕೆ ವ್ಯಸನಹುದೆ ಕರ್ದುಸಾರನೆಲ್ಲ ಕಳೆಯೆಂದು ಮಂತ್ರದಿ...

ವನಜಾಕ್ಷಿಯಳೆ ಬಾರೆ ಮನ ಮಾನಿನಿಯೆ ಬಾರೆ ವನದೊಳಾಡುನು ಕೂಡಿ ಘನ ಹರುಷದಲಿ         ||ಪ|| ತನುವೆಂಬಾ ಕೊಳದೊಳು ಮನವೆಂಬ ತಾವರಿ ಘನ ಸುಗಂಧವ ಬೀರುತಿರುವದು ನೀರೆ          ||೧|| ನೋಟಾನಿರುತವೆಂಬ ಜೀರ್ಕೊಳಿವಿಯನು ಪಿಡಿದು ನೀಟಾಗಿ ನೀನು ನೀರಾಟಕ...

ಒಳ್ಳೇದಲ್ಲ ನಿನ್ನ ಸಲಗೀ ನಾ ಒಲ್ಲೆನು ಹೋಗ                          ||ಪ|| ತನುತ್ರಯ ಗುಣವೆಂಬು ಮನಸಿನಾಶೆದೊಳಿಟ್ಟು ದಿನಗಳ ನೆನಸಿ ನಿಮಗ ಏನೇನು ಬೇಕು       ||೧|| ಹರಿ ಸುರರು ಪರಿಭವ ಕಟ್ಟಿಸಿದ ಅರಿಯದವರ್ಯಾರು ನಿಮಗ ಬರದಿರು ಮೈಮಾಗ  ||...

ಬೆಳಗಾಗುವ ತನಕ ಕುಳಿತು ನೋಡೋ ನಿನ್ನ ತಿಳುವಳಿಕೆ ಜ್ಞಾನವನ್ನು ||ಪ|| ಬಲು ವಿಷಯಗಳಲಿ ಬಳಲಿಸಿ ತನುತ್ರಯ ವಳಗ ಹೊರಗೆ ಸುಳಿದಾಡುವ ಮನವೇ ||೧|| ಕಣ್ಣು ಮುಚ್ಚಿ ಕೈಕಾಲು ತಣ್ಣಗೆ ಮಾಡುವ ಕುನ್ನಿ ಮನವೇ ||೨|| ನಿದ್ರೆ ಹತ್ತಿ ಮಲಗಿರ್ದ ಕನಸಿನೊಳು ಗದ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....