ವಚನ ಸಂಪತ್ತು
Latest posts by ಸಿಂಪಿ ಲಿಂಗಣ್ಣ (see all)
- ಕಣ್ಮಸಕು - June 21, 2020
- ಮಾಡುವುದು ಮತ್ತು ಮುರಿಯುವುದು - February 19, 2020
- ಯಾರದು? - January 3, 2020
ಜೀವನದ ನೆನಹುಗಳ ಮನದಿ ಮೆಲುಕಾಡಿಸಲು ನೀನಿತ್ತ ವಚನಗಳ ನುಡಿಗೆಕುಲುಕಾಡಿಸಲು || ವಚನ ದೇಗುಲದಲ್ಲಿ ಕಂಗೊಳಿಸುತಿದೆ ಶಿಲ್ಪ ವಚನವೊಂದರಲಿ ಕಂಡುಬರುತಿದೆ ಕಲ್ಪ || ವಚನವೆಂದರೆ ಒಂದು ಗೊಂಚಲಿನ ಸವಿದ್ರಾಕ್ಷಿ ನುಡಿನುಡಿಗು ರಸದುಂಬಿ ಬೀಗಿನಿಂತಿದೆ ಸಾಕ್ಷಿ|| ಕನ್ನಡದ ಪುಣ್ಯವದು ಹಣ್ಣಿಬಂದಿಹ ಕಾಲ ಕನ್ನಡ ವಾಣಿ ಮನದಿಂಬುಗೊಂಡಿಹ ಕಾಲ || ಮಾತಿಗೆಟುಕದ ಭಾವ ಶಬ್ದದಲಿ ತುಂಬಿಟ್ಟು ಚಿನ್ನರನ್ನಗಳಾಸ್ತಿ ಹರಸಿರುವೆ ನಮಗಿಟ್ಟು|| […]