ಗಂಗಮ್ಮ ತಂಗಿ

ಕೊಂಬಣಸು, ಕೊರಳಹುಲಿಗೆಜ್ಜಿಗಳಿಂದ ನಂದಿಯನ್ನು ಸಿಂಗರಿಸಿ ಶಿವನು ಪ್ರಯಾಣ ಹೊರಡುತ್ತಾನೆ. ಅದೆಲ್ಲಿಗೆ ? ದಾರಿಯಲ್ಲಿ ಒಂದು ಹಳ್ಳ. ಹಳ್ಳದ ದಂಡೆಯಲ್ಲಿ ಹೂ ಕೊಯ್ಯುತ್ತಿರುವ ರಮಣಿಯನ್ನು ಕಂಡು ಶಿವನು - "ಜಾಣೇ, ನಮ್ಮ ಲಿಂಗಪೂಜೆಗೊಂದು ಹೂ ಕೊಡು"...