ಪ್ರಿಯ ಸಖಿ, ಹೇಳಿದರೆ ಹಾಳಾಗುವುದೋ ಈ ಅನುಭವದ ಸವಿಯು ಹೇಳದಿರೆ ತಾಳಲಾರನೋ ಕವಿಯು! ಕುವೆಂಪು ಅವರು ‘ಉಭಯ ಸಂಕಟ’ ಕವನದ ಈ ಸಾಲುಗಳು ಎಷ್ಟೊಂದು ಮಾರ್ಮಿಕ ವಾಗಿವೆಯಲ್ಲವೇ?’ ಎದೆಯೊಳಗೆ ಅವ್ಯಕ್ತವಾಗಿರುವ ಭಾವಗಳು ತಕ್ಕ ಮೂರ್ತರೂಪ ಪಡೆಯುವುದು ಎಂತಾ ...

ತೋಟವಿದೆ ತನಗೆ, ಸುಖಿ ತಾನು, ಎಂದನು ಮಾಲಿ; ಎಳನೀರು, ರಸಬಾಳೆ, ಕಸಿಮಾವು, ಚೆಂಜೇನು! ಬೇಕು ಬಾಳಿಗೆ ಒಂದು ತೋಟ, ಏನೇ ಇರಲಿ !- ಚಿಂತೆಯೂ ಒಂದಿದೆ : ಇವನು ಕಾಯುವುದೆಂತು? ಬೇಲಿಯಿದೆ ಎಂದು ನಂಬಿದೆ ತೋಟ ; ಆ ಬೇಲಿ ಮುಳ್ಳಿರುವ ತನಕ ಆತಂಕ ತನಗಿಲ್ಲ...

ಸಾಹಿತ್ಯ ಸಾಗರದ ದಡದಿ ನಿಲ್ಲುತಲಂದು ನೋಡಿದೆನು ಆಸೆಯಿಂ ಅಲೆಗಳೆಡೆಗೆ ಒಳಗೆ ಹುಡುಗಿಹ ಮುತ್ತುರತ್ನಗಳನೊಯ್ಯುವೆನೆ ಕನ್ನಡಮ್ಮನ ಅಡಿಗೆ ಮಾಲೆಯಾಗಿಡಲು! ದೂರದಿಂ ಕುಣಿಯುತ್ತ ಹತ್ತಿರಕೆ ಬಂದಿತಲೆ, ನೋಡುತಲೆ ಧೀಗೆಟ್ಟೆ ರೌದ್ರರೂಪ! ಸಾಗರದಿ ಮುಳುಗುತ್...

ಅಕೊ ಮೂಡ ಬಯಲಿನಲಿ ಬೆಳ್ನೆರೆಯ ಚೆಲ್ಲಿಹರು ಅದೋ ಮೂಡ ಬಾನಿನಲಿ ರವಿ ಕಾರುತಿಹನು! ಭುವಿಯೆಲ್ಲ ಬೆಳಕಿನಾ ಮುನ್ನೀರಂತಾದುದು; ಗಿರಿಯೆಲ್ಲ ನಗುವಂತೆ ತಲೆಯೆತ್ತಿ ನೋಡುವುದು. ಚಂದಿರನ ಓಡಿಸಿತು ಇಬ್ಬನಿಯ ಮಳೆಯು; ಬಿಳಿವಣ್ಣು ತಾರಕೆಯ ಹಕ್ಕಿಗಳು ಕುಟುಕ...

ಮದ ಮತ್ಸರ ಬಿಡದು. ಮನದ ಕನಲು ನಿಲ್ಲದು. ಒಡಲ ಗುಣ ಹಿಂಗದು. ಇವ ಮೂರನು ಬಿಡದೆ ನಡಿಸುವನ್ನಕ್ಕ, ಘನವ ಕಾಣಬಾರದು. ಘನವ ಕಾಂಬುದಕ್ಕೆ, ಮದಮತ್ಸರವನೆ ಬಿಟ್ಟು, ಮನದ ಕನಲ ನಿಲಿಸಿ, ಒಡಲ ಗುಣವನೆ ಹಿಂಗಿಸಿ, ತಾ ಮೃಡರೂಪಾದಲ್ಲದೆ, ಘನವ ಕಾಣಬಾರದೆಂದರು ನ...

ನೂರು ಅಶ್ವಮೇಧ ಯಜ್ಞ ಮಾಡಿದರೆ ಯಾರು ಬೇಕಾದರೂ ಆಗಬಹುದು ಇಂದ್ರ ಹೌದೊ ಅಲ್ಲವೊ? ಆದರೆ ಸಾವಿರ ಯಜ್ಞ ಮಾಡಿದರೂ ಯಾರೂ ಚಂದ್ರ ಆಗೋದು ಸಾಧ್ಯವಿಲ್ಲ ಗೊತ್ತು ತಾನೇ? ಸೂರ್ಯ ಅವನೊಬ್ಬನೇ ಇರಬಹುದು ಆದರೆ ಚಂದ್ರ ನಾನೊಬ್ಬನೆ.  ಸೂರ್ಯನಿಗೂ ಚಂದ್ರ ಆಗೋದು ...

ಪ್ರಿಯ ಸಖಿ, ಅಸಹಜ ಸಾವನ್ನು ಕಂಡು ಮನಕರಗದವರುಂಟೇ? ಸಾವು ಎಲ್ಲ ಜೀವಿಗೂ ಸಹಜವೇ. ಬೇಕಾದುದೇ. ಕವಿ ಪೇಜಾವರ ಸದಾಶಿವರಾಯರು ತಮ್ಮ ‘ಸಾವು’ ಎಂಬ ಸುನೀತದಲ್ಲಿ (ಸಾನೆಟ್) ಸಾವು ಸಹಜವು ನಿಜವೆ. ಸಾವಿಲ್ಲದೊಡೆ ಬಾಳು ನೋವಿನೋಲುಗ ಜೀವದಾಧಿಕ್ಯಗೋಳು ಎನ್ನ...

ಮದುವೆ ಸಂದರ್ಶನ ನಡೆಯುತ್ತಿತ್ತು. ಭಾವಿ ಮಾವ ಹುಡುಗನನ್ನು ಮಾತನಾಡಿಸತೊಡಗಿದ: ಭಾ.ಮ: “ನಿಮ್ಮ ವಿದ್ಯಾಭ್ಯಾಸ?” ಹುಡುಗ ತುಟಿಪಿಟಿಕ್ ಎನ್ನಲಿಲ್ಲ. ಭಾ.ಮ: “ನಿಮ್ಮ ಕೆಲಸುಮಾಡುವ ಕಂಪನಿ ಹೆಸರು?” ಹುಡುಗ ತುಟಿ ಬಿಚ್ಚಲಿ...

ಅಕ್ಕಿಯಾರಿಸುವಾಗ ಚಿಕ್ಕ ನುಚ್ಚಿನ ನಡುವೆ ಬಂಗಾರವಿಲ್ಲದ ಬೆರಳು; ತಗ್ಗಿರುವ ಕೊರಳಿನ ಸುತ್ತ ಕರಿಮಣಿಯೊಂದೆ ಸಿಂಗಾರ ಕಾಣದ ಹೆರಳು; ಹೆರಳಿನ ಭಾರಕ್ಕೆ ತುಂಬಿರುವ ಕೆನ್ನೆಯಲಿ ಹದಿನಾರು ವರುಷದ ನೆರಳು; ದೀಪದಂತರಳಿದ ಸಿರಿಗಣ್ಣ ಸನ್ನೆಯಲಿ ಹುಚ್ಚುಹೊಳ...

ಕರೆಕರೆದು ಬರುವೆನೊ ಬಂದೆನೊ ಇದೊ ಬಂದೆ, ಕರ್ಣಾಟ ಸಾಗರ ಸೇರಽಲು; ತಿಳಿನೀರ ತಳವನ್ನು ಸೇರಲು!  ||ಕರೆ|| ಕೊಡಗಿನ ಮಲೆನಾಡ ಶಿಖರದೊಳುದಯಿಸಿ ಹರಿಹರಿದೆ ಕನ್ನಡ ರಾಜ್ಯದೊಳ್; ಕವಿರಸದ ಹನಿಯಾಗಿ ಸೇರಽಲು! ಕಾಂತಿಯೊ ಇದು ಒಂದು ಕ್ರಾಂತಿಗೆ ಸಮನಾಗಿ ಕರ್...

1...2021222324...37

ಪೆಟ್ರೋಲ್ ವಾಸ್ನೆ ಮೂಗಿಗೆ “ಗಫ್” ಅಂತಾ ಬಡೀತು! ಐದಾರು ಕ್ಯಾನ್‌ಗಟ್ಟಲೆ ಮನೆ ಸುತ್ತಮುತ್ತ ಉಗ್ಗಿ ಬಾಗಿಲು ಕಿಟಕಿ ಸಂಧಿನಿಂದ ಧುಭುಧುಭು – ಪೆಟ್ರೋಲ್ ಸುರಿವಿದ ತೀರಿಗೆ ಅದು ಹಳ್ಳ ಕೊಳ್ಳವಾಗಿ ಮನೆಯೊಳಕ್ಕೆ ಜಗ್ಗಿ ಹರಿದು ಬಂತು! ಮಲಗಿದ್ದ ಹಾಸಿಗೆ, ದಿಂಬು, ಹೊ...

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...