ಹಗಮಲ್ಲಿ ದಿಗಮಲ್ಲಿ

ಅಜ್ಜಿಗೆ ಮೊಮ್ಮಗಳೊಬ್ಬಳ ಹೊರತು ಇನ್ನಾರೂ ಇರಲಿಲ್ಲ. ಮೊಮ್ಮಗಳು ದೊಡ್ಡವಳಾದಳೆಂದು ತಕ್ಕವರನಿಗೆ ಕೊಟ್ಟು ಲಗ್ನಮಾಡಿದ್ದಳು. ಒಳ್ಳೆಯದಿನ ನೋಡಿ ಮೊಮ್ಮಗಳನ್ನು ಕರೆಯಲಿಕ್ಕೆ ಆಕೆಯ ಗಂಡನು ಬಂದನು. ಅಜ್ಜಿ ಬಲು ಹಿಗ್ಗಿನಿಂದ ಮೊಮ್ಮಗಳನ್ನು ಎರಡು ದಿವಸ ಇಟ್ಟುಕೊಂಡು, ಹೋಳಿಗೆ...