ಕನ್ನಡದ ಏಳಿಗೆ

ಕನ್ನಡದ ತಿಳಿನೀರ ನಾನೊಂದು ಬೊಗಸೆಯಲಿ ಕುಡಿದು ನೋಡಿದೆನದರ ಸವಿಯನ್ನು ನಾನೊ; ಕುಡಿಕುಡಿದು ಮುದವಾಂತು ನಲ್ಗಬ್ಬ ಸಾರವನು ಬಾಯ್ದುದಿಯೊಳನವರತ ಇರಿಸಲೆಳಸಿದೆನೊ! ಎಷ್ಟು ತತ್ವದ ಗೀತ?  ಎಷ್ಟು ಮೋಹದ ಮಾತು? ವಚನರಾಶಿಯ ಸಾರ, ಪುರಾಣಗಳ ಮೇಳ! ಗದ್ಯ...