ಬನ್ನಿ ಓ ತಾರೆಗಳೆ ನೆಲಕಿಳಿದು ಬನ್ನಿ ಆಗಸದ ಕಾಂತಿಯನು ಭೂಮಿಗೂ ತನ್ನಿ, ಕೋಟಿ ಮೈಲಿಗಳಾಚೆ ಹೊಳೆವ ತೇಜಗಳೆ ಬಂದು ನಮ್ಮನು ಹರಸಿ ಕಾಂತಿಗೋಳಗಳೆ. ಸೂರ್ಯ ಚಂದಿರ ಮುಗಿಲ ಜೊತೆ ಬಾಳುವವರೆ ಗಾಳಿ ಉಯ್ಯಾಲೆಯಲಿ ತೂಗಿಕೊಳುವವರೆ, ಎಂದೂ ಆರದೆ ಉರಿವ ನಂದಾದ...

ಮಗ ತುಂಬಾ ಚೇಷ್ಠೆ ಮಾಡುವ ಸ್ವಭಾವದವನು. ತಂದೆಗೆ ಒಮ್ಮೆ ಭಾರಿ ಕೋಪಬಂದು ‘ಕತ್ತೆ ಮಗನೆ’ ಎಂದು ಮಗನನ್ನು ಬೈದರು. ಇದನ್ನು ಕೇಳಿಸಿಕೊಂಡ ಮಗ “ಹೌದೆನಪ್ಪಾ, ನನಗೆ ಈಗಲೇ ತಿಳಿದಿದ್ದು ನನ್ನ ಅಪ್ಪ ‘ಕತ್ತೆ’ ಎನ್ನುವ ವಿಚಾರ”. ***...

ದಾರಿವಿಡಿದು ಬರಲು, ಮುಂದೆ ಸರೋವರವ ಕಂಡೆ. ಸರೋವರದ ಮೇಲೊಂದು ಮಹಾದಳದ ಕಮಲವ ಕಂಡೆ. ಆ ಕಮಲವರಳಿ ವಿಕಸಿತವಾಯಿತ್ತು. ಪರಿಮಳವೆಸಗಿತ್ತು. ಆ ಪರಿಮಳದ ಬೆಂಬಳಿಗೊಂಡು ಹೋಗುತಿರಲು, ಮುಂದೆ ಒಂದು ದಾರಿಯ ಕಂಡು, ಆ ಮುಂದಳ ದಾರಿಯಲ್ಲಿ ಹೋದವರೆಲ್ಲರು ನಿಂದ...

ಇದು ನಿರಂತರವೂ ರಣರಂಗ, ಇಲ್ಲಿ ಯಾವುದೇ ಒಂದು ಆಯುಧ, ಒಬ್ಬ ವೀರನಾಯಕ, ಒಂದು ವಾಹನ, ಒಂದು ರೀತಿಯ ಕವಚ, ಒಂದು ತಂತ್ರ, ಒಂದು ಕೈಚಳಕ, ಒಂದು ವ್ಯೂಹ, ಒಂದು ಬಗೆಯ ಸೈನ್ಯ, ಒಂದು ನೆರೆಬೆಂಬಲ, ಒಂದು ತಯಾರಿ, ಒಂದು ಯುದ್ಧ ಘೋಷಣೆ, ಒಂದು ಅವಧಿ…...

‘ಆಯ್ಕೆ ಸಮಿತಿಯಿಲ್ಲಿ ನೀವಿದ್ದರೆ ರಾಷ್ಟ್ರಕವಿ ಗೌರವಕ್ಕೆ ಯಾರನ್ನು ಸೂಚಿಸುತ್ತಿದ್ದಿರಿ?’ ಕವಿ ಜಿ.ಎಸ್. ಶಿವರುದ್ರಪ್ಪ ಅವರಿಗೆ ಕವಿ ಗೌರವ ದೊರೆತಹೊಸತದು. ಸಂವಾದ ಕಾರ್ಯಕ್ರಮವೊಂದರಲ್ಲಿ ಸಹೃದಯರೊಬ್ಬರು ಮೇಲಿನ ಪ್ರಶ್ನೆ ಕೇಳಿದಾಗ ಇಡೀ ಸಭಾಂಗಣ ...

ಕಟುಕರನೂ ಕರಗಿಸುವ ಹೂ ನಗು, ಹಾಲು ಕೆನ್ನೆ ಪುಟ್ಟ ಹೆಜ್ಜೆಯ ಬೆಳದಿಂಗಳ ಮಗು: ನಕತ್ರದ ಮಿಂಚು, ಸಾಕ್ಷಾತ್ ದೇವರ ಸಂಚು. *****...

ದುಂಡಗೆ ಬಿಳಿಯಾಗಿ ಮುದ್ದುಮುದ್ದಾದ ಗೊಬ್ಬರದ ಹುಳಗಳನ್ನು ನೋಡದವರು ಯಾರು! ಇವು ಹಟ್ಟಿಗೊಬ್ಬರದಲ್ಲಿ ಹುಟ್ಟಿ ಅಲ್ಲೆ ಬೆಳೆಯುತ್ತವೆ. ಕೆಲವೊಮ್ಮೆ ಹಳೆಹುಲ್ಲು ಛಾವಣಿಯಲ್ಲೂ ಕಾಣಿಸುವುದುಂಟು. ಟಪ್ಪನೆ ಕೆಳಕ್ಕೆ ಬಿದ್ದು ವದ್ದಾಡುತ್ತವೆ. ಹೊರಕ್ಕೆ ಬ...

ಇವನು ಆಕಾಶದಾಗೆ ಇರೋ ಅಷ್ಟು ಹೊತ್ತು ಜನರೆಲ್ಲ ಇವನ ತೊತ್ತು ಬೆವರ್‍ ಸುರಿಸುತ್ತಲೇ ಇರ್‍ಬೇಕು ಎಷ್ಟು ಸುರಿಸಿದರೂ ಇನ್ನಷ್ಟು ಮತ್ತಷ್ಟು ಹಿಂಡಿ ಹೀರುವ ಇವನೊಬ್ಬ ಬೆಂಕಿ ನವಾಬ ಯಾವುದೋ ಗುಲಾಮಗಿರಿ ಕಾಲದ ಕೆಂಪು ಮೂತಿ ಸಾಹೇಬ *****...

ಅದು ಊರನ್ನು ದಂಗುಬಡಿಸುವ ವಿಷಯವಾಗಿತ್ತು. ಆಶಾ ಮತ್ತು ರಮೇಶ ಮದುವೆ ಮಾಡಿಕೊಂಡರಂತೆ ಎಂಬ ಸುದ್ದಿ ಅದು. ಅಕ್ಕಪಕ್ಕದ ಮನೆಯ ಆಶಾ ಮತ್ತು ರಮೇಶ ಒಟ್ಟಿಗೆ ಬೆಳೆದವರು. ವೈದಿಕರ ಮನೆಯ ರಮೇಶ ಮಾಂಸ ಮಡ್ಡಿ ತಿನ್ನುವ ಗೀತಾಳ ಮನೆಯಲ್ಲಿ ಗಂಟೆಗಟ್ಟಲೆ ಸಮಯ ...

1...1617181920...53

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...