ಹೇಳದಿದ್ದರು ನೀನು
ಲಕ್ಷ್ಮೀನಾರಾಯಣ ಭಟ್ಟರು ಕನ್ನಡ ಕಾವ್ಯದ ಜೀವಂತಿಕೆಯನ್ನು ಹೆಚ್ಚಿಸುತ್ತ ಆಧುನಿಕ ಕನ್ನಡ ಕಾವ್ಯವನ್ನು ಬೆಳೆಸುತ್ತ ಬಂದಿರುವ ಪ್ರಮುಖ ಕವಿಗಳಲ್ಲಿ ಒಬ್ಬರು.ಅವರ ಅನುವಾದಗಳು ಕನ್ನಡ ಕಾವ್ಯಕ್ಕೆ ಕೊಟ್ಟ ಬೆಲೆಬಾಳುವ ಉಡುಗೊರೆಗಳು ಮಾತ್ರವಾಗಿರದೆ ಸ್ವಂತಕ್ಕೆ ಪಡೆದ ರಕ್ತದಾನವೂ ಆಗಿದೆ. ಸ್ವಂತ ಪ್ರತಿಭೆ, ಶ್ರೇಷ್ಠಕವಿಗಳ ಆಪ್ತ ಅಧ್ಯಯನ ಎರಡೂ ಅವರನ್ನೂ ಎತ್ತರಕ್ಕೆ ಹತ್ತಿಸಿವೆ. ಅಧ್ಯಯನ, ಚಿಂತನೆ ಇವು ಅವರಲ್ಲಿ ಹಾಸು ಹೊಕ್ಕಾಗಿ ಒಂದನ್ನು ಮತ್ತೊಂದು ಬಲಗೊಳಿಸುತ್ತ ಬಂದಿವೆ.
Latest posts by ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್ (see all)
- ಕೃಷ್ಣಭಕ್ತರ ಕುಣಿತ - April 15, 2021
- ಸೀನಿಯರ್ ಕ್ರಿಕೆಟಿಗನ ಸಂಜೆ - April 8, 2021
- ಅರ್ಧಸತ್ಯದ ಪ್ರಾಪ್ತಿ - April 1, 2021
ಹೇಳದಿದ್ದರು ನೀನು ಎಲ್ಲ ಬಲ್ಲೆನು ನಾನು ಏನಿದೆ ಎಂದು ಎದೆಯಾಳದಲ್ಲಿ; ನಿನ್ನ ಕಣ್ಣಿನೊಳೇನೊ ನೋವು ತೇಲುತ್ತಿಹುದು ಕರಿಮೋಡ ಸುಳಿದಂತೆ ಬಾನಿನಲ್ಲಿ ನೂರು ಹಳೆ ನೆನಪುಗಳು ಚೀರಿ ಹೊಮ್ಮುತ್ತಲಿವೆ ಮರವೆಯಲಿ ಹುಗಿದರೂ ಮೇಲಕೆದ್ದು; ನಮ್ಮ ಮೇಲೇ ಏಕೆ ವಿಧಿಗೆ ಈ ಬಗೆ ಜಿದ್ದು ಬೆಂದವರ ಬೆನ್ನಿಗೇ ಏಕೆ ಗುದ್ದು? ಬಾಗುವುದು ಏಗುವುದು ಸಹನೆಯಲಿ ಸಾಗುವುದು ಇಷ್ಟಕೇ ಮುಗಿಯಿತೇ […]