Day: January 12, 2019

#ಕವಿತೆ

ಪ್ರತಿಮೆ

0
ಕಾಸರಗೋಡಿನ ಕಾರಡ್ಕ ಎಂಬಲ್ಲಿ ೧೯೪೦ ರಲ್ಲಿ ಜನನ. ಕಾಸರಗೋಡು, ತಿರುವನಂತಪುರ, ಹೈದರಾಬಾದುಗಳಲ್ಲಿ ವಿದ್ಯಾಭ್ಯಾಸ. ಇಂಗ್ಲೀಷ್ ಸಾಹಿತ್ಯದಲ್ಲಿ ಎಂ. ಎ.; ಭಾಷಾಶಾಸ್ತ್ರದಲ್ಲಿ ಪಿಎಚ್.ಡಿ. ಕೇರಳದ ಹಲವೆಡೆ ಇಂಗ್ಲೀಷ್ ಅಧ್ಯಾಪಕರಾಗಿ ವೃತ್ತಿಜೀವನ ಆರಂಭ; ಆನಂತರ ಹೈದರಾಬಾದಿನ ಉನ್ನತ ಶಿಕ್ಷಣ ಸಂಸ್ಥೆ ಸೆಂಟ್ರಲ್ ಇನ್ಸ್‌ಟಿಟ್ಯೂಟ್ ಆಫ್ ಇಂಗ್ಲಿಷ್ ಎಂಡ್ ಫಾರಿನ್ ಲಾಂಗ್ವೇಜಸ್‌ನಲ್ಲಿ ಪ್ರಾಧ್ಯಾಪಕ.೨೦೦೨ರಲ್ಲಿ ನಿವೃತ್ತಿ.ಅಮೇಲೆ ಅಮೆರಿಕ, ಯೆಮೆನ್ ದೇಶಗಳಲ್ಲಿ ಅಧ್ಯಾಪನ. ಸದ್ಯ ಹೈದರಾಬಾದಿನಲ್ಲಿ ವಾಸ್ತವ್ಯ. ‘ಮುಖಾಮುಖಿ’ ಕವನಸಂಕಲನಕ್ಕೆ ಕೇರಳದ ಕುಮಾರನ್ ಆಶಾನ್ ಅವಾರ್ಡ್ ಮತ್ತು ಕಾಂತಾವರದ ವರ್ಧಮಾನ ಪ್ರಶಸ್ತಿ; ‘ಅವಧ’ ಕವನ ಸಂಕಲನಕ್ಕೆ ಮತ್ತು ‘ಸಮ್ಮುಖ’ ಲೇಖನ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ‘ಅಕ್ಷಯ ಕಾವ್ಯ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೧೫ರ ಸಾಲಿನ ಪ್ರಶಸ್ತಿ ಲಭಿಸಿದೆ. ಅಲ್ಲದೆ, ಪುತ್ತೂರು ಕರ್ನಾಟಕ ಸಂಘದ ನಿರಂಜನ ಪ್ರಶಸ್ತಿ, ಮತ್ತು ಶಿವಮೊಗ್ಗ ಕರ್ನಾಟಕ ಸಂಘದ ಹಾ.ಮಾ.ನಾ. ಪ್ರಶಸ್ತಿಗಳೂ ದೊರಕಿವೆ.ಕರ್ನಾಟಕ ಸಹಿತ್ಯ ಅಕಾಡೆಮಿಯ ಗೌರವ ಸಾಹಿತ್ಯ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. ತಿರುಮಲೇಶ್ ಇಂಗ್ಲೀಷ್‌ನಲ್ಲೂ ಹಲವಾರು ಲೇಖನಗಳನ್ನು ಮತ್ತು ಪುಸ್ತಕಗಳನ್ನು ಬರೆದಿದ್ದಾರೆ.
*****
ತಿರುಮಲೇಶ್ ಕೆ ವಿ
Latest posts by ತಿರುಮಲೇಶ್ ಕೆ ವಿ (see all)

ಆತ ನಾಲ್ಕು ರಸ್ತೆಗಳು ಸೇರುವಲ್ಲಿ ಬಂದು ಅತ್ತ- ಅಳುತ್ತಲೇ ಇದ್ದ. ಕಾರುಗಳು, ಬಸ್ಸುಗಳು, ಟಾರ್ಪಲಿನ್‌ ಹೊದ್ದ ಭಾರವಾದ ಟ್ರಕ್ಕುಗಳು ಹಾದು ಹೋಗುತ್ತಲೇ ಇದ್ದುವು. ಎತ್ತಿನ ನಿಧಾನ ಗಾಡಿಗಳು ಸಾಗುತ್ತಲೇ ಇದ್ದುವು. ನಿದ್ರಿಸುವ ನಗರ ಎಚ್ಚರಾಗುತ್ತಿತ್ತು. ಮತ್ತೆ ನಿದ್ರಿಸುತ್ತಿತ್ತು ಭಾರೀ ಕಸದ ಡಬ್ಬಿಗಳ, ಬೆದೆಯೆದ್ದ ಹಂದಿಗಳ, ಎಲ್ಲಿಂದಲೋ ಬಂದು ಹೋಗುವ ರೈಲುಗಳ ನಡುವೆ ತನ್ನ ನಿರಾಳ ಆಲಸ್ಯದಲ್ಲಿ […]

#ಕವಿತೆ

ಬಾಳು ಬವಣೆ

0
ಆಂಗ್ಲಭಾಷಾ ಉಪನ್ಯಾಸಕಿ
ಪ್ರಕಟಿತ ಕೃತಿಗಳು: ಏಣಿ ಮತ್ತು ಪದಗಳೊಂದಿಗೆ ನಾನು[ ಕವನ ಸಂಕಲನಗಳು,] ಪಾಶ್ಚಿಮಾತ್ಯ ಸಾಹಿತ್ಯ ಲೋಕ [ಅಂಕಣಬರಹ ಕೃತಿ]
ಪ್ರಶಸ್ತಿಗಳು:ಏಣಿ ಕವನ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಶಾರದಾ ರಾಮಲಿಂಗಪ್ಪ ದತ್ತಿ ಪ್ರಶಸ್ತಿ,
ಸಂಕ್ರಮಣ ಕಾವ್ಯ ಪ್ರಶಸ್ತಿ ೨೦೧೬, ರವಿಕಿರಣ ಸಾಹಿತ್ಯ ಪ್ರತಿಷ್ಠಾನ ಬೆಂಗಳೂರು ಪ್ರಥಮಕಥಾ ಬಹುಮಾನ ೨೦೧೮ , ತುಷಾರ ಮಾಸ ಪತ್ರಿಕೆಯ ಕ್ಯಾಲಿಫೋನರ್ಿಯಾ ಕಾವ್ಯಾಂಜಲಿ ತೃತೀಯ ಕಥಾ ಬಹುಮಾನ ೨೦೧೮ ಇತ್ಯಾದಿ ಬಹುಮಾನ ಬಂದಿದೆ.ಮೊಗವೀರ ಮಾಸಪತ್ರಿಕೆ ಮುಂಬಯಿ ೨೦೧೭ರ ಸಮಾಧಾನಕರ ಕಥಾ ಬಹುಮಾನ, ಕರಾವಳಿ ಮುಂಜಾವು ದಿನಪತ್ರಿಕೆಯದೀಪಾವಳಿ ಕಥಾ ಸ್ಪಧರ್ೆಗಳಲ್ಲಿ ಬಹುಮಾನ ಇತ್ಯಾದಿ ಬಂದಿರುತ್ತವೆ.
ನಾಗರೇಖಾ ಗಾಂವಕರ
Latest posts by ನಾಗರೇಖಾ ಗಾಂವಕರ (see all)

ಬದುಕು ಬೆಳಕಾಗಲಿಲ್ಲ ಮುಳ್ಳಿಗೆ ಸಿಕ್ಕಿಕೊಂಡ ಬಟ್ಟೆ ಮೂರಾಬಟ್ಟೆ ಅಂದಿನ ಆ ಕಾತುರ ನಿಟ್ಟುಸಿರು ಹಂಬಲಿಕೆ ಇಂದಿಲ್ಲ ಸವಿಗನಸಿಗೂ ಇಂದು ಬರ ನಿನ್ನೆ ಕಟ್ಟಿದ ಕಲ್ಪನೆಯ ಹಾಯಿ ದೋಣಿಗಳ ಸಾಲು ಇಂದು ಪಟ್ಟ ಬಿಚ್ಚಿ ಹೋಗಿ ದೆಸೆ ಕಾಣದೆ ದಿಕ್ಕಾಪಾಲು ಮೋಡ ಚದುರಿ ಬಿಸಿಲು ಇಣುಕುವ ಹೊತ್ತು ಮೈಯೊಡ್ಡಿ ತಣಿಯುವ ಕ್ಷಣ ಕಾರ್ಮೋಡಗಳು ಮುತ್ತಿ ಮುಸುರಿದ್ದೇಕೆ? ನಲ್ಲ […]