ಈ ಗೆಳೆತನ….

ನನ್ನೆಲ್ಲಾ ಪದ್ಯಗಳಲ್ಲಿರುವಂತೆ ಇಲ್ಲೂ ತಾರೆ, ಮೋಡ, ಗಾಳಿ, ಕಡಲು, ಸೂರ್ಯರಿದ್ದಾರೆ. ನಿನಗಿಷ್ಟವಾದರೆ ಓದು ಒತ್ತಾಯವಿಲ್ಲ ಇಷ್ಟವಾಗದಿದ್ದರೆ ಬೇಡ ಕಿಂಚಿತ್ತೂ ಕೋಪವಿಲ್ಲ. ಆದರೆ ನಾನು ಪ್ರೀತಿಸುವ ಗಾಳಿ, ಮೋಡ, ತಾರೆಯರನ್ನು ನಿಂದಿಸಬೇಡ. ಅವರ ಬಗ್ಗೆ ಯಾಕೆ...

ನದಿ

ಮಳೆಗಾಲದಲ್ಲಿ ಬಸಿರಿಯಂತೆ ಮೈತುಂಬಿ ಬಾಯ್ಗೆ ಸಿಕ್ಕ ಜೊಂಡು ಹುಲ್ಲನ್ನೆಲ್ಲ ತಿಂದುಂಡ ನದಿ, ಈಗ ಬೇಸಿಗೆಯಲ್ಲಿ ಬಾಣಂತಿಯಂತೆ ಕೃಶವಾಗಿ ಬೆಂಡು; ಹೆತ್ತು ಮರಳ ಹಾಸಿಗೆಯ ಮೇಲೆ ಮಲಗಿಸಿದ್ದು ಮಾತ್ರ ಒಂದಿಷ್ಟು ಬರೀ ಕರಿಕಲ್ಲ ಗುಂಡು. *****