ದಬ್ಬಾಳಿಕೆ
ಕತ್ತಲ ಗುಣ ಸೌಮ್ಯ ಸೌಜನ್ಯ ಅದರ ಮೇಲೆ ಬೆಳಕು ಮಿಂಚಾಗಿ ಎರಗಿ ನಡೆಸುತ್ತೆ ದೌರ್ಜನ್ಯ *****
ಮಳೆ ಸುರಿಯುತ್ತಿದೆ. ಮನೆಯಿಂದ ಹೊರಬೀಳುವುದು ಕಷ್ಟ ಎನ್ನುವಷ್ಟು ಮಳೆ. ನೆಲ ಮುಗಿಲುಗಳ ಸಲ್ಲಾಪ ನಿರಂತರ. ಭೂಮಿತಾಯಿ ಹಸಿರು ಸೆರಗು ಹೊದ್ದು ನಗುತ್ತಿರುವಾಗಲೇ ನೆನಪುಗಳು ಸುಗ್ಗಿ. ಮಳೆ ನೀರಿಗೆ ಸಮುದ್ರ ಸೇರುವ ಆತುರ. ಸುರಿವ ಮಳೆಯಲ್ಲೂ ರೇನ್ ಕೋಟ್ ತೊಟ್ಟು ಸಮುದ್ರದ ಆರ್ಭಟ ನೋಡಲು ಕಡಲದಂಡೆಗೆ ಬಂದಾಗಿತ್ತು. ಭೂಭಾಗವನ್ನು ಕ್ಶಣರ್ಧದಲ್ಲಿ ನುಂಗಿ ಹಾಕುವಂತೆ ಬೋರ್ಗರೆವ ಕಡಲ ಅಲೆ. […]