Day: January 22, 2021

#ಹನಿಗವನ

ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೬

0
ಮೂಲತಃ ಹಾಸನದವರು. ಓದಿದ್ದು ಹಾಸನದ ಮಲೆನಾಡು ಎಂಜಿನಿಯರಂಗ್ ಕಾಲೇಜಿನಲ್ಲಿ ಬಿ.ಇ. ಹಾಗು ಎಂ.ಟೆಕ್. ಈಗ ಅದೇ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಪಕರಾಗಿ ಕಾರ್‍ಯನಿರ್‍ವಹಣೆ. ‘ಮೊದಲ ತೊದಲು’, ‘ಬೆಳಕಿನ ಬೇಲಿ’, ‘ಗೋಡೆಗಳ ನಡುವೆ...’ ಮತ್ತು ‘ಕುಶಲೋಪರಿ’ ಪ್ರಕಟಿತ ಕೃತಿಗಳು.

ಅವಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾಳೆ, ನನ್ನ ಏಕಾಂತವನ್ನು ಒಂಟಿ ಮಾಡಿ. *****

#ಇತರೆ

ವಾತಾಪಿ ಜೀರ್ಣೋಭವ

0
ಕಾಸರಗೋಡಿನ ಕಾರಡ್ಕ ಎಂಬಲ್ಲಿ ೧೯೪೦ ರಲ್ಲಿ ಜನನ. ಕಾಸರಗೋಡು, ತಿರುವನಂತಪುರ, ಹೈದರಾಬಾದುಗಳಲ್ಲಿ ವಿದ್ಯಾಭ್ಯಾಸ. ಇಂಗ್ಲೀಷ್ ಸಾಹಿತ್ಯದಲ್ಲಿ ಎಂ. ಎ.; ಭಾಷಾಶಾಸ್ತ್ರದಲ್ಲಿ ಪಿಎಚ್.ಡಿ. ಕೇರಳದ ಹಲವೆಡೆ ಇಂಗ್ಲೀಷ್ ಅಧ್ಯಾಪಕರಾಗಿ ವೃತ್ತಿಜೀವನ ಆರಂಭ; ಆನಂತರ ಹೈದರಾಬಾದಿನ ಉನ್ನತ ಶಿಕ್ಷಣ ಸಂಸ್ಥೆ ಸೆಂಟ್ರಲ್ ಇನ್ಸ್‌ಟಿಟ್ಯೂಟ್ ಆಫ್ ಇಂಗ್ಲಿಷ್ ಎಂಡ್ ಫಾರಿನ್ ಲಾಂಗ್ವೇಜಸ್‌ನಲ್ಲಿ ಪ್ರಾಧ್ಯಾಪಕ.೨೦೦೨ರಲ್ಲಿ ನಿವೃತ್ತಿ.ಅಮೇಲೆ ಅಮೆರಿಕ, ಯೆಮೆನ್ ದೇಶಗಳಲ್ಲಿ ಅಧ್ಯಾಪನ. ಸದ್ಯ ಹೈದರಾಬಾದಿನಲ್ಲಿ ವಾಸ್ತವ್ಯ. ‘ಮುಖಾಮುಖಿ’ ಕವನಸಂಕಲನಕ್ಕೆ ಕೇರಳದ ಕುಮಾರನ್ ಆಶಾನ್ ಅವಾರ್ಡ್ ಮತ್ತು ಕಾಂತಾವರದ ವರ್ಧಮಾನ ಪ್ರಶಸ್ತಿ; ‘ಅವಧ’ ಕವನ ಸಂಕಲನಕ್ಕೆ ಮತ್ತು ‘ಸಮ್ಮುಖ’ ಲೇಖನ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ‘ಅಕ್ಷಯ ಕಾವ್ಯ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೧೫ರ ಸಾಲಿನ ಪ್ರಶಸ್ತಿ ಲಭಿಸಿದೆ. ಅಲ್ಲದೆ, ಪುತ್ತೂರು ಕರ್ನಾಟಕ ಸಂಘದ ನಿರಂಜನ ಪ್ರಶಸ್ತಿ, ಮತ್ತು ಶಿವಮೊಗ್ಗ ಕರ್ನಾಟಕ ಸಂಘದ ಹಾ.ಮಾ.ನಾ. ಪ್ರಶಸ್ತಿಗಳೂ ದೊರಕಿವೆ.ಕರ್ನಾಟಕ ಸಹಿತ್ಯ ಅಕಾಡೆಮಿಯ ಗೌರವ ಸಾಹಿತ್ಯ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. ತಿರುಮಲೇಶ್ ಇಂಗ್ಲೀಷ್‌ನಲ್ಲೂ ಹಲವಾರು ಲೇಖನಗಳನ್ನು ಮತ್ತು ಪುಸ್ತಕಗಳನ್ನು ಬರೆದಿದ್ದಾರೆ.
*****
ತಿರುಮಲೇಶ್ ಕೆ ವಿ
Latest posts by ತಿರುಮಲೇಶ್ ಕೆ ವಿ (see all)

ಇಲ್ವಲನೂ ವಾತಾಪಿಯೂ ಅಣ್ಣತಮ್ಮಂದಿರು. ರಾಕ್ಷಸ ಕುಲಕ್ಕೆ ಸೇರಿದವರಾದ ಇವರಿಗೆ ಮಣಿಮತಿಯೆಂಬ ಹೆಸರಿನ ರಾಜಧಾನಿಯಿರುವ ಸ್ವಂತದ ರಾಜ್ಯವೊಂದಿತ್ತು. ತಮಗೆ ಇಂದ್ರನಷ್ಟು ಬಲಶಾಲಿಯಾದ ಮಗ ಬೇಕೆಂದು ಅವರು ಬ್ರಾಹ್ಮಣರನ್ನು ಪ್ರಾರ್ಥಿಸಿದರೂ ಇಷ್ಟಾರ್ಥ ಸಿದ್ಧಿಯಾಗದ ಕಾರಣ ಅವರು ಬ್ರಾಹ್ಮಣದ್ವೇಷಿಗಳಾಗುತ್ತಾರೆ. ಇವರ ಬ್ರಾಹ್ಮಣದ್ವೇಷದ ಒಂದು ಮಾದರಿಯೆಂದರೆ, ಬ್ರಾಹ್ಮಣರನ್ನು ಮನೆಗೆ ತಂದು ಕೊಂದು ತಿನ್ನುವುದು. ಇದಕ್ಕೆ ಅವರು ಒಂದು ಉಪಾಯವನ್ನು ಕಂಡುಕೊಂಡಿರುತ್ತಾರೆ. ಇಲ್ವಲ […]

#ಅನುವಾದ

ಮಿಸ್ಟರ್ ಕಾಗಿಟೋ ನರಕದ ಬಗ್ಗೆ ಹೀಗೆಂದುಕೊಳ್ಳುತ್ತಾನೆ

0
ನಾಗಭೂಷಣಸ್ವಾಮಿ ಓ ಎಲ್
Latest posts by ನಾಗಭೂಷಣಸ್ವಾಮಿ ಓ ಎಲ್ (see all)

ನರಕದ ತಳಾತಳದಲ್ಲಿರುವ ಸೀಮೆ. ಎಲ್ಲರೂ ಅಂದುಕೊಂಡಂತೆ ಅಲ್ಲಿ ನಿರಂಕುಶಾಧಿಕಾರಿಗಳಿಲ್ಲ. ಮಾತೃಹಂತಕರು, ಮಾತೃಗಾಮಿಗಳು, ಹೆಣಗಳನ್ನು ದರದರ ಎಳೆದಾಡಿದವರು, ದೇಶದ್ರೋಹಿಗಳು ಯಾರೂ ಇಲ್ಲ. ನರಕದ ತಳಾತಳ ಕಾಲವಿದರ ಆಶ್ರಯತಾಣ, ಎಲ್ಲೆಲ್ಲೂ ಕನ್ನಡಿಗಳು, ಸಂಗೀತ ವಾದ್ಯಗಳು, ವರ್ಣಚಿತ್ರಗಳು. ಸುಮ್ಮನೆ ನೋಡಿದರೆ ಇದು ನರಕದ ಡಿಲಕ್ಸ್ ಡಿಪಾರ್ಟ್ಮೆಂಟು ಅನ್ನಿಸುತ್ತದೆ; ಕುದಿಯುವ ಎಣ್ಣೆ ಕೊಪ್ಪರಿಗೆ ಇಲ್ಲ. ಮೈ ಕೊಯ್ಯುವ ಗರಗಸವಿಲ್ಲ. ಧಗಧಗ ಉರಿಯುವ […]