ಎಲ್ಲೋ ಕಳಕೊಂಡ ಖಾಲಿ ಪುಟವ ನಿನ್ನ ಕಣ್ಣಲ್ಲೇ ಹುಡುಕುವ ಹಟವ ಕೊಂದುಬಿಡಬೇಕೆಂದಿದೇನೆ ಗೆಳತಿ, ಎಲ್ಲರಂತೆ ಬದುಕುವ ಚಟವ ನನ್ನದಾಗಿಸಿಕೊಳ್ಳುವ ಸಲುವಾಗಿ! *****...

ಆತ್ಮರತಿ ಅಪಾಯಕಾರಿಯಾದದ್ದು. ನಮ್ಮಲ್ಲಿ ಆತ್ಮರತಿ ಮತ್ತು ಆತ್ಮ ವಿಶ್ವಾಸಗಳನ್ನು ಒಂದೇ ಎಂಬಂತೆ ನಂಬಿಸುವ ಆತ್ಮರತಿ ರೋಗಿಗಳು ಇದ್ದಾರೆ. ಆತ್ಮವಿಶ್ವಾಸವು ಮನುಷ್ಯನ ಮಾನಸಿಕ ವಿಕಾಸಕ್ಕೆ ಬೇಕಾದ ಸ್ಥೈರ್‍ಯವನ್ನು ತಂದುಕೊಟ್ಟರೆ, ಆತ್ಮರತಿ ಸ್ವಪ್ರಶಂ...

ಇಬ್ಬರು ಕಳ್ಳರು ಊರನ್ನು ದೋಚಿದರು. ರೈತರ ಕತ್ತು ಮುರಿದರು. ಒಬ್ಬ ಹಸಿದ ತೋಳದಂತೆ ತೆಳ್ಳಗಿದ್ದ. ಇನ್ನೊಬ್ಬ ಜಗದ್ಗುರುವಿನಂತೆ ದಪ್ಪಗಿದ್ದ. ಇಬ್ಬರು ಕಳ್ಳರಲ್ಲಿ ಅಷ್ಟೇಕೆ ವ್ಯತ್ಯಾಸ? ಅವರಲ್ಲೊಬ್ಬ ಒಡೆಯ, ಇನ್ನೊಬ್ಬ ಗುಲಾಮ. ಒಡೆಯ ಕೆನೆಹಾಲು ಕುಡ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...