‘ದೊಡ್ಡ ತ್ಯಾಗಮಯಿ ನೀನು… ದಡ್ಡ. ನಿನ್ನ ಓದಿಗೆ ಕೆಲಸ ಸಿಕ್ಕರೂ ಎಷ್ಟೋ ಸಂಬಳ ಬರುತ್ತೆ. ಅಸಲು ನಿನಗೆ ಕೆಲಸ ಕೊಡೋರಾದರೂ ಯಾರು? ನಿನಗೆ ಬರೋ ಸಂಬಳ ನಿನ್ನ ಹೊಟ್ಟೆಗೇ ಸಾಲ್ದು. ಮದುವೆಗೆ ಬೇಕಾಗಿರೋದು ಲಕ್ಷಗಟ್ಟಲೆ ಹಣ. ಖರ್ಚು ಮಾಡ್ದೆ ಕೂಡಿ...

ಗಾಂಧೀಜಿಯವರು ದಿನಾಂಕ ೨೫-೧-೧೯೩೫ ರಂದು ‘ಹರಿಜನ’ ಪತ್ರಿಕೆಯಲ್ಲಿ ಹೀಗೆ ಬರೆದರು : “ನನ್ನ ಬದುಕು ಒಂದು ತೆರೆದ ಪುಸ್ತಕ. ನಾನು ರಹಸ್ಯವಾಗಿ ಇಡುವುದು ಏನೂ ಇಲ್ಲ.” ತಾವು ಬರೆದಂತೆ ಬದುಕಿದ, ಆತ್ಮಸಾಕ್ಷಿಗೆ ಸದಾ ಬದ್ಧವಾದ ಮನುಷ್ಯನಾ...

ಮತ್ತೆ ಮತ್ತೆ ಹೇಳಿದ್ದನ್ನೇ ಹೇಳಬೇಕಾಗುತ್ತದೆ, ಯಾಕೆಂದರೆ ಮತ್ತೆ ಮತ್ತೆ ಶಿಕ್ಷಣ ಕ್ಷೇತ್ರ ದೂರದೃಷ್ಟಿಯ ಕೊರತೆಯಿಂದ ಬಳಲುತ್ತಿದೆ. ಅದು ಹೇಗೆ ಸಾಧ್ಯ? ನಮ್ಮಲ್ಲಿ ಎರಡೆರಡು ಮಂತ್ರಾಲಯಗಳು ಪ್ರಾಥಮಿಕ-ಪ್ರೌಢ ಮತ್ತು ಉನ್ನತ ಶಿಕ್ಷಣ ಕ್ಷೇತ್ರಗಳನ್ನ...

ನಿನ್ನ ನೆನಪೇ ನನಗೆ ಕಾವ್ಯ ಇದರ ಹೊರತು ಯಾವುದು ಭವ್ಯ? /ಪ// ಬಂದೆ ನೀನು ಬಾಳಿನಲ್ಲಿ ಮೋಡವಾಗಿ ಅಂದು ನಾ ಬಗೆದೆ ಮಳೆಯಾಗಿ ಸುರಿಯುವೆ ನೀ ಎಂದು ಆದರೇಕೊ ಮಳೆಯಾಗಲಿಲ್ಲ; ಬಿರಿದ ನೆಲ ತಣಿಯಲಿಲ್ಲ ನಾ ಕೇಳಿದ ಪ್ರೇಮ ಪದಕೆ ಆದೆ ನೀನು ಅರ್ಥ ಒಡನೆ ನುಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....