ಒಪ್ಪುವ ಉಡುಗೆಯ ಹುಡುಗಿ ಸೊಂಪಾದ ಮೈಯ ಬೆಡಗಿ ನಿನ್ನಂದಕೆ ಬೆಚ್ಚಿ ನಾ.. ನಡುಗಿ ಬೆವರಿದೆ ನಿನ್ನ ತೋಳಲಿ ಒರಗಿ ಹಾರಾಡುವ ನಿನ್ನ ಕೇಶಗಳಲಿ ಕಾಣುತಿದೆ ನನ್ನ ಸ್ವಾಗತವು ಬಿಗಿದಿಟ್ಟ ಹೃದಯವೇ ಹೇಳುತಿದೆ ಮನದೊಳಗೇ ಬಚ್ಚಿಟ್ಟ ಆಸೆಯನು ಮೃದು ಮನದ ಗೆಳತಿ...

ಅದೋ! ಅಲ್ಲಿಹುದು ಹೂವು ಅಂತಿಂತಹ ಹೂವಲ್ಲವದು, ತಾವರೆ ಹೂವು. ತನ್ನಂದದಿಂದೆಲ್ಲರ ಸೆಳೆವುದಿದು ಸಹಸ್ರ ಪತ್ರದ ಸುರಮ್ಯ ಹೂವು. ದೂರದಿಂದ ನೋಡಿದರೆ ಬಲು ರಮ್ಯ ಅಲ್ಲಿಂದಲೇ ಚೆಲುವಿನ ಸ್ವಾಗತವೀಯುವುದು ಬಳಿಗೆ ಹೋದರೆ ಮುಖವ ಮುಚ್ಚುವುದು! ಅದರಂದ ಕಂಡು...

ನಾನು ಚಿಕ್ಕಂದಿನಲ್ಲೇ ಗಾಂಧಿ ಆತ್ಮಕತೆಯ ಕೆಲವು ಭಾಗಗಳನ್ನು ಓದಿದ್ದೆ. ನನ್ನನ್ನು ಆವರಿಸಿಕೊಂಡದ್ದು ಅವರ ಸತ್ಯನಿಷ್ಠೆ. ತಪ್ಪಾಗಿದ್ದರೆ ಒಪ್ಪಿಕೊಳ್ಳುವ; ತಿದ್ದಿಕೊಳ್ಳುವ ಗುಣ. ಬೆಳೆಯುತ್ತ ಬಂದಂತೆ ನಾನು ಮಾರ್ಕ್ಸ್‌ವಾದವನ್ನು ಓದಿದೆ; ಅಂಬೇಡ್ಕರ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...