ನಡೆಯುವೊಡೆ ಎಡವಿದೊಡದು ಸಹಜ ನೋವಿನೊಡೆ ಕಲಿವ ನಲಿವುಂಟಲ್ಲಿ ನಡೆಯದವನೆಡವಿದೊಡೆ ನಡೆವವನು ನೋಯುವಾಧುನಿಕ ಸ್ಥಿತಿಯೊಳಗೆ ಕೃಷಿ ತಜ್ಞ ನೆಡವಿನಲಿ ಕೃಷಿಕ ತಾ ನೋಯುತಿಹ – ವಿಜ್ಞಾನೇಶ್ವರಾ *****...

ಕನಸು ಕಾಣುತ್ತಿದ್ದೇವೆ ಮುಂಬರುವ ದಿನಗಳಿಗಾಗಿ ಆಸೆ ಭರವಸೆಯ ಹೊರೆ ಹೊತ್ತು ತುಡಿಯುತಿದೆ ಜೀವ ಮಿಡಿಯುತಿದೆ ಜೀವ ಕಾತರಿಸುತಲಿವೆ ಕಂಗಳು ಬರುವ ನಾಳೆಗಳಿಗಾಗಿ ಎಂದು ಬರುವುದೋ ರಾಮರಾಜ್ಯ ಅಳಿಸಿ ರಾವಣರ ಸಾಮ್ರಾಜ್ಯ ಹಿಂದೆ ಇತ್ತಂತೆ ಸುಂದರ ಸುಭಿಕ್ಷಕ...

ಅಯ್ಯಾ ನಿನ್ನ ಮುಟ್ಟಿ ಮುಟ್ಟದೆನ್ನ ಮನ ನೋಡಾ ಬಿಚ್ಚಿ ಬೀಸರವಾಯಿತ್ತೆನ್ನ ಮನ ಹೊಳಲ ಸುಂಗಿಕಗನಂತೆ ಹೊದಕುಳಿಗೊಂಡಿತ್ತೆನ್ನ ಮನ ಎರಡೆಂಬುದ ಮರೆದು ಬರಡಾಗದೆನ್ನ ಮನ ನೀನು ಆನಪ್ಪ ಪರಿಯೆಂತು ಹೇಳಾ ಚೆನ್ನಮಲ್ಲಿಕಾರ್ಜುನಾ [ಬೀಸರ-ವ್ಯರ್ಥ, ಹೊಳಲ ಸುಂಕ...

ಏನುಬೇಡಲಿ ಬಂದು ಭಾರತಿಯೆ ನಿನ್ನ | ಮಾನವಂತಿಯೆ ಜನನಿ ಸಲಹು ನೀನೆನ್ನ ||ಪಲ್ಲ|| ಬಂಗಾರ ಬೇಡುವೆನೆ ಬಳಿದೆಲ್ಲ ಪೋಗಿಹುದು | ಶೃಂಗಾರ ಬೇಡುವೆನೆ ಶಿವನ ಮನೆಯು || ಮಂಗನಂತಿಹ ಮನವು ಇಂಗಿತವನರಿಯದಲೆ | ಅಂಗಹೀನನ ತೆರದಿ ತಿರುಗುವದಕಂಡು || ೧ || ಅನ್...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....