ಏನು ಮುನ್ನಿನ ಜನ್ಮದಲಿ ಪುಣ್ಯಗೈದಿರುವೆ ಇಂಚರದ ಕೊಳಲೆ ನೀನು ? ಗಾನಲೋಲನ ಕೈಯ ಸೇರಿ ಕುಣಿದಾಡಿಸಿದೆ ಕಮಲೋದ್ಧವಾಂಡವನ್ನು! ಆರೋಹಣ ಸ್ವರದಿ ಸುಪ್ತಿಯಲ್ಲಿಹ ಜಗವ ಜಾಗೃತಿಯನೊಂದಿಸಿದೆಯೊ ! ಅವರೋಹಣ ಸ್ವರದಿ ಎಚ್ಚತ್ತ ಜಗದ ಬಗೆ- ಯನ್ನು ನಿನ್ನೆಡೆಗೆಳ...

ಇಂದಿನ ವಿವಾಹ ವಿಚ್ಚೇದನ ಹೆಣ್ಣು ಗಂಡಿನ ಬರೀ ಸ್ವಾರ್ಥತನ| ನಾನೇ ಮೇಲೆಂಬ ಹುಚ್ಚುತನ ಗಂಡು ಹೆಣ್ಣಿನ ಆತುರಾತುರತನ| ನವಜೀವನದ ಅರ್‍ಥತಿಳಿಯದ ಹೆಣ್ಣು ಗಂಡಿನ ಜೀವನ ಪಥನ|| ಇನ್ನೂ ಹಸೆಯು ಆರಿರುವುದಿಲ್ಲ ಇನ್ನೂ ಚಪ್ಪರ ಸಡಿಲಿಸಿರುವುದಿಲ್ಲ| ಆಗಲೇ ವ...

ಅಕ್ಷರವೆಂದರೆ ಅಕ್ಷರವಲ್ಲ ಅರಿವಿನ ಗೂಡು ಚಿಲಿಪಿಲಿ ಎನ್ನುತ ಮೇಲಕೆ ಹಾರುವ ಹಕ್ಕಿನ ಹಾಡು ಎದೆಯಲಿ ಅರಳುವ ಸಮತೆಯ ಸಂಕಟ ಆವರಿಸಿತು ಅರಿವು ಬಾಳಲಿ ಕೆರಳುವ ಮಣ್ಣಿನ ಮಾತು ಕಟ್ಟೊಡೆಯಿತು ನೋವು ಅಕ್ಷರ ಕಲಿಯುತ ಮುರಿಯಲಿ ಮೊದಲು ಶತಮಾನದ ಸಂಕೋಲೆ ಅರಿವ...

EXPECT THE BEST AND BE PREPARED FOR THE WORST! `ಜೀವನದಲ್ಲಿ ಒಳ್ಳೆಯದನ್ನೇ ನಿರೀಕ್ಷಿಸು ಆದರೆ ಕೆಟ್ಟದ್ದನ್ನು ಎದುರಿಸಲು ತಯಾರಾಗಿರು’ ಇದೊಂದು ಅನುಭವ ಸಾರ. ಸೋಲು-ಗೆಲುವುಗಳು, ನೋವು-ನಲಿವುಗಳು ಜೀವನದ ಅವಿಭಾಜ್ಯ ಅಂಗವಾಗಿರುವಾಗ ನಮಗೆ ...

ಒಂದು ಒಂದು ಎರಡು ಸೇಬಿನ ತೋಟಕೆ ಹೊರಡು ಒಂದು ಎರಡು ಮೂರು ಹಾಕಲು ಹೆಜ್ಜೆ ನೂರು ಒಂದು ಮೂರು ನಾಲ್ಕು ಬೀರಲು ಹತ್ತು ಕಲ್ಲು ಒಂದು ನಾಲ್ಕು ಐದು ಮಾಲಿ ಓಡಿ ಬಂದು ಒಂದು ಐದು ಆರು ಬೇಲಿಯನು ಹಾರು ಒಂದು ಆರು ಏಳು ಮನೆ ಸೇರೋ ಗೀಳು ಒಂದು ಏಳು ಎಂಟು ಕಾ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...