ಒಡದು ಕರ್ಮದ ಕಟ್ಟು - ಜಗದ ಮೋಹವ ಸುಟ್ಟು ಪಡೆದು ಸತ್ಯದ ದೃಷ್ಟಿ - ಜನಕೆ ತಿಳಿವನು ಕೊಟ್ಟು ಜಡ ಶರೀರದ ಮಮತೆ - ಕಾಮ ಮದಗಳ ಬಿಟ್ಟು ನುಡಿ ನುಡಿಗಹಿಂಸೆಯನ್ನು ಬೋಧಿಸುವೆ ಕೃಪೆಯಿಟ್ಟು....
ಶಾಲೆಗಿಂದು ರಜೆಯೋ ಏನೋ ಎಳೆಯರೆದೆಯ ಹರುಷವೇನು ಹನುಮನಂತೆ ಹಾರುವನೊಬ್ಬ ಹುಟ್ಟುಡುಗೆಯ ಬಾಲನೊಬ್ಬ ಬಾಲ್ಯದಲ್ಲಿ ಇಲ್ಲ ಭಯ ಎಲ್ಲ ಜಯ ಅವನು ಇವನು ಎಲ್ಲ ಸೇರಿ ಒಂದೆ ಜಲ, ಒಂದೆ ಗಾಳಿ ಒಂದೇ ನೆಲದ ಅಂಗಳದಿ...
ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ ನೆನೆಯುತ್ತಾರೆ. ಒಂದು ಸಲವಲ್ಲ, ನೂರೆಂಟು ಸಲ...
ಓ ಕ್ರೂರಿ ನಿನ್ನ ನಾನೊಲಿದಿಲ್ಲವೇ ಹೇಗೆ ? ದುಷ್ಟಳೇ ನಿನಗಾಗಿ ನನ್ನನ್ನೆ ಮರೆತಾಗ ನಿನ್ನ ಕುರಿತೇ ನಾನು ಯೋಚಿಸುವುದಿಲ್ಲವೇ ? ನಿನ್ನ ಹಗೆ ಯಾರನ್ನು ಗೆಳೆಯ ಎಂದಿರುವೆನೆ ? ನಿನಗಾಗದವರನ್ನು ಎಂದು ಓಲೈಸಿರುವೆ ?...