ನಾನೂ ಕನಸು ಕಾಣುತ್ತೇನೆ ನನಸು ಮಾಡಿಕೊಳ್ಳುವ ಆಸೆಯಿಂದ ಆದರೆ, ನನ್ನದು ಹಗಲುಗನಸಲ್ಲ ರಾತ್ರಿಯ ಸುಂದರ, ಸುಮಧುರ ಸ್ವಪ್ನ ದಿನಾ ಒಂದೊಂದು ಕನಸು ಆಶಾಗೋಪುರವ ಹತ್ತಿ, ವಾಸ್ತವ ಲೋಕದಿಂದ ಮೇಲೇರಿ ವಿಹರಿಸಿದ ಅನುಭವ ಮುಚ್ಚಿದ ಕಣ್ಣುಗಳೊಳಗೆ ಕಾಣುವ ನಿಜ...

ಅಂಗಳದಲ್ಲೊಂದು ಗುಳ್ಳಿತ್ತು ಅಕ್ಕ ಈಗೆಲ್ಲಿ ಅದು ಮಾಯ್ವಾಯ್ತೊ ಅಕ್ಕ ಯಾರ್‍ಯಾರ ಕಟ್ಕೊಂಡು ಯಾರ್‍ಯಾರ ಬಿಟ್ಕೊಂಡು ಯಾರ್‍ಯಾರ ಮುಟ್ಕೊಂಡು ಹೋಯಿತು ಅಕ್ಕ ಗೋಳ ಗುಂಬಜದಂತೆ ಕೂತಿತ್ತು ಅಕ್ಕ ಒಳ್ಳೆ ಜಂಬದ ಕೋಳಿಯಂತೆ ಬೆಳೆದಿತ್ತು ಅಕ್ಕ ಬೆಳ್ಳಿಯ ಹಡಗ...

ಗುಡಿಯಿದಿರ ಮಣಿಗೆಯೇ, ಭೂಮಾವಿನಮ್ರತೆಯೆ, ದುರ್ಭರಾಹಂಕಾರದಮನವಿಧಿಯೇ, ಆನಂದವರಣದೊಳು ಸುಖಯಜ್ಞ ಕಲ್ಪವೇ, ತರ್ಕಧೀಧರಗರಳಶಮನಸುಧೆಯೇ, ಕೆರೆಯ ನೀರನು ಕೆರೆಗೆ ಚೆಲ್ಲಿ ವರಪಡೆವಂದ ಭರವಳಿದು ಹಗುರಪ್ಪ ಸಂ-ನ್ಯಾಸವೇ, ತನಗು ಹಿರಿದುಂಟೆಂಬ ತಿಳಿವ ಹೊಳಪಿನ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....