ಶ್ರೀಮಂತ ಬಡವರು

ಆಗರ್ಭ ಶ್ರೀಮಂತರ ಮಗಳಾಕೆ. ದಿನಾಲು ಶಾಲೆಗೆ ಕಾರಿನಲ್ಲಿ ಬಂದು ಹೋಗುವಳು. ಅವಳ ಚೆಂದದ ಪಾದಗಳಿಗೆ ಒಮ್ಮೆಯೂ ಮಣ್ಣು ತಗುಲಿರಲಿಲ್ಲ. ಮೈ ನೆಲದ ಸ್ಪರ್ಶ ಅನುಭವಿಸಿರಲಿಲ್ಲ. ಅವಳಿಗೆ ಬೇಕೆನೆಸಿದ್ದೆಲ್ಲ ಕ್ಷಣ ಮಾತ್ರದಲ್ಲಿ ದಕ್ಕುತ್ತಿತ್ತು. ಮಕಮಲ್ಲಿನ ಬಟ್ಟೆಯಂತಿತ್ತು ಅವಳ ಬದುಕು.

ಶಾಲೆಯಲ್ಲೂ ಅಷ್ಟೆ. ಅವಳಿಗೆ ಸ್ಪೆಷಲ್ಲಾಗಿ ಅಸನದ ವ್ಯವಸ್ಥೆ. ಎಲ್ಲರ ನಡವಳಿಕೆಗಳು ಅವಳಿಗೆ ಹಿತವೆನಿಸಿದ್ದವು. ಗೊಂಬೆಯಂತೆ ಕಾಣುತ್ತಿದ್ದ ಅವಳನ್ನು ಸಹಪಾಟಿಗಳು ಅದ್ಭುತವೆನ್ನುವಂತೆ ನೋಡುತ್ತಿದ್ದರು, ಮಾತನಾಡಲು ತವಕಿಸುತ್ತಿದ್ದರು.

ಒಂದಿನ ಒಬ್ಬ ಅಧ್ಯಾಪಕರು “ನಮ್ಮ ದೇಶದ ಬಡವರು” ಎಂಬ ವಿಷಯ ಕುರಿತು ಪ್ರಬಂಧ ಬರೆದುಕೊಂಡು ಬರಲು ಹೇಳಿದರು. ಮರುದಿನ ಎಲ್ಲರ ಪ್ರಬಂಧಗಳು ಅಧ್ಯಾಪಕರ ಕೈ ಸೇರಿದ್ದವು. ಎಲ್ಲ ವಿದ್ಯಾರ್ಥಿಗಳಿಗಿಂತ ಶ್ರೀಮಂತ ಹುಡುಗಿಯ ಪ್ರಬಂಧ ವಿಶೇಷವಾಗಿತ್ತು.

ಆಕೆ ಸುಂದರ ಅಕ್ಷರಗಳಲ್ಲಿ ನೀಟಾಗಿ ಬರೆದಿದ್ದಳು.

“ನಮ್ಮ ದೇಶದ ಬಡವರು ದೊಡ್ಡ ಬಂಗಲೆಗಳಲ್ಲಿ ವಾಸಿಸುವರು. ಅವರು ಕಾರಿನಲ್ಲಿ ಓಡಾಡುವರು. ಟಬ್‌ನಲ್ಲಿ ಸ್ನಾನ ಮಾಡುವರು. ಡೈನಿಂಗ್ ಟೇಬಲ್ ಮೇಲೆ ಕುಳಿತು ಟಿಫಿನ್, ಊಟ ಮಾಡುವರು. ಬ್ರೆಡ್ ಟೋಸ್ಟ್, ಬೆಣ್ಣೆ ದೋಸೆ, ಸಮೋಸಾ, ಪೇಡೆ, ಬರ್ಫಿ, ಗುಲಾಬ್ ಜಾಮೂನು ತಿನ್ನುವರು. ಹೋಳಿಗೆ, ತುಪ್ಪ, ಚಪಾತಿ, ಚಿತ್ರಾನ್ನ ಕೆನೆ ಮೊಸರು ಊಟ ಮಾಡುವರು. ಮುಂಜಾನೆ ಮತ್ತು ಸಂಜೆ ಗಟ್ಟಿಯಾದ ಹಾಲಿನ ಚಹ ಕುಡಿಯುವರು. ಸೇಬು, ಬಾಳೆಹಣ್ಣು, ದಾಳಂಬರಿ, ಕಿತ್ತಳೆ, ಮೋಸಂಬಿ, ಮಾವಿನ ಹಣ್ಣು, ದ್ರಾಕ್ಷಿ ಹಣ್ಣು ತಿನ್ನುವರು. ಬಿಸಲೇರಿ ನೀರು ಕುಡಿಯುವರು. ಟಿ.ವಿ. ನೋಡುವರು, ಮೆತ್ತನೆಯ ಮಂಚದ ಮೇಲೆ ಸೊಳ್ಳೆಪರದೆ ಕಟ್ಟಿಕೊಂಡು ಮಲಗುವರು. ನಸುಕಿನಲ್ಲೆದ್ದು ವಾಕಿಂಗ್ ಹೋಗುವರು, ಜಾಗಿಂಗ್ ಮಾಡುವರು….. ಇತ್ಯಾದಿ ಇತ್ಯಾದಿಯಾಗಿ ಪ್ರಬಂಧ ಮುಂದುವರಿದಿತ್ತು.

ಅಧ್ಯಾಪಕರಿಗೆ ಸುಸ್ತೋ ಸುಸ್ತು.

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೋಕಾಲಿ ಆಡೋಣ ಬರ್ರೆ
Next post ಕೋಲು ಕೋಲಿನ ಕೋಲು

ಸಣ್ಣ ಕತೆ

 • ಬಸವನ ನಾಡಿನಲಿ

  ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

 • ಲೋಕೋಪಕಾರ!

  ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

 • ಕನಸುಗಳಿಗೆ ದಡಗಳಿರುದಿಲ್ಲ

  ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

 • ರಣಹದ್ದುಗಳು

  ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

 • ಜೋತಿಷ್ಯ

  ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…