ಸೊರಾದ ಕೋಳಿಗಳು

ಸೊರಾದ ಕೋಳಿಗಳು ಕೊಕ್ಕೊಕ್ಕೋ ಕೂಗುವುದಿಲ್ಲ
ಬೆಳಗಾಯಿತೆಂದು ಹೇಳುವುದಿಲ್ಲ

ಸೊರಾದ ಕೋಳಿಗಳು ತತ್ತಿಗಳನ್ನು ಇಡುವುದಿಲ್ಲ
ಕಾಳುಗಳನ್ನು ಹೆಕ್ಕುವುದಿಲ್ಲ

ಸೊರಾದ ಕೋಳಿಗಳು ಎಲ್ಲಿಗೂ ಹೋಗುವುದಿಲ್ಲ
ಕತ್ತುಗಳನ್ನೂ ಎತ್ತುವುದಿಲ್ಲ

ಸೊರಾದ ಕೋಳಿಗಳಿಗೆ ಏನೋ ರೋಗ ಬ೦ದಿದೆ
ತುಂಬಾ ಹೆದರಿದಂತಿವೆ

ಸೊರಾದ ಕೋಳಿಗಳು ಮರದಿಂದ ಮಾಡಿದುವು
ಮಳೆಯಲ್ಲಿ ತೊಯ್ಯುವುವು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿಧಿ ಬರಹ
Next post ಬಣ್ಣ

ಸಣ್ಣ ಕತೆ

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…