ಪಾರಿವಾಳದ ಆಟ ಛಂದಾ

ಪಾರಿವಾಳದ ಆಟ ಛಂದಾ ಅದು
ಹಾರುತ ಬಂದರೆ ಮನಸಿಗಾನಂದ ||ಪ||

ಹಿಂದಿನ ರೆಕ್ಕೆಯ ಕಿತ್ತು
ಮುಂದೆ ಬರುವಂಥ ಪುಚ್ಚದ ಗರಿಗಳ್ಯಾವತ್ತು
ಸಂದಿ ಸಂದಿಗೆ ಶುಭವಿತ್ತು ಆದು
ಕಂದಿ ಕುಂದದಾಂಗ ಸಲುಹಲು ಗೊತ್ತು ||೧||

ಮ್ಯಾಲಕ್ಕ ಹೊಡಿ ಮೂರು ಲಾಗಾ ಸಾಲು
ತೇಲುವ ಡವಲು ಫಲದ್ಯೆವ ಭೋಗಾ
ಶಿಶುನಾಳಧೀಶನ ಯೋಗಾ ರಸಿಕರ
ಹಾಡಿದು ಹಸನಾದ ಹೊಸ ಪಕ್ಷಿರಾಗಾ ||೨||

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರಿಮುಖ ಅಮೇರಿಕಾಕ್ಕೆ ಹೋದದ್ದು
Next post ನಗೆ ಡಂಗುರ – ೩೪

ಸಣ್ಣ ಕತೆ

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…