ಕೆಣಕದಿರಿ ಕವಿಯ

ಕವಿಗಳನು ಕೆಣಕದಿರಿ ದಮ್ಮಯ್ಯ ನೀವು
ಕವಿಯಲ್ಲದವರಿಂಗೆ ಗೊತ್ತೆ ಕವಿತನವು

ಭಳಿ ಭಳಿರೆ ಭಳಿರೆಂದು ಹೊಗಳದಿರಿ ಸಾಕು
ಹೊಗಳಿಕೆಯು ತೆಗಳಿಕೆಯು ಕವಿಗೇನುಬೇಕು

ಆವ ಭಾವಗಳವನ ಮುತ್ತಿಕೊಳುತಿಹುವೊ
ಆವ ಕ್ರಾಂತಿಗಳೆದ್ದು ಅಟ್ಟಿಬರುತಿಹುವೊ

ಆವ ರಾಜ್ಯವಸುತ್ತಿ ಸುತ್ತಿ ಬಳಲುವನೊ
ಆವ ಸಾಹಸದೊಳಗೆ ತೊಡಗಿ ದಣಿಯುವನೋ

ಅರಿವರಾರವನೊಳಿಹ ಸ್ವಚ್ಛಂದ ಸ್ಫೂರ್ತಿಯ
ಕೆಣಕದಿರಿ ಎಂದಿಹಳು ಜನಕಜೆಯು ಕವಿಯ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಲ್ಲ ದಾರಿಗೊಂದೆ ಗುರಿ
Next post ಗ್ರಾಮ ಒಂದು ಭೇಟಿ

ಸಣ್ಣ ಕತೆ

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…