ಗಳಿಗೆಬಟ್ಟಲ ತಿರುವುಗಳಲ್ಲಿ – ೧೩

ಹಸಿಹಿಟ್ಟು ತಟ್ಟಿತಟ್ಟಿ
ಒಂದೇ ಪದರದ
ರೊಟ್ಟಿ ಹಾಳೆ.
ಕಾವಲಿಯ ಮೇಲೆ
ಬೇಯಲಿಕ್ಕಿದ್ದೇ
ಉಬ್ಬಿದೆರಡು ಪದರ.
ರೊಟ್ಟಿ ಒಂದೇ
ಪದರವೆರಡು.
ಆಂತರ್ಯ ನಿರ್ವಾತ
ಬಹಿರ್ಮುಖ ಸಾಂಗತ್ಯ
ಹಸಿವೆಗೆ ಅನೂಹ್ಯ.


Previous post ಸೂರ್ಯದ್ವೀಪ
Next post ಹೊಸ ಬಗೆಯಲಿ ಬರಲಿ

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…