ಮಂಗಳಾರತಿ ಎತ್ತಿ ಮಂತ್ರಶಕ್ತಿಯರು

ಮಂಗಳಾರತಿ ಎತ್ತಿ ಮಂತ್ರಶಕ್ತಿಯರು
ಅಂಗಜ ಗುರುಲಿಂಗ ಪರಭಕ್ತಿಯರು || ಪ ||

ಬೈಲುಮಂಟಪದೊಳು ಬ್ರಹ್ಮದ ನೆಲೆಯೊಳು
ಬೈಲಾಗಿ ನಿಂತು ಬ್ರಹ್ಮಾ೦ಡ ಬೆಳಕಿನೊಳು || ೧ ||

ಬಾಲಚಂದಿರಮುಖಿಯರು ಬಂದು ಬೆರೆದು
ಮೇಲಾದ ಮಂದಿರದೊಳು ನಿಂದು ನಲಿದು || ೨ ||

ಒಳಹೊರಗಿನ ಸೂತ್ರ ಬಳಿವಂದು ತಳಗಿ
ಕಳವರಜ್ಯೋತಿ ಸದ್ಗುರುವಿಗೆ ಬೆಳಗಿ || ೩ ||

ನುಡಿದು ಪ್ರಣಮನಾದ ನಡುನಾಡಿ ಸ್ವರದಿ
ಪೊಡವಿಯೊಳು ಶಿಶುನಾಳಪತಿಗೆ ವಿಸ್ತರದಿ || ೪ ||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಲವೇ… ಭಾಗ – ೪
Next post ಸೆಪ್ಟೆಂಬರ – ೧೧

ಸಣ್ಣ ಕತೆ

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…