ಹೇಳಲೇಬೇಕಾದ ಮಾತುಗಳು

ಹೇಳಬಾರದು, ಅಂದುಕೊಂಡರೂ
ದಿಗ್ಗನೆ ಎದೆಗೆ ಒದ್ದು
ದುಡುದುಡು ಓಡಿಬಂದು
ಗಂಟಲಲ್ಲಿ ಗಕ್ಕನೆ ಕೂತು
ಹೊರಳಿ-ತೆವಳಿ ನಾಲಿಗೆಯ
ತುದಿಗೆ ಬಂದು ನಿಂತಾಗ
ಕಿಕ್ಕಿರಿದ ಸಭಾಂಗಣದಲ್ಲಿ
ಹೆಜ್ಜೆತಪ್ಪಿದ ನರ್ತಕಿಯಂತೆ
ಗೆಜ್ಜೆ ಧ್ವನಿಗಳೂ ಅಸ್ಪಷ್ಟ
ಹಾವ ಭಾವಗಳು ಮಾತ್ರ
ಕಂಗಳಲ್ಲಿ ವ್ಯಕ್ತ.


Previous post ಸಾವಸುದ್ದಿ
Next post ಕಾಲನ ಕರೆ

ಸಣ್ಣ ಕತೆ

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…