ಮನುಷ್ಯರಂತೆ ಬಾಳೋಣ

ಒಂದು ವೃಕ್ಷದ ಕೆಳಗೆ ಇಬ್ಬರು ಪ್ರೇಮಿಗಳು ಕುಳಿತ್ತಿದ್ದರು. ಅವರು ಒಬ್ಬರಿಗೊಬ್ಬರು ಅಂತರಂಗವನ್ನು ಒಪ್ಪಿಸಿ “ಹಕ್ಕಿಯಂತೆ ಹಾಯಾಗಿರೋಣ.” ಅಂದುಕೊಂಡರು.

ವೃಕ್ಷದ ಮೇಲಿನ ಗೂಡನ್ನು ಸೂಕ್ಷ್ಮವಾಗಿ ನೋಡಿದ ಹುಡುಗಿ ಹೇಳಿದಳು- “ಒಂದು ಗಂಡು ಹಕ್ಕಿ ಜೊತೆ ಎರಡು ಹೆಣ್ಣು ಹಕ್ಕಿಗಳು ಇವೆ. ಅದು ಹಕ್ಕಿಗೆ ಪ್ರಕೃತಿ ಸಹಜತೆ. ನಾವು ಹಕ್ಕಿಯಂತೆ ಆಗುವುದು ಬೇಡ. ಮನುಷ್ಯರಂತೆ ಒಬ್ಬರಿಗಾಗಿ ಒಬ್ಬರು ಪ್ರೀತಿ ಇಂದ ಬಾಳೋಣ” ಎಂದಳು.
*****

Previous post ಆಟ
Next post ಗಳಿಗೆಬಟ್ಟಲ ತಿರುವುಗಳಲ್ಲಿ – ೪೯

ಸಣ್ಣ ಕತೆ

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…