ಆಗು ಕಾರಣ ಪುರುಷ ನೀಂ

ನನ್ನ ಗೆಳೆಯಾ ಚಿನ್ನ ತೆನೆಯಾ
ಆಗು ಕಾರಣ ಪುರುಷ ನೀಂ ||

ತೋಳ ಬಲವು ತೋಳವಾಗದೆ
ಬಿದ್ದ ಮಕ್ಕಳ ಎತ್ತಲಿ
ಬುದ್ದಿ ಬಲವು ಬೂದಿಯಾಗದೆ
ಬೆಂದ ಬಡವರ ಅಪ್ಪಲಿ

ಹಸಿರು ಆಗೈ ಹೂವು ಆಗೈ
ಹಣ್ಣು ಹಂಪಲ ಸುರಿಯು ನೀ
ಜಂಗು ಕಬ್ಬಿಣವಾಗಬೇಡೈ
ದ್ರಾಕ್ಷಿ ಗೊಂಚಲವಾಗು ನೀ

ನಿನ್ನ ಕಣ್ಣಲಿ ಬೆಂಕಿ ಚಿಮ್ಮದೆ
ಮಧುರ ಮಲ್ಲಿಗೆ ಸುರಿಯಲಿ
ನಿನ್ನ ಎದೆಯಲ್ಲಿ ಚೋಳು ಆಡದೆ
ಕಾಮಧೇನು ಕರೆಯಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಮನ್ವಯತೆ
Next post ನೆನಪು ಮತ್ತು ಮರೆವು

ಸಣ್ಣ ಕತೆ

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಮೇಷ್ಟ್ರು ಮುನಿಸಾಮಿ

    ಪ್ರಕರಣ ೮ ಮಾರನೆಯ ದಿನ ಬೆಳಗ್ಗೆ ರಂಗಣ್ಣನು, ‘ಶಂಕರಪ್ಪ ! ನೀವೂ ಗೋಪಾಲ ಇಬ್ಬರೂ ನೆಟ್ಟಗೆ ಜನಾರ್ದನಪುರಕ್ಕೆ ಹಿಂದಿರುಗಿ ಹೋಗಿ, ನನ್ನ ಸಾಮಾನುಗಳನ್ನೆಲ್ಲ ಜೋಕೆಯಿಂದ ತೆಗೆದುಕೊಂಡು ಹೋಗಿ.… Read more…