ಎಡಿ ಒಯ್ಯುನು ಬಾರೆ ದೇವರಿಗೆ
ಎಡಿ ಒಯ್ಯುನು ಬಾರೆ || ಪ ||

ಎಡಿ ಒಯ್ಯುನು ಬಾ
ಮಡಿಹುಡಿಯಿಂದಲಿ
ಪೊಡವಿಗಧಿಕ ಎನ್ನ
ಒಡಿಯ ಅಲ್ಲಮನಿಗೆ || ಆ. ಪ. ||

ಕರ್ಮದ ಕುರಿ ಕೊಯ್ಸಿ ಅದಕೆ
ಗುರುಮಂತ್ರವ ಜಪಿಸಿ
ಅರುವಿನ ಎಡಿಯನು
ಕರದೊಳು ಪಿಡಕೊಂಡು
ಸ್ಥಿರವಾದ ದೇವರು
ಇರುವ ಮಸೀದೆಗೆ || ೧ ||

ಆದಿ ಅಲ್ಲಮ ಗುರುವು ದೊಡ್ಡ
ಪಾದಗಟ್ಟಿ ಏರು
ದಿಮಿ ದಿಮಿ ಸದ್ಗುರು
ಆದಿ ಶಿಶುನಾಳ
ಸಾಧು ಇರುವ ಬ್ರಹ್ಮ-
ನಾದ ಮಸೀದಗೆ || ೨ ||
*****