ಒಳಗೆ ಬೇಕು ಅನ್ನ
ಹೊರಗೆ ಬೇಕು ಚಿನ್ನ
ಏನು ಇದರ ಮರ್‍ಮ
ಹೊರಗೆ ಕಿಸಿವ ಹಲ್ಲು
ಒಳಗೆ ಮಸೆವ ಕಲ್ಲು
ಇದು ಯಾವ ಧರ್‍ಮ
ತಾನೆ ಬೆಳೆದ ಅತ್ತಿಹಣ್ಣ
ನೋಡಿ
ನಾಚಿ ಕುಳಿತ ಬ್ರಹ್ಮ
*****