ತೂಗು ಸತ್ಯದ ಗಾನಕೆ

ಬನ್ನಿ ಪಡೆಯಿರಿ ನನ್ನಿ ಮುಡಿಯಿರಿ
ಚಿನ್ನ ಚಲುವಿನ ಚಂದಕೆ ||

ಪಕ್ಷಿ ಕಂಠದ ಗಾನ ತೋಟದಿ
ಮುಗಿಲ ನೀಲಿಮೆ ನಕ್ಕಳು
ವೃಕ್ಷ ತೊಂಗಲ ಹಸಿರ ಮಂಚದಿ
ಯಕ್ಷಿ ಹೂರಮೆ ಹೂಕ್ಕಳು

ಕೇಳು ಕೂಜನ ಶಿವನ ಭಾಜನ
ಉಣ್ಣು ವಾಣಿಯ ಭೋಜನ
ಎದ್ದು ನಿಲ್ಲೈ ಜಿದ್ದು ಹೇಳೈ
ಭವ್ಯ ಭವಿಷದ ಯೋಜನ

ನೀನೆ ಪಾತ್ರಾ ಶಿವನ ಸೂತ್ರಾ
ವಿಶ್ವ ಶಾಂತಿಯ ಮಂತ್ರಕೆ
ಕಟ್ಟು ಕಾಯಕ ಕಟ್ಟು ತೊಟ್ಟಿಲು
ತೂಗು ಸತ್ಯದ ಗಾನಕೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೀಮಂತಿನಿ
Next post ಮೊದಲಿನ ಹಾಗಲ್ಲ ಈಗ

ಸಣ್ಣ ಕತೆ

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…